Maruti Suzuki: 7.51 ಲಕ್ಷ.. 28 Km ಮೈಲೇಜ್.. 5 ಸೀಟರ್, ಎಲ್ಲರ ಫೇವರಿಟ್ ಇದು.. ಪ್ರತಿದಿನ 400 ಕಾರು ಮಾರಾಟ!
ಭಾರತದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯ ನೆಕ್ಸಾ (NEXA) ಡೀಲರ್‌ಶಿಪ್‌ನಲ್ಲಿ ಖರೀದಿಗೆ ದೊರೆಯುವ ಬಲೆನೊ (Baleno) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಧಾರಿತ ಫ್ರಾಂಕ್ಸ್ (FRONX) ಕಾಂಪ್ಯಾಕ್ಟ್ ಎಸ್‌ಯುವಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, ಈ ಕಾರಿನ ಮಾರಾಟದಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಏಪ್ರಿಲ್ 24, 2023ರಲ್ಲಿ ನೂತನ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯನ್ನು ಬಿಡುಗಡೆ ಮಾಡಲಾಗಿತ್ತು. ಅಂದಿನಿಂದ ಈ ಕಾರು ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಮೊದಲ 10 ತಿಂಗಳಲ್ಲಿ 1 ಲಕ್ಷ ಯುನಿಟ್, 14 ತಿಂಗಳಲ್ಲಿ 1.5 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲನ್ನು ಸಾಧಿಸಲಾಗಿತ್ತು. ಸೆಪ್ಟೆಂಬರ್‌ಗೆ (2024) ಫ್ರಾಂಕ್ಸ್ ಎಸ್‌ಯುವಿ ಮಾರಾಟಕ್ಕೆ ಬಂದು 17 ತಿಂಗಳಾಗುತ್ತಿದ್ದು, ಬರೋಬ್ಬರಿ 2 ಲಕ್ಷ ಯುನಿಟ್ ಮಾರಾಟವಾಗಿವೆ ಎನ್ನಲಾಗಿದೆ.

ಕಳೆದ ಹಣಕಾಸು ವರ್ಷದಲ್ಲಿ (FY2024) 134,735 ಯುನಿಟ್ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಗಳನ್ನು ಮಾರಾಟ ಮಾಡಲಾಗಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ (FY2025 - ಏಪ್ರಿಲ್‌ನಿಂದ ಆಗಸ್ಟ್ 2024) 59,967 ಯುನಿಟ್ ಕಾರುಗಳನ್ನು ಮಾರಾಟಗೊಳಿಸಲಾಗಿದೆ. ಅಂದರೆ ತಿಂಗಳಿಗೆ 11,993 ಯುನಿಟ್ (ಪ್ರತಿದಿನ ಸರಾಸರಿ 400 ಯುನಿಟ್) ಫ್ರಾಂಕ್ಸ್ ಎಸ್‌ಯುವಿಗಳು ಮಾರಾಟವಾಗುತ್ತಿವೆ. ಒಟ್ಟು 1,94,702 ಯುನಿಟ್ ಕಾರುಗಳನ್ನು ಗ್ರಾಹಕರು ಖರೀದಿಸಿದ್ದಾರೆ.
ಈ ಸಂಖ್ಯೆಯನ್ನು ಗಮನಿಸಿದಾಗ ಆಗಸ್ಟ್ (2024) ಅಂತ್ಯದಲ್ಲಿಯೇ 2 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲನ್ನು ಮುಟ್ಟುವ ಎಲ್ಲ ಸಾಧ್ಯತೆಗಳಿದ್ದವು. ಸ್ವಲ್ಪದರಲ್ಲಿಯೇ ಅದು ತಪ್ಪಿತ್ತು. ಸೆಪ್ಟೆಂಬರ್ ಎರಡನೇ ವಾರವೇ ಬಾಕಿ ಉಳಿದಿದ್ದ 5,298 ಯುನಿಟ್ ಫ್ರಾಂಕ್ಸ್ ಎಸ್‌ಯುವಿಗಳು ಮಾರಾಟವಾಗಿವೆ ಎಂದು ಅಂದಾಜಿಸಲಾಗಿದೆ. ಆದಾಗ್ಯೂ ಕಂಪನಿ ಕಡೆಯಿಂದ ಈ ಕುರಿತಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ದೇಶೀಯವಾಗಿ ಹೊಚ್ಚ ಹೊಸ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಸಿಗ್ಮಾ ಮತ್ತು ಡೆಲ್ಟಾ ಪ್ಲಸ್ (ಒ) ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ನೆಕ್ಸಾ ಬ್ಲೂ, ಅರ್ಥನ್ ಬ್ರೌನ್ ಹಾಗೂ ಆರ್ಕ್ಟಿಕ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಫ್ರಾಂಕ್ಸ್ ಎಸ್‌ಯುವಿ 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಇದೆ.
ಮಾರುತಿ ಸುಜುಕಿ ಫ್ರಾಂಕ್ಸ್ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications