Fronx: ಮಾರುತಿ ಸುಜುಕಿ ಫ್ರಾಂಕ್ಸ್ ಟರ್ಬೊ ವೆಲಾಸಿಟಿ ಎಡಿಷನ್ ಬಿಡುಗಡೆ, ನಿರೀಕ್ಷೆಗೂ ಮೀರಿದ ವಿಶೇಷತೆಗಳಿವೆ?
ಭಾರತದ ಮಾರುಕಟ್ಟೆಯಲ್ಲಿ ಹೋದ ವರ್ಷ ಬಿಡುಗಡೆಗೊಂಡ ಬಲೆನೊ ಆಧಾರಿತ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuk Fronx), ಎಸ್‌ಯುವಿ ಕೆಲವೇ ತಿಂಗಳಲ್ಲಿ ದೊಡ್ಡ ಮಟ್ಟದ ಹೆಸರನ್ನು ಮಾಡಿತು. ಈ ಕಾರಿನ ಆಕರ್ಷಕ ವೈಶಿಷ್ಟ್ಯ ಮತ್ತು ವಿನ್ಯಾಸ ಹೆಚ್ಚಿನ ಸಂಖ್ಯೆಯ ಗ್ರಾಹಕರನ್ನು ಸೆಳೆಯಿತು.
ಫ್ರಾಂಕ್ಸ್ ಎಸ್‌ಯುವಿಯ ಜನಪ್ರಿಯತೆಗೆ ಸಾಕ್ಷಿ ಎಂಬಂತೆ ಮಾರುತಿ ಸುಜುಕಿ ಕಂಪನಿಯು ಈ ಕಾರಿನ ಮಾರಾಟದಲ್ಲಿ ಈಚೆಗೆ 1 ಲಕ್ಷ ಯುನಿಟ್ ಮೈಲಿಗಲ್ಲನ್ನು ಸಾಧಿಸಿತು. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಟರ್ಬೊ ವೆಲಾಸಿಟಿ ಎಡಿಷನ್ (Maruti Suzuki Fronx Turbo Velocity Edition) ಬಿಡುಗಡೆಗೊಂಡಿದೆ. ಡೆಲ್ಟಾ ಪ್ಲಸ್, ಜಿಟಾ, ಆಲ್ಫಾ ರೂಪಾಂತರಗಳಿಗೆ ಹೋಲಿಸಿದರೆ, ಈ ಮಾದರಿ ರೂ.43,000 ಹೆಚ್ಚುವರಿ ದರವನ್ನು ಹೊಂದಿದೆ.

ನೂತನ ಕಾರು ಪವರ್‌ಟ್ರೇನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆಯನ್ನು ಹೊಂದಿಲ್ಲ. ಆದರೆ, ಹೊರ ಮತ್ತು ಒಳಭಾಗದ ವಿನ್ಯಾಸದಲ್ಲಿ ಕೆಲವೊಂದು ನವೀಕರಣವನ್ನು ಪಡೆದುಕೊಂಡಿದೆ. ಹೊಸದಾದ ಗ್ರೇ & ಬ್ಲ್ಯಾಕ್ ಸ್ಟೈಲಿಂಗ್ ಕಿಟ್, ಡೋರ್ ವೈಸರ್ಸ್, ಒಆರ್‌ವಿಎಂ ಕವರ್ಸ್, ಹೆಡ್‌ಲ್ಯಾಂಪ್ ಗಾರ್ನಿಶ್, ಬಾಡಿ ಸೈಡ್ ಮೋಲ್ಡಿಂಗ್, ಇಲ್ಯುಮಿನೇಟೆಡ್ ಡೋರ್ ಸಿಲ್ ಗಾರ್ಡ್ಸ್, ಸ್ಪಾಯ್ಲರ್ ಎಕ್ಸ್‌ಟೆಂಡರ್, ವೀಲ್ ಆರ್ಚ್ ಗಾರ್ನಿಶ್, ಫ್ರಂಟ್ ಗ್ರಿಲ್ ಗಾರ್ನಿಶ್ ಮತ್ತು ಇಂಟೀರಿಯರ್ ಸ್ಟೈಲಿಂಗ್ ಕಿಟ್ ಅನ್ನು ಹೊಂದಿದೆ.
ಪ್ರಸ್ತುತ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ, ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು, 3 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ (ಶಕ್ತಿ),148 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್/ 6- ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಮತ್ತೊಂದು 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ 90 ಪಿಎಸ್ ಪವರ್, 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಸಿಎನ್‌ಜಿ ಕಿಟ್ ಪಡೆದಿರುವ ಕಾರು, 1.2-ಲೀಟರ್ ಎಂಜಿನ್ ಹೊಂದಿದ್ದು, 77.5 ಪಿಎಸ್ ಪವರ್, 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಲಭ್ಯವಿದೆ.
ಮಾರುತಿ ಸುಜುಕಿ ಫ್ರಾಂಕ್ಸ್, 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, 5 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು. ಈ ಕಾರು, 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್ ಅನ್ನು ಪಡೆದಿದೆ.

ಮಾರುತಿ ಸುಜುಕಿಯು 'ಫ್ರಾಂಕ್ಸ್ ಟರ್ಬೊ ವೆಲಾಸಿಟಿ ಎಡಿಷನ್' ಬಿಡುಗಡೆಗೊಳಿಸಿರುವುದು ಗ್ರಾಹಕರಿಗೆ ಸಂತಸವನ್ನು ತಂದಿದೆ. ಈಗಾಗಲೇ ಅಧಿಕ ಸಂಖ್ಯೆಯಲ್ಲಿ ಈ ಕಾರು ಮಾರಾಟಗೊಳುತ್ತಿದ್ದು, ನವೀನವಾದ ಬದಲಾವಣೆಯನ್ನು ಹೊಂದಿರುವುದರಿಂದ ಹೆಚ್ಚಿನ ಖರೀದಿದಾರರು ಇಷ್ಟಪಟ್ಟು ಕೊಂಡುಕೊಳ್ಳಬಹುದು. ಈ ಮಾದರಿಗೆ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂಬುದು ಮುಂಬರುವ ದಿನಗಳಲ್ಲಿ ತಿಳಿಯಲಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications