Maruti Suzuki: ಈ ಜನಪ್ರಿಯ ಕಾರಿಗೆ ಭಾರಿ ರಿಯಾಯಿತಿ.. 5 ಆಸನ ಆಯ್ಕೆ, 10.99 ಲಕ್ಷ ಬೆಲೆ.. 27 ಕಿ.ಮೀ ಮೈಲೇಜ್!

ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವೈಶಿಷ್ಟ್ಯ ಹೊಂದಿರುವ ಹಲವು ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ದೇಶಾದ್ಯಂತ ಆಯ್ದ ಮಾರುತಿ ಸುಜುಕಿ ನೆಕ್ಸಾ (NEXA) ಡೀಲರ್‌ಶಿಪ್‌ಗಳು ಈ ಆಗಸ್ಟ್‌ನಲ್ಲಿ ವಿವಿಧ ಕಾರುಗಳ ಖರೀದಿ ಮೇಲೆ ಭಾರಿ ಹಣಕಾಸಿನ ಪ್ರಯೋಜನವನ್ನು ಘೋಷಣೆ ಮಾಡಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗ್ರ್ಯಾಂಡ್ ವಿಟಾರಾ (Grand Vitara) ದೊಡ್ಡ ರಿಯಾಯಿತಿ ಹೊಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಪ್ರಮುಖ ಎಸ್‌ಯುವಿಯಾಗಿದ್ದು, ರೂಪಾಂತರ (ವೇರಿಯೆಂಟ್)ಗಳನ್ನು ಅವಲಂಬಿಸಿ ರೂ.36000 ದಿಂದ ರೂ.1,25,000ವರೆಗೆ ರಿಯಾಯಿತಿಯನ್ನು ಒಳಗೊಂಡಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ.

Maruti Suzuki Grand Vitara Car Have Big Discount In August 2024 Details

ಹೊಚ್ಚ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ಸಿಗ್ಮಾ, ಡೆಲ್ಟಾ, ಜಿಟಾ, ಜಿಟಾ ಪ್ಲಸ್ ಮತ್ತು ಆಲ್ಫಾ ಒಳಗೊಂಡಂತೆ ಹಲವು ರೂಪಾಂತರಗಳನ್ನು ಹೊಂದಿದೆ. ಆಕರ್ಷಕವಾದ ವಿನ್ಯಾಸ (ಡಿಸೈನ್) ಕೂಡ ಪಡೆದಿದ್ದು, ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು ಎರಡು ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 19.38 ರಿಂದ 27.97 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.6 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ.

Maruti Suzuki Grand Vitara Car Have Big Discount In August 2024 Details

ಮಾರುತಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಗ್ರ್ಯಾಂಡ್ ವಿಟಾರಾ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್‌, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಈ ಕಾರಿಗೆ ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್, ಎಂಜಿ ಆಸ್ಟರ್ ಮತ್ತು ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿಗಳು ದೊಡ್ಡ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಗ್ರ್ಯಾಂಡ್ ವಿಟಾರಾದ ಈ ರಿಯಾಯಿತಿ ಪ್ರಯೋಜನ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, August 8, 2024, 14:04 [IST]
English summary
Maruti suzuki grand vitara car have big discount august 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+