Maruti Suzuki: ಗ್ರ್ಯಾಂಡ್ ವಿಟಾರಾ ಕಾರನ್ನು ಖರೀದಿಸಬೇಕೇ.. ಕಡಿಮೆ EMI ಆಯ್ಕೆ, 27 ಕಿ.ಮೀ ಮೈಲೇಜ್

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯು ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರಿನ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಪೆಟ್ರೋಲ್ ಚಾಲಿತ ಸಿಗ್ಮಾ ರೂ.13.71 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದು ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುವ ಎಸ್‌ಯುವಿಯಾಗಿಯೂ ಹೊರಹೊಮ್ಮಿದೆ. ಇನ್ನುಳಿದ ಪೆಟ್ರೋಲ್ ರೂಪಾಂತರಗಳಾದ ಡೆಲ್ಟಾ ರೂ.15.20 ಲಕ್ಷ, ಡೆಲ್ಟಾ ಎಟಿ ರೂ.16.93 ಲಕ್ಷ, ಜಿಟಾ ರೂ.17.44 ಲಕ್ಷ ಹಾಗೂ ಆಲ್ಫಾ ರೂ.19.29 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ.

Maruti Suzuki Grand Vitara Car On Road Price And Emi Details

ಹಾಗೆಯೇ ಆಲ್ಫಾ ಡಿಟಿ ರೂ.19.49 ಲಕ್ಷ, ಆಲ್ಫಾ ಎಟಿ ರೂ.21.02 ಲಕ್ಷ, ಆಲ್ಫಾ ಎಡಬ್ಲ್ಯೂಡಿ ರೂ.21.14 ಲಕ್ಷ, ಆಲ್ಫಾ ಎಟಿ ಡಿಟಿ ರೂ.21.22 ಲಕ್ಷ, ಆಲ್ಫಾ ಎಡಬ್ಲ್ಯೂಡಿ ಡಿಟಿ ರೂ.21.34 ಲಕ್ಷ, ಜಿಟಾ ಪ್ಲಸ್ ಹೈಬ್ರಿಡ್ ಸಿವಿಟಿ ರೂ.22.90 ಲಕ್ಷ ಮತ್ತು ಜಿಟಾ ಪ್ಲಸ್ ಹೈಬ್ರಿಡ್ ಸಿವಿಟಿ ಡಿಟಿ ರೂ.23.10 ಲಕ್ಷ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ.

ಆಲ್ಫಾ ಪ್ಲಸ್ ಹೈಬ್ರಿಡ್ ಸಿವಿಟಿ ರೂ.24.75 ಲಕ್ಷ, ಟಾಪ್ ಮಾಡೆಲ್ (ಗರಿಷ್ಠ ಶ್ರೇಣಿ) ಆಲ್ಫಾ ಪ್ಲಸ್ ಹೈಬ್ರಿಡ್ ಸಿವಿಟಿ ಡಿಟಿ ರೂ.25.17 ಲಕ್ಷ, ಹೆಚ್ಚಿನ ಗ್ರಾಹಕರು ಖರೀದಿಸುವ ಸಿಎನ್‌ಜಿ ಚಾಲಿತ ಡೆಲ್ಟಾ (ಬೇಸ್ ವೇರಿಯೆಂಟ್) ರೂ.16.37 ಲಕ್ಷ ಹಾಗೂ ಜಿಟಾ ಸಿಎನ್‌ಜಿ ಮಾದರಿಯು ರೂ.18.61 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ.

Maruti Suzuki Grand Vitara Car On Road Price And Emi Details

ನೀವು ಈ ಕಾರನ್ನು ರೂ.5 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿದರದಲ್ಲಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.18,412 ಇಎಂಐ ಕಟ್ಟಬೇಕು. ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ, ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು 1.5-ಲೀಟರ್ ಪೆಟ್ರೋಲ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್ ನೊಂದಿಗೂ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 19.38 - 27.97 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.6 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.

Maruti Suzuki Grand Vitara Car On Road Price And Emi Details

ನೂತನ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ FWD (ಫ್ರಂಟ್ ವೀಲ್ ಡ್ರೈವ್) ಮತ್ತು AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, April 29, 2024, 13:38 [IST]
English summary
Maruti suzuki grand vitara car on road price and emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+