Maruti Suzuki: ಎಲ್ಲರಿಗೂ ಇಷ್ಟ ಈ ಕಾರು..! 2,00,000 ಯುನಿಟ್ ಮಾರಾಟ ಸನಿಹಕ್ಕೆ, ರೂ.10.99 ಲಕ್ಷ ಬೆಲೆ
ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಹಳ್ಳಿಯಿಂದ ದಿಲ್ಲಿವರೆಗೆ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಲ್ಟೊ ಕೆ10, ಸೆಲೆರಿಯೊ, ಬಲೆನೊ, ಫ್ರಾಂಕ್ಸ್, ವ್ಯಾಗನ್ಆರ್, ಇಗ್ನಿಸ್ ಹಾಗೂ ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಂಪನಿಯು ಮಾರಾಟಗೊಳಿಸುವ ಗ್ರ್ಯಾಂಡ್ ವಿಟಾರಾ (Grand Vitara) ಜನಪ್ರಿಯ ಮಿಡ್-ಸೈಜ್ ಎಸ್‌ಯುವಿ (mid-size SUV) ಆಗಿದೆ. ಸದ್ಯ ಈ ಕಾರಿನ ಮಾರಾಟದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಬನ್ನಿ.. ಆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯೋಣ.
ದೇಶೀಯವಾಗಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿಯನ್ನು ಸೆಪ್ಟೆಂಬರ್ 26, 2022ರಂದು ಬಿಡುಗಡೆ ಮಾಡಲಾಗಿತ್ತು. ಅಂದಿನಿಂದಲೇ ದೊಡ್ಡ ಭಾರೀ ಬೇಡಿಕೆ ಪಡೆದಿದ್ದು, ಕೆಲವೇ 22 ತಿಂಗಳಲ್ಲಿ 2 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲನ್ನು ದಾಟಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಮಾರುತಿ ಸುಜುಕಿಯು ಜೂನ್ (2024) ಅಂತ್ಯದವರೆಗೆ 199,550 ಯುನಿಟ್ ಗ್ರ್ಯಾಂಡ್ ವಿಟಾರಾ ಕಾರಗಳನ್ನು ಮಾರಿದೆ. 2 ಲಕ್ಷ ಯುನಿಟ್ ಮುಟ್ಟಲು ಕೇವಲ 450 ಯುನಿಟ್‌ಗಳನ್ನು ಮಾರಾಟ ಮಾಡಬೇಕಾಗಿದ್ದು, ತಿಂಗಳಾರಂಭದಲ್ಲೇ (ಜುಲೈ) ಆ ಗುರಿಯನ್ನು ಸಹ ಮುಟ್ಟಿದೆ ಎನ್ನಲಾಗಿದೆ. ಪ್ರಸ್ತುತ ಖರೀದಿಗೆ ದೊರೆಯುವ ಹೊಚ್ಚ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ನೂತನ ಗ್ರ್ಯಾಂಡ್ ವಿಟಾರಾ ಕಾರು ಸಿಗ್ಮಾ, ಡೆಲ್ಟಾ, ಜಿಟಾ, ಜಿಟಾ ಪ್ಲಸ್ ಹಾಗೂ ಆಲ್ಫಾ ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ ಆಕರ್ಷಕವಾದ ವಿನ್ಯಾಸ (ಡಿಸೈನ್) ಪಡೆದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ಕೂಡ ಲಭ್ಯವಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರು ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೂ ಖರೀದಿಗೆ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಮಾದರಿಗಳು 19.38 ರಿಂದ 27.97 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 26.6 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.
ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚರಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿರಲಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್, ಎಂಜಿ ಆಸ್ಟರ್ ಮತ್ತು ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications