26 ಕಿ.ಮೀ ಮೈಲೇಜ್‌ನ ಈ ಮಾರುತಿ ಕಾರಿನ ನಿರ್ವಹಣೆ ವೆಚ್ಚ ಎಷ್ಟು ಗೊತ್ತಾ? ಬೈಕ್‌ಗಿಂತ ಕಡಿಮೆ!
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಆಗಿದೆ. ಈ ಬ್ರ್ಯಾಂಡ್ ವಿಶ್ವಾಸಾರ್ಹತೆ, ಕೈಗೆಟಕುವ ಬೆಲೆ ಮತ್ತು ಕಡಿಮೆ ನಿರ್ವಹಣಾ ವೆಚ್ಚಗಳಿಂದಾಗಿ ಹೆಚ್ಚು ಖ್ಯಾತಿ ಗಳಿಸಿದೆ. ದೇಶಿಯ ಮಾರುಕಟ್ಟೆಯಲ್ಲಿ ಎಸ್‍ಯುವಿಗಳಿಗೆ ಭಾರೀ ಬೇಡಿಕೆಯನ್ನು ಹೊಂದಿರುವುದರಿಂದ, ಎಸ್‍ಯುವಿಯು ವಿಭಾಗವು ಅತಿಯಾದ ಸ್ಪರ್ಧೆಯಿಂದ ಕೂಡಿದೆ. ಎಸ್‍ಯುವಿ ವಿಭಾಗದ ಮಿಡ್ ಸೈಜ್ ಎಸ್‍ಯುವಿಗಳ ವಿಭಾಗದಲ್ಲಿ ಹ್ಯುಂಡೈ ಕ್ರೆಟಾ ಹಲವು ವರ್ಷಗಳಿಂದ ಪಾರುಪತ್ಯ ಸಾಧಿಸುತ್ತಿತ್ತು. ಇದರಿಂದ ಮಾರುತಿ ಸುಜುಕಿಯು ಗ್ರ್ಯಾಂಡ್ ವಿಟಾರಾ (Maruti suzuki Grand Vitara) ಮಾರುಕಟ್ಟೆಗೆ ತಂದು ಸುಂಟರಗಾಳಿಯನ್ನು ಎಬ್ಬಿಸಿತು.
ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಸ್‌ಯುವಿಗಳಲ್ಲಿ ಒಂದಾದ ಗ್ರ್ಯಾಂಡ್ ವಿಟಾರಾ ದಾಖಲೆಯ ವೇಗದಲ್ಲಿ 2 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳ ಮೈಲಿಗಲ್ಲನ್ನು ಸಾಧಿಸಿತು. ಮಾರುತಿಯು ಮೈಲ್ಡ್ ಹೈಬ್ರಿಡ್ ಮತ್ತು ಸ್ಟ್ರಾಂಗ್ ಹೈಬ್ರಿಡ್ ಆವೃತ್ತಿಗಳೊಂದಿಗೆ ಎಸ್‍ಯುವಿಯ ಸಿಎನ್‌ಜಿ ರೂಪಾಂತರವನ್ನು ಸಹ ನೀಡುತ್ತಿದೆ. ಸಾಮಾನ್ಯವಾಗಿ ಮಾರುತಿ ಕಾರುಗಳು ತುಂಬಾ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರುತ್ತವೆ. ಈ ಮಾರುತಿ ಗ್ರ್ಯಾಂಡ್ ವಿಟಾರಾದ ನಿರ್ವಹಣಾ ವೆಚ್ಚ ಎಷ್ಟು ಆಗಬಹುದು ಎಂದು ಹಲವರಿಗೆ ಕುತೂಹಲವಿರಬಹುದು.

ಇದೀಗ ಮಾರುತಿ ಗ್ರ್ಯಾಂಡ್ ವಿಟಾರಾ ಮಾಲೀಕರು ಇನ್‌ಸ್ಟಾಗ್ರಾಮ್ ಪುಟದಲ್ಲಿ ಅರುಣ್‌ಪನ್‌ವಾರ್ಕ್ಸ್ ವಾಹನದ ನಿರ್ವಹಣಾ ವೆಚ್ಚದ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ. ತನ್ನ ಮಾರುತಿ ಗ್ರ್ಯಾಂಡ್ ವಿಟಾರಾ ಸಿಎನ್‌ಜಿ ಎಸ್‍ಯುವಿಒಂದು ವರ್ಷದಲ್ಲಿ 80,000 ಕಿಮೀ ಕ್ರಮಿಸಿದೆ ಎಂದು ಮಾಲೀಕರು ಬಹಿರಂಗಪಡಿಸಿದ್ದಾರೆ. ಈ ಅವಧಿಯಲ್ಲಿ ತಾನು ನಿರ್ವಹಣಾ ವೆಚ್ಚದಲ್ಲಿ ಕಡಿಮೆ ಮೊತ್ತವನ್ನು ಮಾತ್ರ ಮಾಡಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಈ ಅವಧಿಯಲ್ಲಿ ಟೈರ್ ಅಥವಾ ಬ್ರೇಕ್ ಪ್ಯಾಡ್ ಬದಲಾಯಿಸುವ ಅಗತ್ಯ ಬಂದಿಲ್ಲ ಎಂದಿದ್ದಾರೆ. ಇಷ್ಟು ಕಿಲೋಮೀಟರ್ ಓಡಿಸಿದ ಕಾರು ಇದ್ಯಾ ಎಂದು ನೋಡಿದರೆ ಅನೇಕರಿಗೆ ಆಶ್ಚರ್ಯವಾಗಬಹುದು. ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ನಿಯಮಿತ ಸೇವೆಗೆ ಕೇವಲ 7000-8000 ರೂ ವೆಚ್ಚವಾಗುತ್ತದೆ ಎಂದು ಮಾಲೀಕರು ಹೇಳಿಕೊಂಡಿದ್ದಾರೆ. ಈ ಎಸ್‍ಯುವಿ ಸರ್ವಿಸ್ 7000-8000 ರೂ ವೆಚ್ಚವಾಗುತ್ತದೆ ಎಂದು ಮಾಲೀಕರು ಹೇಳಿದ್ದಾರೆ.

ಸತ್ಯ ಎಂದು ಖಚಿತಪಡಿಸಿಕೊಳ್ಳಲು ಸರ್ವಿಸ್ ಸಮಯದಲ್ಲಿ ಯಾವುದೇ ಭಾಗಗಳನ್ನು ಬದಲಾಯಿಸಲಾಗಿಲ್ಲ ಎಂದು ಸಾಬೀತುಪಡಿಸಲು ಕಾರ್ ಮಾಲೀಕರು ಎಲ್ಲಾ ಸರ್ವಿಸ್ ರಶೀದಿಗಳನ್ನು ಇಟ್ಟುಕೊಂಡಿದ್ದಾರೆ. ಒಟ್ಟಾರೆಯಾಗಿ ಅವರು ಕಾರಿನ ಮಾಲೀಕತ್ವದ ಅನುಭವದಿಂದ ತೃಪ್ತರಾಗಿದ್ದಾರೆ. ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ.
ಈ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂ ಅನ್ನು ಒಳಗೊಂಡಿದೆ. ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ಅನ್ನು ನೀಡಿದೆ.
ಇನ್ನು ಈ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತಿದೆ. ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ಅನ್ನು ಒದಗಿಸುತ್ತದೆ.
ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್), ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್ (ಇಬಿಡಿ), ಸೆಂಟ್ರಲ್ ಲಾಕಿಂಗ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್‌ಪಿ), ಹಿಲ್ ಅಸಿಸ್ಟ್, ಐಸೊಫಿಕ್ಸ್ ಚೈಲ್ಡ್ ಸೀಟ್‌ಗಳು, ರಿವರ್ಸ್ ಕ್ಯಾಮೆರಾ ಮತ್ತು ಟೈರ್‌ನಂತಹ ಫೀಚರ್ಸ್ ಗಳೊಂದಿಗೆ ಬರುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications