ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗೆ ರೂ.75,000 ರಿಯಾಯಿತಿ, 10 ಲಕ್ಷ ಆರಂಭಿಕ ಬೆಲೆ.. ಭರ್ಜರಿ ವೈಶಿಷ್ಟ್ಯಗಳು

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಪ್ರಸಿದ್ದಿ ಪಡೆದಿದೆ. 2022ರ ಸೆಪ್ಟೆಂಬರ್‌ನಲ್ಲಿ ಕಂಪನಿ ಬಿಡುಗಡೆಗೊಳಿಸಿದ ಗ್ರ್ಯಾಂಡ್ ವಿಟಾರಾ (Grand Vitara) ಎಸ್‌ಯುವಿ, ಇವತ್ತಿಗೂ ದೊಡ್ಡ ಮಟ್ಟದ ಬೇಡಿಕೆಯನ್ನು ಹೊಂದಿದ್ದು, ಈ ಫೆಬ್ರವರಿ (2024) ಗ್ರ್ಯಾಂಡ್ ವಿಟಾರಾ ಖರೀದಿ ಮೇಲೆ ಭಾರೀ ರಿಯಾಯಿತಿ ನೀಡಲಾಗಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara), ಸ್ಟ್ರಾಂಗ್ ಹೈಬ್ರಿಡ್ ರೂಪಾಂತರಗಳು ಗರಿಷ್ಠ ರೂ.75,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿವೆ. ಅದರಲ್ಲಿ ರೂ.25,000 ನಗದು ರಿಯಾಯಿತಿ (Cash Discount), ರೂ.50,000 ವಿನಿಮಯ ಬೋನಸ್ (Exchange Bonus) ಸೇರಿವೆ. ಮೈಲ್ಡ್ ಹೈಬ್ರಿಡ್ ಮಾದರಿಗಳು ರೂ.50,000 ವರೆಗೆ ಡಿಸ್ಕೌಂಟ್ ಆಫರ್ ಪಡೆದಿದ್ದು, ರೂ.15,000 ನಗದು ರಿಯಾಯಿತಿ, ರೂ.35,000 ವಿನಿಮಯ ಬೋನಸ್ ಒಳಗೊಂಡಿವೆ.

Maruti Suzuki Grand Vitara Get Upto Rs.75,000 Discounts In February 2024

ಈ ರಿಯಾಯಿತಿ ಸೌಲಭ್ಯಗಳು ಫೆಬ್ರವರಿ 29ರವರೆಗೆ ಲಭ್ಯವಿರಲಿದೆ. ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್, ರೂಪಾಂತರ (ವೇರಿಯೆಂಟ್) ಬಣ್ಣ (ಕಲರ್), ಎಂಜಿನ್ ಆಧರಿಸಿಯೂ ಡಿಸ್ಕೌಂಟ್ ಆಫರ್ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿ ನಿಮ್ಮ ಸಮೀಪದ ಶೋರೂಂ ಸಂಪರ್ಕಿಸಿ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ರೂ.10.70 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ 3 ಪವರ್ ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಪ್ರಮುಖವಾಗಿ 1.5-ಲೀಟರ್ ಪೆಟ್ರೋಲ್ ಸ್ಟ್ರಾಂಗ್ ಹೈಬ್ರಿಡ್ (ಎಲೆಕ್ಟ್ರಿಕ್) ಎಂಜಿನ್ ಮತ್ತು ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. ಸಿಎನ್‌ಜಿ ಕಿಟ್ ಪಡೆದಿರುವ ಕಾರು ಸಹ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಎಂಜಿನ್ ಪಡೆದಿದೆ. ಆದರೆ, 87.83 ಪಿಎಸ್ ಪವರ್, 121.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ.

Maruti Suzuki Grand Vitara Get Upto Rs.75,000 Discounts In February 2024

ಈ ಕಾರು, ರೂಪಾಂತರಗಳ ಅನ್ವಯ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ 2WD (ಟೂ ವೀಲ್ ಡ್ರೈವ್), AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. ಮೈಲೇಜ್ ವಿಚಾರವಾಗಿ ಮಾತನಾಡುವುದಾದರೆ, ಪೆಟ್ರೋಲ್ ರೂಪಾಂತರಗಳು 19.38 ಕೆಎಂಪಿಎಲ್ - 25.45 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 26.6 ಕಿ.ಮೀ/ಕೆಜಿ ಇಂಧನ ದಕ್ಷತೆಯನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ ಸಾಕಷ್ಟು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಹಾಗೂ ಹೆಡ್ಸ್ - ಅಪ್ ಡಿಸ್ಪ್ಲೇಯನ್ನು ಪಡೆದಿದೆ.

ಸುರಕ್ಷತೆ ದೃಷ್ಟಿಯಿಂದ ಗ್ರ್ಯಾಂಡ್ ವಿಟಾರಾ 6 ಏರ್‌ಬ್ಯಾಗ್ಸ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾ, ಹಿಲ್-ಡಿಸೆಂಟ್ ಕಂಟ್ರೋಲ್, ISOFIX ಚೈಲ್ಡ್ ಸೀಟ್ ಆಂಕರ್ಸ್ ಅನ್ನು ಹೊಂದಿದೆ. ಈ ಕಾರಿಗೆ ಹೋಂಡಾ ಎಲಿವೇಟ್, ಹುಂಡೈ ಕ್ರೆಟಾ ದೂಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, February 5, 2024, 18:11 [IST]
English summary
Maruti suzuki grand vitara get upto rs 75000 discounts in february 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+