Maruti Suzuki: ಈ ಕಾರಿಗೆ ಮನಸೋತ ಗ್ರಾಹಕರು.. 2,00,000 ಯುನಿಟ್ ಮಾರಾಟ, ರೂ.10.99 ಲಕ್ಷ ಬೆಲೆ

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್, ಸ್ವಿಫ್ಟ್ ಬಲೆನೊ, ಫ್ರಾಂಕ್ಸ್, ಜಿಮ್ನಿ ಸೇರಿದಂತೆ ಹತ್ತಾರು ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಕಂಪನಿಯ ಗ್ರ್ಯಾಂಡ್ ವಿಟಾರಾ (Grand Vitara) ಜನಪ್ರಿಯ ಎಸ್‌ಯುವಿಯಾಗಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, ಈ ಕಾರಿನ ಮಾರಾಟದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಮಾರುತಿ ಸುಜುಕಿ, ಬರೋಬ್ಬರಿ 2 ಲಕ್ಷ ಯುನಿಟ್ ಗ್ರ್ಯಾಂಡ್ ವಿಟಾರಾ ಎಸ್‌ಯುವಿಗಳನ್ನು ಮಾರಾಟ ಮಾಡಿರುವುದಾಗಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 26, 2022ರಂದು ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿತ್ತು. 2 ವರ್ಷ ಕಳೆಯುವ ಮೊದಲು, ಅಂದರೆ 23 ತಿಂಗಳಲ್ಲಿಯೇ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಲಾಗಿದೆ. ವಿಶೇಷವಾಗಿ ಕಳೆದ 10 ತಿಂಗಳಲ್ಲಿ 1 ಲಕ್ಷ ಯುನಿಟ್ ಮಾರಾಟ ಮಾಡಲಾಗಿದೆ.

Maruti Suzuki Grand Vitara Suv Crosses 2 Lakh Unit Sales Milestone Details

ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ, ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಸಿಗ್ಮಾ, ಡೆಲ್ಟಾ, ಜಿಟಾ, ಜಿಟಾ ಪ್ಲಸ್, ಆಲ್ಫಾ ಸೇರಿದಂತೆ ಹಲವು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಕೂಡ ಪಡೆದಿದೆ.

ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡ್ಯೂರ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಜನರು ಸುಲಭವಾಗಿ ಕುಳಿದುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Maruti Suzuki Grand Vitara Suv Crosses 2 Lakh Unit Sales Milestone Details

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ 1.5-ಲೀಟರ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 19.38 - 27.97 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿಗಳು 26.6 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.

ಈ ಕಾರು ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್, ಇಎಸ್‍ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್, ಹೋಂಡಾ ಎಲಿವೇಟ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಗಳಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 29, 2024, 15:42 [IST]
English summary
Maruti suzuki grand vitara suv crosses 2 lakh unit sales milestone details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+