Maruti Suzuki: ಈ ಪ್ರಖ್ಯಾತ ಕಾರಿಗೆ 1 ಲಕ್ಷವರೆಗೆ ರಿಯಾಯಿತಿ.. 5-ಸೀಟರ್, 27 Km ಮೈಲೇಜ್.. ಬೆಲೆ ಎಷ್ಟು?
ದೇಶಾದ್ಯಂತ ಅತಿಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುವ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಹೊರಹೊಮ್ಮಿದೆ. ಕಂಪನಿಯ ನೆಕ್ಸಾ (NEXA) ಡೀಲರ್‌ಶಿಪ್‌ನಲ್ಲಿ ಖರೀದಿಗೆ ಲಭ್ಯವಿರುವ ಗ್ರ್ಯಾಂಡ್ ವಿಟಾರಾ (Grand Vitara), ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಅಕ್ಟೋಬರ್‌ನಲ್ಲಿ ಇದೇ ಗ್ರ್ಯಾಂಡ್ ವಿಟಾರಾ ಕಾರು ಭರ್ಜರಿ ರಿಯಾಯಿತಿ ಪ್ರಯೋಜನಗಳನ್ನು ಪಡೆದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿಯ ಸಿಗ್ಮಾ ರೂಪಾಂತರ ರೂ.56,100, ಜಿಟಾ, ಆಲ್ಪಾ, ಡೆಲ್ಟಾ ರೂಪಾಂತರಗಳು ರೂ.86,100 ಹಾಗೂ ಸಿಎನ್‌ಜಿ ಚಾಲಿತ ರೂಪಾಂತರಗಳು ರೂ.66,100ವರೆಗೆ ರಿಯಾಯಿತಿಯನ್ನು ಹೊಂದಿವೆ. ಇ-ಸಿವಿಟಿ ಚಾಲಿತ ರೂಪಾಂತರ ರೂ.1,06,100ವರೆಗೆ ಹಣಕಾಸು ಪ್ರಯೋಜನ ಪಡೆದಿದೆ. ವಿಶೇಷವಾಗಿ ಈ ರಿಯಾಯಿತಿಗಳು ಅಕ್ಟೋಬರ್ 31ರವರೆಗೆ ಮಾತ್ರ ಮಾನ್ಯವಾಗಿರಲಿದೆ.

ದೇಶೀಯವಾಗಿ ಸಿಗುವ ಹೊಚ್ಚ ಹೊಸ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ಹೊರಭಾಗ ಹಾಗೂ ಒಳಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್ ಮತ್ತು ಗ್ರ್ಯಾಂಡ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ (ಕಲರ್) ಲಭ್ಯವಿದೆ. ಈ ಕಾರು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಲಗೇಜ್ ಸಾಗಿಸಲು 373 ಲೀಟರ್‌ನ ಬೂಟ್ ಸ್ಪೇಸ್ ಕೂಡ ಇದೆ.
ನೂತನ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರು, ವಿವಿಧ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್, 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಮತ್ತೊಂದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಎಂಜಿನ್, 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 1.5-ಲೀಟರ್ ಸಿಎನ್‌ಜಿ ಎಂಜಿನ್, 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 122 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ನೂತನ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.38 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ಹಾಗೂ ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

ಈ ಕಾರು, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಒಟ್ಟಾರೆಯಾಗಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಪೋಕ್ಸ್‌ವ್ಯಾಗನ್ ಟೈಗನ್ ಮತ್ತು ಸಿಟ್ರನ್ ಸಿ3 ಏರ್‌ಕ್ರಾಸ್ ಕಾರುಗಳಿಗೆ ಪ್ರಬಲವಾಗಿ ಸ್ಪರ್ಧೆಯೊಡ್ಡುತ್ತಿರುವ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಅತ್ಯುತ್ತಮವಾಗಿರುವ ಎಸ್‌ಯುವಿಯಾದೆ. ಈ ತಿಂಗಳು ಭಾರಿ ರಿಯಾಯಿತಿ ಹೊಂದಿರುವುದರಿಂದ ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟ ಖರೀದಿಸಬಹುದು.
ನಿಮ್ಮ ಗಮನಕ್ಕೆ.. ನಾವಿಲ್ಲಿ ಬೆಂಗಳೂರಿನ ನೆಕ್ಸಾ ಡೀಲರ್‌ಶಿಪ್‌ನ ರಿಯಾಯಿತಿ ಕುರಿತಂತೆ ಮಾತ್ರ ವಿವರಿಸಿದ್ದೇವೆ. ಈ ಹಣಕಾಸು ಪ್ರಯೋಜನ ನಗರದಿಂದ ನಗರಕ್ಕೆ ರೂಪಾಂತರಗಳನ್ನು ಅವಲಂಭಿಸಿ, ಬೇರೆಯಾಗಿರಬಹುದು. ಹೆಚ್ಚಿನ ವಿವರಗಳಿಗಾಗಿ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications