Maruti Suzuki: ಬೈಕ್‌ನಂತೆ ಮೈಲೇಜ್.. ಪ್ರಮುಖ ನಗರಗಳಲ್ಲಿ ಈ ಜನಪ್ರಿಯ ಕಾರಿನ ಆನ್-ರೋಡ್ ಬೆಲೆ ಎಷ್ಟು ಗೊತ್ತಾ?
ದೇಶದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಆಲ್ಟೊ, ಸೆಲರಿಯೊ, ಸ್ವಿಫ್ಟ್, ಫ್ರಾಂಕ್ಸ್, ಬಲೆನೊ, ವ್ಯಾಗನ್ಆರ್, ಇಗ್ನಿಸ್, ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುತ್ತಿದೆ. ಸದ್ಯ ಕಂಪನಿಯ ಜನಪ್ರಿಯ ಎಸ್‌ಯುವಿಯಾಗಿರುವ ಗ್ರ್ಯಾಂಡ್ ವಿಟಾರಾ (Grand Vitara) ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಇಲ್ಲಿ ಬೆಂಗಳೂರು ಸೇರಿದಂತೆ ವಿವಿಧ ರಾಜ್ಯದ ಪ್ರಮುಖ ನಗರಗಳಲ್ಲಿ ಈ ಕಾರು ಹೊಂದಿರುವ ಆನ್-ರೋಡ್ ಬೆಲೆಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಕಾರಿನ ಟಾಪ್ ಎಂಡ್ ಮಾಡೆಲ್ (ಗರಿಷ್ಠ ಶ್ರೇಣಿ) ಆಗಿರುವ 'ಆಲ್ಫಾ ಪ್ಲಸ್ ಹೈಬ್ರಿಡ್ ಸಿವಿಟಿ ಡಿಟಿ' ರೂ.24.92 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಇದೇ ಮಾದರಿಯು ರೂ.23.65 ಲಕ್ಷ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೂ.22.91 ಲಕ್ಷ, ಮುತ್ತಿನ ನಗರಿ ಹೈದರಾಬಾದ್‌ನಲ್ಲಿ ರೂ.24.56 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ.

ನೂತನ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಒಪ್ಯುಲೆಂಟ್ ರೆಡ್, ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡ್ಯೂರ್ ಗ್ರೇ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.
ಈ ಕಾರು ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಸಿಗುತ್ತದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್ ಪಡೆದಿರುವ ಆವೃತ್ತಿಗಳು, ಕ್ರಮವಾಗಿ 103 ಪಿಎಸ್ ಹಾಗೂ 137 ಪಿಎಸ್ ಪವರ್ (ಶಕ್ತಿ) ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿವೆ. ಮತ್ತೊಂದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಪಡೆದಿರುವ ಸಿಎನ್‌ಜಿ ಚಾಲಿತ ಮಾದರಿಯು, 93 ಪಿಎಸ್ ಪವರ್ ಹಾಗೂ 122 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಹೊಸ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನೊಂದಿಗೂ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಮಾದರಿಗಳು 19.38 - 27.97 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 26.6 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ. ಪ್ರವಾಸದ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 373 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.
ಈ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಗೆ ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್, ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್, ಹ್ಯುಂಡೈ ಕ್ರೆಟಾ, ಎಂಜಿ ಆಸ್ಟರ್, ಟೊಯೊಟಾ ಅರ್ಬನ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ಕಾರು ಆಲ್ಫಾ ಪ್ಲಸ್ ಹೈಬ್ರಿಡ್ ಸಿವಿಟಿ ಡಿಟಿ ಮಾತ್ರವಲ್ಲದೆ, ಸಿಗ್ಮಾ, ಡೆಲ್ಟಾ, ಝೀಟಾ ಪ್ಲಸ್ ರೂಪಾಂತರದ ಆಯ್ಕೆಯಲ್ಲಿ ಸಿಗಲಿದ್ದು, ಅದಕ್ಕೆ ತಕ್ಕಂತೆ ಆನ್-ರೋಡ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications