Maruti Suzuki: ಈ ಕಾರು ಎಲ್ಲರಿಗೂ ಅಚ್ಚುಮೆಚ್ಚು.. ಬೈಕ್‌ಗೂ ಮೀರಿಸುವ ಮೈಲೇಜ್, ಬೇರೆ ವಿಶೇಷತೆಗಳೇನು?

ದೇಶದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಗ್ರ್ಯಾಂಡ್ ವಿಟಾರಾ (Grand Vitara) ಎಸ್‌ಯುವಿಯು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ, ರೂಪಾಂತರ ಹಾಗೂ ಬಣ್ಣಗಳು: ದೇಶೀಯ ಮಾರುಕಟ್ಟೆಯಲ್ಲಿ ನೂತನ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ ಪ್ಲಸ್, ಆಲ್ಫಾ ಒಳಗೊಂಡಂತೆ ವಿವಿಧ ರೂಪಾಂತರಗಳ ಆಯ್ಕೆಯನ್ನು ಹೊಂದಿದ್ದು, ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡ್ಯೂರ್ ಗ್ರೇ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.

Maruti Suzuki Grand Vitara Suv Why People Buy Here The Reason Mileage Like Bikes

ಎಂಜಿನ್ ಮತ್ತು ಕಾರ್ಯಕ್ಷಮತೆ: ನೂತನ ಕಾರು ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್ ಪಡೆದಿರುವ ಮಾದರಿಗಳು, ಕ್ರಮವಾಗಿ 103 ಪಿಎಸ್ ಮತ್ತು 137 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹೊರಹಾಕುತ್ತವೆ.

ಮತ್ತೊಂದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಪಡೆದಿರುವ ಸಿಎನ್‌ಜಿ ಚಾಲಿತ ಕಾರು, 93 ಪಿಎಸ್ ಪವರ್ ಮತ್ತು 122 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಗ್ರ್ಯಾಂಡ್ ವಿಟಾರಾದ ವಿವಿಧ ಆವೃತ್ತಿಗಳು 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನೊಂದಿಗೂ ಲಭ್ಯವಿವೆ. ಪೆಟ್ರೋಲ್ ಮಾದರಿಗಳು 19.38 - 27.97 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ (ವೇರಿಯೆಂಟ್)ಗಳು 26.6 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ.

Maruti Suzuki Grand Vitara Suv Why People Buy Here The Reason Mileage Like Bikes

ಆಸನ ಆಯ್ಕೆ ಮತ್ತು ವೈಶಿಷ್ಟ್ಯಗಳು: ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ಗ್ರ್ಯಾಂಡ್ ವಿಟಾರಾ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ ಹಾಗೂ ಹಿಲ್ ಡಿಸೆಂಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರತಿಸ್ಪರ್ಧಿ ಕಾರುಗಳು: ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಗೆ ಪೋಕ್ಸ್‌ವ್ಯಾಗನ್ ಟೈಗನ್, ಸ್ಕೋಡಾ ಕುಶಾಕ್, ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್, ಹ್ಯುಂಡೈ ಕ್ರೆಟಾ, ಎಂಜಿ ಆಸ್ಟರ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಸಿಟ್ರನ್ ಸಿ3 ಏರ್‌ಕ್ರಾಸ್. ಮಹೀಂದ್ರಾ ಸ್ಕಾರ್ಪಿಯೊ ಕ್ಲಾಸಿಕ್ ಕಾರುಗಳು ದೊಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, May 26, 2024, 11:00 [IST]
English summary
Maruti suzuki grand vitara suv why people buy here the reason mileage like bikes
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+