ಹೊಸ ಕಾರು ಖರೀದಿಸಬೇಕೇ? ಆಕರ್ಷಕ ಮಾರುತಿ ಇಗ್ನಿಸ್ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಇಗ್ನಿಸ್ ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿಯ (Maruti Suzuki) ವಿಶಿಷ್ಟ ವಿನ್ಯಾಸ. ಟಾಲ್‌ಬಾಯ್ ನಿಲುವು ಮತ್ತು ಆಕರ್ಷಕ ಲುಕ್ ಅನ್ನು ಹೊಂದಿರುವ ಕಾರ್ ಆಗಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರನ್ನು ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತಿದೆ. ಇದೀಗ ಈ ಜನಪ್ರಿಯ ಇಗ್ನಿಸ್ ಕಾರಿನ ಮೇಲೆ ಭರ್ಜರಿ ರಿಯಾಯಿತಿಗಳನ್ನು ಘೋಷಿಸಿದೆ. ಇದರಿಂದ ಈ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಕಾರನ್ನು ಖರೀದಿಸಲು ಪ್ಲಾನ್ ಮಾಡುವರಿಗೆ ಉತ್ತಮ ಅವಕಶವಾಗಿದೆ.

ಮಾರುತಿ ಸುಜುಕಿ ಇಗ್ನಿಸ್ AMT ರೂಪಾಂತರಗಳ ಮೇಲೆ ರೂ 58,100 ಮೌಲ್ಯದ ಪ್ರಯೋಜನಗಳೊಂದಿಗೆ ಲಭ್ಯವಿದೆ. ಕಡಿಮೆ ನಗದು ಪ್ರಯೋಜನಗಳ ಕಾರಣದಿಂದಾಗಿ ಮ್ಯಾನುಯಲ್ ರೂಪಾಂತರಗಳ ಮೇಲೆ 53,100 ರೂ.ವರೆಗೆ ರಿಯಾಯಿತಿಯನ್ನು ಪಡೆಯುತ್ತವೆ. ಈ ಮಾರುತಿ ಸುಜುಕಿ ಇಗ್ನಿಸ್ ಕಾರು ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿದೆ.

Maruti Suzuki Ignis

ಈ ಮಾರುತಿ ಇಗ್ನಿಸ್ ಕಾರು ಇದೀಗ ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್‌ಪಿ) ಯನ್ನು ಕೂಡ ಪಡೆದುಕೊಂಡಿದೆ. ಈ ಸುರಕ್ಷತಾ ಫೀಚರ್ಸ್ ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ. ಈ ಮೂಲಕ ಸುರಕ್ಷತಾ ವಿಷಯದಲ್ಲಿ ಈ ಕಾರು ಸುಧಾರಣೆಯನ್ನು ಕಂಡಿದೆ. ಈ ಮಾರುತಿ ಇಗ್ನಿಸ್ ಕಾರು ಮುಂಬರುವ E20 ಮತ್ತು ರಿಯಲ್ ಡ್ರೈವಿಂಗ್ ಎಮಿಷನ್ (RDE) ಮಾನದಂಡಗಳನ್ನು ಅನುಸರಿಸುತ್ತದೆ.

ಹೊಸ ಮಾರುತಿ ಸುಜುಕಿ ಇಗ್ನಿಸ್ ಕಾರಿನಲ್ಲಿ ಹೊಸ ಸುರಕ್ಷತಾ ಫೀಚರ್ಸ್ ಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಪಡೆದುಕೊಂಡಿಲ್ಲ. ಮಾರುತಿ ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಗೊಳಿಸಲಾಯಿತು. ಬಿಡುಗಡೆಯಾದ ಆರಂಭದಲ್ಲಿ ಇಗ್ನಿಸ್ ಕಾರು ಬಲೆನೊ ಹ್ಯಾಚ್‌ಬ್ಯಾಕ್‌ನಷ್ಟು ದೊಡ್ಡ ಯಶಸ್ಸನ್ನು ಸಾಧಿಸಲು ಸಾಧ್ಯವಾಗಲಿಲ್ಲ.

Maruti Suzuki Ignis

ಆದರೆ ನಂತರದ ದಿನಗಳಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿತು. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಇಗ್ನಿಸ್ ಕಾರು ಸಿಲ್ಕಿ ಸಿಲ್ವರ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ವೈಟ್, ಲ್ಯೂಸೆಂಟ್ ಆರೆಂಜ್, ಲ್ಯೂಸೆಂಟ್ ಆರೆಂಜ್ ವಿಥ್ ಬ್ಲ್ಯಾಕ್ ರೂಫ್, ಟರ್ಕಿಷ್ ಬ್ಲೂ, ನೆಕ್ಸಾ ಬ್ಲೂ, ಬ್ಲ್ಯಾಕ್ ರೂಫ್ ನೊಂದಿಗೆ ನೆಕ್ಸಾ ಬ್ಲೂ, ಮತ್ತು ಸಿಲ್ವರ್ ರೂಫ್ ನೊಂದಿಗೆ ನೆಕ್ಸಾ ಬ್ಲೂ ಬಣ್ಣಗಳ ಆಯ್ಜೆಯಲ್ಲಿ ಲಭ್ಯವಿದೆ.

ಈ ಮಾರುತಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12ಬಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಮಾರುತಿ ಸುಜುಕಿ ಇಗ್ನಿಸ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ, ಎಬಿಎಸ್-ಇಬಿಡಿ, ಡ್ಯುಯಲ್ ಏರ್‌ಬ್ಯಾಗ್ ಹಾಗೂ ಡ್ರೈವರ್ ಸೇಫ್ಟಿ ಅಲರ್ಟ್ ಗಳನ್ನು ನೀಡಲಾಗಿದೆ.

Maruti Suzuki Ignis

ಮಾರುತಿ ಸುಜುಕಿ ಕಂಪನಿಯ ಈ ಇಗ್ನಿಸ್ ಹ್ಯಾಚ್‌ಬ್ಯಾಕ್‌ ಕಾರಿನ ಜೆಟ್ಟಾ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಸ್ಮಾರ್ಟ್‌ಪ್ಲೇ ಇನ್ಫೋಟೇನ್‌ಮೆಂಟ್ ಸಿಸ್ಟಂನೊಂದಿಗೆ ಈ ಹಿಂದೆ ಬಿಡುಗಡೆಗೊಳಿಸಿತು. ಈ ಮಾರುತಿ ಸುಜುಕಿ ಇಗ್ನಿಸ್ ನೆಕ್ಸಾ ಶೋರೂಂನಿಂದ ಮಾರಾಟವಾದ ಮೊದಲ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಕಾರು ಇದಾಗಿದೆ.

ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ ಲೈವ್ ಟ್ರಾಫಿಕ್, ವಾಯ್ಸ್ ರೆಕಗ್ನಿಷನ್, ವೆಹಿಕಲ್ ಇನ್ಫಾರ್ಮೆಷನ್ ಅಲರ್ಟ್ ನಂತಹ ಫೀಚರ್ ಗಳನ್ನು ಹೊಂದಿವೆ. ಇದರ ಜೊತೆಗೆ ಹೊಸದಾಗಿ ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್‌ಪಿ) ಫೀಚರ್ಸ್ ಪಡೆದುಕೊಂಡಿವೆ. ಇದರ ಜೊತೆಗೆ ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಸೆಡಾನ್ ಮಾದರಿಯಾದ ಸಿಯಾಜ್‌ಗೆ ಇತ್ತೀಚೆಗೆ ಕೆಲವು ಹೊಸ ಸುರಕ್ಷತಾ ತಂತ್ರಜ್ಞಾನಗಳನ್ನು ಸೇರಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.

Note: ರಿಯಾಯಿತಿಗಳು ನಗರದಿಂದ ನಗರಕ್ಕೆ ಬದಲಾಗುತ್ತವೆ ಮತ್ತು ಸ್ಟಾಕ್‌ನ ಲಭ್ಯತೆಯನ್ನು ಅವಲಂಭಿಸಿದೆ.

Article Published On: Friday, June 7, 2024, 13:32 [IST]
English summary
Maruti suzuki ignis discounts in june 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+