Maruti Suzuki: ಈ ಕಾರಿಗೆ ಮನಸೋತ ಗ್ರಾಹಕರು.. ರೂ.5.49 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಲ್ಟೊ ಕೆ10, ಸೆಲೆರಿಯೊ, ಬಲೆನೊ, ಫ್ರಾಂಕ್ಸ್, ವ್ಯಾಗನ್ಆರ್ ಮತ್ತು ಜಿಮ್ನಿ ಒಳಗೊಂಡಂತೆ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತೀಚಿಗೆ ಕಂಪನಿಯು ಆಗಸ್ಟ್ ತಿಂಗಳ (2024) ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ಜನಪ್ರಿಯ ಹ್ಯಾಚ್‌ಬ್ಯಾಕ್ ಇಗ್ನಿಸ್ (Ignis) ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿ, ಕಳೆದ ತಿಂಗಳು (ಆಗಸ್ಟ್‌ 2024) ಬರೋಬ್ಬರಿ 2464 ಯುನಿಟ್ ಇಗ್ನಿಸ್ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟಗೊಳಿಸಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 2373 ಯುನಿಟ್‌ಗೆ ಹೋಲಿಕೆ ಮಾಡಿದರೆ ಶೇಕಡ 3.83% ಪ್ರಗತಿ ಸಾಧಿಸಲಾಗಿದೆ. ಮುಂಬರುವ ತಿಂಗಳು ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Maruti Suzuki Ignis Hatchback August 2024 Details

ಸದ್ಯ, ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್ (Maruti Suzuki Ignis Hatchback) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ರೂ.5.49 ಲಕ್ಷದಿಂದ ರೂ.8.06 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಮತ್ತು ಆಲ್ಫಾ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.

ಈ ಇಗ್ನಿ​ಸ್‌ ಕಾರು ಶಕ್ತಿಯುತ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20.89 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Maruti Suzuki Ignis Hatchback August 2024 Details

ನೂತನ ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್ ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ವೈಡೂರ್ಯ ಬ್ಲೂ, ಗ್ಲಿಸ್ಟೆನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ (ಕಲರ್) ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 260 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಯುವ ಗ್ರಾಹಕರನ್ನು ಸೆಳೆಯಲು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಹಾಗೂ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಇಗ್ನಿಸ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಫ್ರಂಟ್ ಡುಯಲ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಈ ಕಾರಿಗೆ ಟಾಟಾ ಟಿಯಾಗೊ (Tata Tiago) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, September 15, 2024, 9:00 [IST]
English summary
Maruti suzuki ignis hatchback august 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+