Invicto: ಮಾರುತಿ ಸುಜುಕಿ ಇನ್ವಿಕ್ಟೋ ದರ ಸ್ವಲ್ಪ ಏರಿಕೆ, 7-8 ಜನ ಹೋಗಬಹುದು.. 23 ಕಿ.ಮೀ ಮೈಲೇಜ್

ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಟೊಯೊಟಾದೊಂದಿಗೆ ಪಾಲುದಾರಿಕೆ ಹೊಂದಿರುವುದರಿಂದ ಇನ್ನೋವಾ ಹೈಕ್ರಾಸ್ (Innova Hycross) ಆಧಾರಿತ ಇನ್ವಿಕ್ಟೋ (Invicto) ಎಂಪಿವಿಯನ್ನು ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಸದ್ಯ, ಈ ಕಾರಿನ ದರ ಹೆಚ್ಚಳಗೊಂಡಿದೆ ಎಂಬ ವಿವರಗಳು ದೊರೆತಿವೆ.

ಈ ಜನವರಿ (2024) ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಎಂಪಿವಿ ದರಗಳು ರೂ.50,000 ಅಧಿಕವಾಗಿದ್ದು, ರೂ.25.21 (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಹಿಂದೆ, ಇನ್ವಿಕ್ಟೋ ಬೆಲೆ ರೂ.39,000 ಹೆಚ್ಚಳಗೊಂಡಿತ್ತು. ಬೇರಲ್ಲ ರೂಪಾಂತರಗಳಿಗೆ ಹೋಲಿಕೆ ಮಾಡಿದರೆ, ಮಿಸ್ಟಿಕ್ ವೈಟ್ ಬಣ್ಣದ ಆಯ್ಕೆಯಲ್ಲಿ ದೊರೆಯುವ ಮಾದರಿಯು ಪ್ರಮಾಣಿತ (Standard) ದರಕ್ಕಿಂತ ರೂ.9,500 ಹೆಚ್ಚುವರಿ ಬೆಲೆಯನ್ನು ಹೊಂದಿದೆ.

Maruti Suzuki Invicto Mpv Price Hike Upto Rs 50,000:

ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ, ಜಿಟಾ ಪ್ಲಸ್ (Zeta+) ಮಾತ್ತು ಆಲ್ಪಾ ಪ್ಲಸ್ (Alpha+) ರೂಪಾಂತರ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ ಮಿಸ್ಟಿಕ್ ವೈಟ್, ನೆಕ್ಸಾ ಬ್ಲೂ, ಮೆಜೆಸ್ಟಿಕ್ ಸಿಲ್ವರ್ ಸೇರಿದಂತೆ 4 ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಇದು ನೋಡಲು ಕೊಂಚ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂವಿಪಿಯಂತೆ ಕಾಣುತ್ತದೆ. 7, 8 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಮಾರುತಿ ಸುಜುಕಿ ಇನ್ವಿಕ್ಟೋ, 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 186 PS ಗರಿಷ್ಠ ಪವರ್ ಹಾಗೂ 206 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇ-ಸಿವಿಟಿ (e-CVT) ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿದಾರರಿಗೆ ದೊರೆಯುತ್ತದೆ. ಮೈಲೇಜ್ ವಿಚಾರವಾಗಿ ಹೇಳುವುದಾದರೆ, 23.24 kmpl ಇಂಧನ ದಕ್ಷತೆಯನ್ನು ಪಡೆದಿದೆ.

Maruti Suzuki Invicto Mpv Price Hike Upto Rs 50,000:

ಇನ್ವಿಕ್ಟೋ ಎಂಪಿವಿ ಕೇವಲ 9.5 ಸೆಕೆಂಡುಗಳಲ್ಲಿ0 ರಿಂದ 100 kmph ವೇಗವನ್ನು ಪಡೆಯಲಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 50+ ಕನೆಕ್ಟ್ದ್ ಕಾರ್ ಟೆಕ್ ಫೀಚರ್ಸ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಎಂಪಿವಿ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಅತ್ಯಾಧುನಿಕವಾಗಿದೆ. 6 ಏರ್‌ಬ್ಯಾಗ್ಸ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) 360 ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಹೊಂದಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್‌ ಪ್ರಬಲ ಎದುರಾಳಿಯಾಗಿದೆ.

Maruti Suzuki Invicto Mpv Price Hike Upto Rs 50,000:

ನೂತನ ಇನ್ವಿಕ್ಟೋ ಎಂಪಿವಿಗೆ ಗ್ರಾಹಕರಿಂದ ಹೆಚ್ಚಿನ ಬೇಡಿಕೆಯಿದ್ದು, 8 ರಿಂದ 10 ವಾರಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿದೆ. ಈ ಕಾರು ಸ್ಟ್ರಾಂಗ್ ಹೈಬ್ರಿಡ್ ಎಂಜಿನ್ ಪಡೆದುಕೊಂಡಿದೆ. ಜೊತೆಯಲ್ಲಿ 7, 8 ಜನರು ಪ್ರಯಾಣಿಸಬಹುದಾಗಿರುದರಿಂದ ಬಹುತೇಕರ ಇಷ್ಟದ ವಾಹನವಾಗಿದ್ದು, ಈ ಬೆಲೆ ಏರಿಕೆಯೂ ಖರೀದಿದಾರರ ಮೇಲೆ ಅಷ್ಟಾಗಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದೆ. ದರ ಹೆಚ್ಚಳ ರಾಜ್ಯದಿಂದ ರಾಜ್ಯಕ್ಕೆ ಬೇರೆಯಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್ ಶಿಪ್ ಸಂಪರ್ಕಿಸಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, January 27, 2024, 12:47 [IST]
English summary
Maruti suzuki invicto mpv price hike upto rs 50000 23 km mileage 7 8 people travel
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+