ಮಾರುತಿಯ ಹೈಬ್ರಿಡ್ 7-ಸೀಟರ್: ಪ್ರೀಮಿಯಂ ಫಿಚರ್ಸ್.. ಸನ್‌ರೂಫ್.. 23 ಕಿ.ಮೀ ಮೈಲೇಜ್!

ಭಾರತದಲ್ಲಿ ಮಾರುತಿ ಸುಜುಕಿ ಮತ್ತು ಟೊಯೋಟಾ ಕಂಪನಿ ಜೊತೆಗೂಡಿ ಹಲವು ಕಾರುಗಳನ್ನು ನಿರ್ಮಿಸಿ ಮಾರಾಟ ಮಾಡುತ್ತಿರುವುದು ನಿಮಗೆಲ್ಲಾ ಗೊತ್ತೇ ಇದೆ. ಈ ಪಾಲುದಾರಿಕೆಯಲ್ಲಿ ಈಗಾಗಲೇ ಟೊಯೋಟಾ ಅರ್ಬನ್ ಕ್ರೂಸರ್ ಹೈರೈಡರ್-ಮಾರುತಿ ಗ್ರಾಂಡ್ ವಿಟಾರ, ಮಾರುತಿ ಫ್ರಾಂಕ್ಸ್- ಟೊಯೋಟಾ ಟೈಸರ್ ನಂತಹ ಕಾರುಗಳು ಬಿಡುಗಡೆಯಾಗಿವೆ. ಇದೇ ಸಾಲಿಗೆ ಬರುವ ಇನ್ವಿಕ್ಟೋ 7-ಸೀಟರ್ ಕಾರು ಟೊಯೋಟಾ ಇನ್ನೋವಾ ಹೈಕ್ರಾಸ್ ಮಾದರಿಯ ರೀಬ್ಯಾಡ್ಜ್ ಆವೃತ್ತಿಯಾಗಿದೆ. ಈ ಕಾರು ಸದ್ಯ ಮಾರುತಿ ಸುಜುಕಿ ಲೈನಪ್‌ನಲ್ಲಿಯೇ ಅತ್ಯಂತ ಪ್ರೀಮಯಂ ಕಾರಾಗಿದೆ. ಈ ಕಾರಿನ ವಿಶೇಷತೆಗಳನ್ನು ಇಲ್ಲಿ ನೋಡೋಣ.

ಡಿಸೈನ್‌: ಈ ಎಂಪಿವಿ ಝೀಟಾ ಪ್ಲಸ್ (Zeta Plus) ಮತ್ತು ಆಲ್ಫಾ ಪ್ಲಸ್ (Alpha Plus) ರೂಪಾಂತರ ಹಾಗೂ ಐದು ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನೋವಾ ಹೈಕ್ರಾಸ್‌ ಕಾರಿನ ಬಹುತೇಕ ಅದೇ ಡಿಸೈನ್‌ ಲ್ಯಾಂಗ್ವೇಜ್ ಅನ್ನು ಈ ಕಾರು ಹೊಂದಿದೆ.

maruti-suzuki-invicto-price-features-design-details

ಬೆಲೆ: ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ಬೆಲೆಯು ರೂ. 24.84 ಲಕ್ಷದಿಂದ ರೂ. 28.42 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗಲಿದ್ದು, ಆನ್ - ರೋಡ್ ದರಗಳು ರೂ. 34 ಲಕ್ಷವರೆಗೆ ಇರುತ್ತದೆ. ಈ ಕಾರು, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ದೊಡ್ಡಮಟ್ಟದ ಬೇಡಿಕೆಯನ್ನು ಪಡೆದುಕೊಂಡಿದ್ದು, ಇಂದಿಗೂ ಉತ್ತಮ ಮಾರಾಟ ಕಾಣುತ್ತಿದೆ.

ಫೀಚರ್‌ಗಳು: 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 50+ ಕನೆಕ್ಟ್ದ್ ಕಾರ್ ಟೆಕ್ ಫೀಚರ್ಸ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

maruti-suzuki-invicto-price-features-design-details

ಬಣ್ಣಗಳು: ಇನ್ವಿಕ್ಟೋ ಮಾರುತಿ ಸುಜುಕಿಯ ನೆಕ್ಸಾ ಡೀಲರ್‌ಶಿಪ್‌ನಲ್ಲಿ ಎಂಟನೇ ಕಾರು ಮಾದರಿಯಾಗಿದೆ. ಮಾರುತಿ ಸುಜುಕಿ ಇನ್ವಿಕ್ಟೋ ಕಾರು ನೆಕ್ಸಾ ಬ್ಲೂ, ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್ ಮತ್ತು ಸ್ಟಿಲರ್ ಬ್ರೌನ್ಸ್ ಎಂಬ ನಾಲ್ಕು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಮಾರುತಿ ಸುಜುಕಿ ಇನ್ವಿಕ್ಟೋ ಕಾರನ್ನು ಟೊಯೊಟಾದ ಬಿಡದಿ ಸ್ಥಾವರದಲ್ಲಿ ತಯಾರಿಸಲಾಗುತ್ತದೆ

ಸುರಕ್ಷತೆ: ಸುರಕ್ಷತೆಯ ದೃಷ್ಟಿಯಿಂದ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ಅತ್ಯುತ್ತಮವಾಗಿದ್ದು, ಫ್ರಂಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್, 6 ಏರ್‌ಬ್ಯಾಗ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಟೊಯೊಟಾ ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ ಹಾಗೂ ಕಿಯಾ ಕ್ಯಾರೆನ್ಸ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಎಂಜಿನ್‌: ಏಳು ಅಥವಾ ಎಂಟು ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯುವ ಮಾರುತಿ ಸುಜುಕಿ ಇನ್ವಿಕ್ಟೋ, 2 - ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 186 PS ಪವರ್ ಹಾಗೂ 206 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. e - CVT ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದ್ದು, 23.24 kmpl ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, July 21, 2024, 11:00 [IST]
English summary
Maruti suzuki invicto price features design details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+