ಆಫ್-ರೋಡ್ ವಾಹನ ಪ್ರಿಯರಿಗೆ ಸಿಹಿಸುದ್ದಿ: ದಸರಾ ಹಬ್ಬಕ್ಕೆ ಮಾರುತಿ ಜಿಮ್ನಿ ಮೇಲೆ ಭರ್ಜರಿ ಡಿಸ್ಕೌಂಟ್
ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜಿಮ್ನಿ ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿ ಹೊಸ ಕ್ರಾಂತಿಯನ್ನು ಸೃಷ್ಟಿಸಿತು. ಭಾರತದಲ್ಲೂ ಈ ಎಸ್‍ಯುವಿ ಕ್ರಾಂತಿ ಮಾಡಬಹುದು ಎಂದು ಎಲ್ಲಾರೂ ತಿಳಿದುಕೊಂಡಿದ್ದರು. ಆದರೆ ಎದುರಾಳಿ ಮಹೀಂದ್ರಾ ಥಾರ್ ಮುಂದೆ ಇದು ಮಂಕಾಗಿದೆ. ಮಾರಾಟದಲ್ಲಿ ಮಾರುತಿ ಸುಜುಕಿ ಜುಮ್ನಿ (Maruti Suzuki Jimny) ಬಾರೀ ಕುಸಿತವನ್ನು ಕಂಡಿದೆ. ಈ ಜಿಮ್ಮಿ (Jimny) ಮಾದರಿಯು ಒಂದು ಕಾಲದ ಆಫ್-ರೋಡ್ ಕಿಂಗ್ ಆಗಿದ್ದ ಜಿಪ್ಸಿಯ ಉತ್ತರಾಧಿಕಾರಿಯಾಗಿ ಬಂದು ಭಾರತೀಯ ವಾಹನ ಪ್ರೇಮಿಗಳ ಮನ ಗೆಲ್ಲುವಲ್ಲಿ ದೊಡ್ದ ಮಟ್ಟದ ಯಶಸ್ಸನ್ನು ಕಂಡಿಲ್ಲ
ಈ ನಡುವೆ ಮಾರುತಿ ಸುಜುಕಿ ಜಿಮ್ನಿ ದೇಶದಲ್ಲಿ ಗ್ರಾಹಕರನ್ನು ಆಕರ್ಷಿಸಲು ಭಾರೀ ರಿಯಾಯಿತಿಗಳನ್ನು ನೀಡುತ್ತಿದ್ದಾರೆ. ಜಿಮ್ನಿ ಮೇಲಿನ ರಿಯಾಯಿತಿಗಳು ಕಳೆದ ತಿಂಗಳಿಗಿಂತ ಸ್ವಲ್ಪ ಕಡಿಮೆಯಾಗಿದೆ. ಈ ಜಿಮ್ನಿ ಎಸ್‍ಯುವಿಯ ಝೀಟಾ ಮತ್ತು ಆಲ್ಫಾ ಎರಡೂ ರೂಪಾಂತರಗಳ ಮೇಲೆ ರೂ.80,000 ರಿಯಾಯಿತಿಯೊಂದಿಗೆ ಲಭ್ಯವಿದೆ. ಝೀಟಾ ರೂಪಾಂತರದ 95,000 ಮೌಲ್ಯದ ವಿಶೇಷ MSSF ಕೊಡುಗೆಯನ್ನು ಪಡೆಯುತ್ತಾರೆ.

ಇನ್ನು ಜಿಮ್ನಿ ಎಸ್‍ಯುವಿಯ ಟಾಪ್-ಸ್ಪೆಕ್ ಆಲ್ಫಾ ಟ್ರಿಮ್ MSSF ಯೋಜನೆಯ ಭಾಗವಾಗಿ 1.5 ಲಕ್ಷದವರೆಗೆ ರಿಯಾಯಿತಿಯನ್ನು ಪಡೆಯುತ್ತದೆ. ಒಟ್ಟಾರೆಯಾಗಿ, ಜಿಮ್ನಿ 2.3 ಲಕ್ಷ ರೂ.ವರೆಗಿನ ಪ್ರಯೋಜನಗಳನ್ನು ಪಡೆಯುತ್ತದೆ. ಗಮನಿಸಿ ಇದು ಡೀಲರ್ ನಿಂದ ಡೀಲರ್‌ಶಿಪ್‌ಗೆ ಮತ್ತು ನಗರದಿಂದ ನಗರಕ್ಕೆ ಡಿಸ್ಕೌಂಟ್ ಬದಲಾಗಬಹುದು. ಹೆಚ್ಚಿನ ಮಾಹಿತಿಗಾಗಿ ಮಾರುತಿ ಸುಜುಕಿ ಡೀಲರ್ ಅನ್ನು ಸಂಪರ್ಕಿಸಿ ಅಥವಾ ಹತ್ತಿರದ ಮಾರುತಿ ಸುಜುಕಿ ಡೀಲರ್‌ಶಿಪ್‌ಗೆ ಬೇಟಿ ನೀಡಿ.
ಮತ್ತೊಂದಡೆ ಎದುರಾಳಿ ಮಹೀಂದ್ರಾ ಥಾರ್ ಮಾರಾಟದಲ್ಲಿ ಹೊಸ ದಾಖಲೆಗಳನ್ನು ಬರೆದು ಮುನ್ನುಗುತ್ತಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಇದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಆದರೆ ಮಾರುತಿ ಸುಜುಕಿ ಜಿಮ್ನಿ ಕೂಡ ಅತ್ಯುತ್ತಮ ಬಜೆಟ್ ಬೆಲೆಯ ಮಾದರಿಯಾಗಿದೆ.

ಹೊಸ ಮಾರುತಿ ಜಿಮ್ನಿ ಎಸ್‍ಯುವಿಯು ಲೈಫ್ ಸ್ಟೈಲ್ ಆಫ್-ರೋಡರ್, ಮಾರುತಿ ಸುಜುಕಿ ಜಿಮ್ನಿ ದೇಶದ ಅತ್ಯಂತ ಸಮರ್ಥ ಆಫ್-ರೋಡರ್‌ಗಳಲ್ಲಿ ಒಂದು ಎಂದು ಸಾಬೀತಾಗಿದೆ. ಆದರೆ ಇದು ಆಫ್-ರೋಡ್ ವಾಹನಗಳ ಪ್ರೇಮಿಗಳು ಸೆಳೆಯುವಲ್ಲಿ ಜಿಮ್ನಿ ಯಶಸ್ವಿಯಾಗುತ್ತಿಲ್ಲ. ಮಾರುತಿ ಸುಜುಕಿ ಜಿಮ್ನಿಯನ್ನು ಪ್ರತಿಸ್ಪರ್ಧಿಗಳಾದ ಥಾರ್ ಮತ್ತು ಗೂರ್ಖಾಗೆ ಹೋಲಿಸಿದರೆ ಡ್ರೈವ್ ಮಾಡಲು ಹೆಚ್ಚು ಸುಲಭವಾಗಿದೆ.
ಈ ಮಾರುತಿ ಸುಜುಕಿ ಜಿಮ್ನಿಯಲ್ಲಿ ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ. ಈ ಎಂಜಿನ್ 104.8 ಪಿಎಸ್ ಪವರ್ ಹಾಗೂ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೀಡಿದೆ.

ಈ ಮಾರುತಿ ಜಿಮ್ನಿ (Maruti Jimny) ಕಾಂಪ್ಯಾಕ್ಟ್ ಆಯಾಮಗಳನ್ನು ಹೊಂದಿದೆ. ಇದು ಗರಿಷ್ಠ ಟ್ರಾಫಿಕ್ ಸಮಯದಲ್ಲಿ ಚಾಲನೆ ಮಾಡಲು ಸುಲಭ. ರಸ್ತೆಯಲ್ಲಿ ಕಡಿಮೆ ಜಾಗ ಸಾಕಾಗುತ್ತದೆ. ಇದರ ಹೊರತಾಗಿ, ಜಿಮ್ನಿ ಎಸ್‍ಯುವಿ ಕುಶಲತೆಯಿಂದ ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ. ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ. ಅದಕ್ಕಾಗಿಯೇ ಥಾರ್‌ಗೆ ಹೋಲಿಸಿದರೆ ಜಿಮ್ನಿ ದೈನಂದಿನ ಬಳಕೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದೆ.
ಈ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ. ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದೆ. ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಅದಕ್ಕೆ ತಕ್ಕಂತೆಯೇ ವಿನ್ಯಾಸವನ್ನು ಹೊಂದಿದೆ.
ಈ ಮಾರುತಿ ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹೊಂದಿದೆ. ಇದರೊಂದಿಗೆ ಆಟೋಮ್ಯಾಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.


Click it and Unblock the Notifications