ಶ್ರೀಸಾಮಾನ್ಯರ ಕನಸು ನನಸಾಗುವ ಕಾಲ: ಅತಿಕಡಿಮೆ ಬೆಲೆಗೆ ಹೊಸ ಕಾರುಗಳು ಲಭ್ಯ.. 2.5 ಲಕ್ಷ ರಿಯಾಯಿತಿ!
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಹೊಸ ಕಾರು ಖರೀದಿಸಬೇಕು ಎಂಬುದರ ಹಲವರ ಕನಸಾಗಿರುತ್ತದೆ. ಆದರೆ, ನೂತನ ಕಾರನ್ನು ತೆಗೆದುಕೊಳ್ಳವಷ್ಟು ಹಣ ಹೊಂದಿಸಲು ಸಾಧ್ಯವಾಗುದಿಲ್ಲ. ಈ ಸೆಪ್ಟೆಂಬರ್ ತಿಂಗಳು, ಅಂತಹ ಗ್ರಾಹಕರಿಗಾಗಿ ಜನಪ್ರಿಯ ವಾಹನ ತಯಾರಕ ಕಂಪನಿಗಳು ವಿವಿಧ ಕಾರುಗಳ ಖರೀದಿ ಮೇಲೆ ಭಾರಿ ರಿಯಾಯಿತಿ (Discount) ಘೋಷಣೆ ಮಾಡಿವೆ. ಪ್ರಮುಖವಾಗಿ ಮಾರುತಿ ಸುಜುಕಿ ಜಿಮ್ನಿ, ಫ್ರಾಂಕ್ಸ್, ನಿಸ್ಸಾನ್ ಮ್ಯಾಗ್ನೈಟ್, ಟಾಟಾ ನೆಕ್ಸಾನ್ ಹಾಗೂ ಮಹೀಂದ್ರಾ ಬೊಲೆರೊ ನಿಯೋ ಎಸ್‌ಯುವಿಗಳು ಭರ್ಜರಿ ಆಫರ್ ಹೊಂದಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಜಿಮ್ನಿ (Maruti Suzuki Jimny): ಇದು ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿದ್ದು, ರೂ.2.5 ಲಕ್ಷದವರೆಗೆ ರಿಯಾಯಿತಿ ಪ್ರಯೋಜನ ಹೊಂದಿದೆ. ಈ ಕಾರು ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 104.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 134.2 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುತ್ತದೆ.

ಈ ಮಾರುತಿ ಸುಜುಕಿ ಜಿಮ್ನಿ 5-ಸ್ಪೀಡ್ ಮ್ಯಾನುವಲ್ ಅಥವಾ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 16.39 ರಿಂದ 16.94 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 4 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx): ಈ ಎಸ್‌ಯುವಿ ಸಹ ಭರ್ಜರಿ ಹಣಕಾಸಿನ ಪ್ರಯೋಜನ ಹೊಂದಿದ್ದು, ರೂ.83,000ವರೆಗೆ ರಿಯಾಯಿತಿ ಪಡೆದಿದೆ. ನೂತನ ಫ್ರಾಂಕ್ಸ್ ಕಾರು, ರೂ.7.51 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನಿಸ್ಸಾನ್ ಮ್ಯಾಗ್ನೈಟ್ (Nissan Magnite): ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಈ ಸೆಪ್ಟೆಂಬರ್ ತಿಂಗಳು ರೂ.1.25 ಲಕ್ಷದವರೆಗೆ ರಿಯಾಯಿತಿ ಪಡೆದಿದೆ. ಈ ಕಾರು, ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ.
ಈ ನಿಸ್ಸಾನ್ ಮ್ಯಾಗ್ನೈಟ್ ಕಾರು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.40 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ (Tata Nexon): ಈ ಎಸ್‌ಯುವಿಯು ಭರ್ಜರಿ ಹಣಕಾಸಿನ ಪ್ರಯೋಜನ ಹೊಂದಿದ್ದು, ರೂ.1.15 ಲಕ್ಷದವರೆಗೆ ರಿಯಾಯಿತಿ ಪಡೆದಿದೆ. ನೂತನ ನೆಕ್ಸಾನ್ ಕಾರು ರೂ.8 ಲಕ್ಷದಿಂದ ರೂ.15.50 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಲಭ್ಯವಿದೆ. ಇದು ಪೆಟ್ರೋಲ್/ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಇದರಲ್ಲಿ ಕೂಡ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo): ಇದು ಗ್ರಾಮೀಣ ಭಾಗದ ಜನರ ನೆಚ್ಚಿನ ಎಸ್‌ಯುವಿಯಾಗಿದ್ದು, ರೂ.85,000ವರೆಗೆ ರಿಯಾಯಿತಿ ಪ್ರಯೋಜನ ಹೊಂದಿದೆ. ಈ ಕಾರು ರೂ.9.95 ಲಕ್ಷದಿಂದ ರೂ.12.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 17.29 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications