ಮಾರುತಿ ಜಿಮ್ನಿ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್: ಎದುರಾಳಿ ಮಹೀಂದ್ರಾ ಥಾರ್‌ಗೆ ಆತಂಕ ಶುರು!

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜಿಮ್ನಿ ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿ ಹೊಸ ಕ್ರಾಂತಿಯನ್ನು ಸೃಷ್ಟಿಸಿತು. ಭಾರತೀಯ ಮಾರುಕಟ್ಟೆಯಲ್ಲೂ ಈ ಎಸ್‍ಯುವಿ ಕ್ರಾಂತಿ ಮಾಡಬಹುದು ಎಂದು ಎಲ್ಲಾರೂ ತಿಳಿದುಕೊಂಡಿದ್ದರು. ಆದರೆ ಎದುರಾಳಿ ಮಹೀಂದ್ರಾ ಥಾರ್ ಮುಂದೆ ಇದು ಮಂಕಾಗಿದೆ. ಮಾರಾಟದಲ್ಲಿ ಮಾರುತಿ ಜುಮ್ನಿ ಕುಸಿತವನ್ನು ಕಾಣುತ್ತಿದೆ.

ಈ ಮಾರುತಿ ಜಿಮ್ಮಿ ಮಾದರಿಯು ಒಂದು ಕಾಲದ ಆಫ್-ರೋಡ್ ಕಿಂಗ್ ಆಗಿದ್ದ ಜಿಪ್ಸಿಯ ಉತ್ತರಾಧಿಕಾರಿಯಾಗಿ ಬಂದು ಭಾರತೀಯ ವಾಹನ ಪ್ರೇಮಿಗಳ ಮನ ಗೆಲ್ಲುವಲ್ಲಿ ದೊಡ್ದ ಮಟ್ಟದ ಯಶಸ್ವಿಯಾಗಿಲ್ಲ. ಇದೀಗ ಮಾರುತಿ ಸುಜುಕಿ ಜಿಮ್ನಿ ದೇಶದಲ್ಲಿ ಮಾರಾಟವನ್ನು ಆಕರ್ಷಿಸಲು ಭಾರೀ ರಿಯಾಯಿತಿಗಳನ್ನು ಘೋಷಿಸಿದೆ. ಮಾರುತಿ ಜಿಮ್ಮಿ ಎಸ್‍ಯುವಿಯ ಮೇಲೆ ರೂ.1.50 ಲಕ್ಷವರೆಗೆ ರಿಯಾಯಿತಿಯನ್ನು ನೀಡುತ್ತಿದೆ.

Maruti Suzuki Jimny

ಜಿಮ್ನಿಯ ಝೀಟಾ ಮತ್ತು ಆಲ್ಫಾ ಎಂಬ ಎರಡೂ ರೂಪಾಂತರಗಳಿಗೆ ರಿಯಾಯಿತಿಗಳನ್ನು ನೀಡುತ್ತಿದೆ. ಮಾರುತಿ ಜಿಮ್ನಿ ಎಸ್‍ಯುವಿಯ ಆರಂಭಿಕ ಬೆಲೆಯು ರೂ.12.74 ಲಕ್ಷವಾಗಿದೆ. 2023ರ ಸ್ಟಾಕ್ ಮಾಡೆಲ್ ಜಿಮ್ಮಿ ಖರೀದಿಸಲು ಯೋಜಿಸುತ್ತಿರುವ ಗ್ರಾಹಕರು ಗರಿಷ್ಠ ರೂ.1.50 ಲಕ್ಷ ನಗದು ರಿಯಾಯಿತಿಗಳನ್ನು ಪಡೆಯಬಹುದು. 2024ರ ಜಿಮ್ನಿ ಮಾಡೆಲ್ ಮೇಲೆ ರೂ.50,000 ನಗದು ರಿಯಾಯಿತಿಯನ್ನು ನೀಡುತ್ತಿದೆ.

ಇದಲ್ಲದೆ, ಕಾರ್ಪೊರೇಟ್ ರಿಯಾಯಿತಿ ಅರ್ಹತೆಗೆ ಅನುಗುಣವಾಗಿ ರೂ.3,000 ವರೆಗೆ ನೀಡುತ್ತಿದೆ. ಈ ಕೊಡುಗೆಗಳು ತಾತ್ಕಾಲಿಕವಾಗಿರುತ್ತವೆ ಮತ್ತು ರೂಪಾಂತರ, ಸ್ಥಳ, ಸ್ಟಾಕ್ ಲಭ್ಯತೆ ಮತ್ತು ಇತರ ಅಂಶಗಳನ್ನು ಅವಲಂಬಿಸಿ ಬದಲಾಗಬಹುದು. ಲೈಫ್ ಸ್ಟೈಲ್ ಆಫ್-ರೋಡರ್, ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ದೇಶದ ಅತ್ಯಂತ ಸಮರ್ಥ ಆಫ್-ರೋಡರ್‌ಗಳಲ್ಲಿ ಒಂದು ಎಂದು ಸಾಬೀತಾಗಿದೆ.

Maruti Suzuki Jimny

ಇದರಿಂದ ಆಫ್-ರೋಡ್ ವಾಹನಗಳ ಪ್ರೇಮಿಗಳು ಈ ಜಿಮ್ನಿ ಎಸ್‍ಯುವಿಯನ್ನು ಖರೀದಿಸುತ್ತಿದ್ದಾರೆ. ಮಾರುತಿ ಸುಜುಕಿ ಜಿಮ್ನಿಯನ್ನು ಪ್ರತಿಸ್ಪರ್ಧಿಗಳಾದ ಥಾರ್ ಮತ್ತು ಗೂರ್ಖಾಗೆ ಹೋಲಿಸಿದರೆ ಡ್ರೈವ್ ಮಾಡಲು ಹೆಚ್ಚು ಸುಲಭವಾಗಿದೆ. ಈ ಮಾರುತಿ ಜಿಮ್ನಿ ಕಾಂಪ್ಯಾಕ್ಟ್ ಆಯಾಮಗಳನ್ನು ಹೊಂದಿದೆ. ಇದು ಗರಿಷ್ಠ ಟ್ರಾಫಿಕ್ ಸಮಯದಲ್ಲಿ ಚಾಲನೆ ಮಾಡಲು ಸುಲಭ. ರಸ್ತೆಯಲ್ಲಿ ಕಡಿಮೆ ಜಾಗ ಸಾಕಾಗುತ್ತದೆ.

ಅದರ ಹೊರತಾಗಿ, ಜಿಮ್ನಿಯು ಕುಶಲತೆಯಿಂದ ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ. ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ. ಅದಕ್ಕಾಗಿಯೇ ಥಾರ್‌ಗೆ ಹೋಲಿಸಿದರೆ ಜಿಮ್ನಿ ದೈನಂದಿನ ಬಳಕೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದೆ. ಈ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ.

Maruti Suzuki Jimny

ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದೆ. ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಅದಕ್ಕೆ ತಕ್ಕಂತೆಯೇ ವಿನ್ಯಾಸವನ್ನು ಹೊಂದಿದೆ. ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹೊಂದಿದೆ.

ಇದರೊಂದಿಗೆ ಆಟೋಮ್ಯಾಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಮಾರುತಿ ಜಿಮ್ನಿಯಲ್ಲಿ ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ.

ಈ ಎಂಜಿನ್ 104.8 ಪಿಎಸ್ ಪವರ್ ಹಾಗೂ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೀಡಿದೆ. ಇನ್ನು ಈ ಎಸ್‍ಯುವಿಯ 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಸೈಡ್ ಇಂಪ್ಯಾಕ್ಟ್ ಡೋರ್ ಬೀಮ್ಸ್ ಒಳಗೊಂಡಿದೆ.

Article Published On: Wednesday, March 6, 2024, 16:51 [IST]
English summary
Maruti suzuki jimny gets discounts in march 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+