ವಾಹನ ಪ್ರಿಯರಿಗೆ ಸಿಹಿಸುದ್ದಿ: ಮಾರುತಿ ಜಿಮ್ನಿ ಮೇಲೆ ಭರ್ಜರಿ ಡಿಸ್ಕೌಂಟ್

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜಿಮ್ನಿ ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿ ಹೊಸ ಕ್ರಾಂತಿಯನ್ನು ಸೃಷ್ಟಿಸಿತು. ಭಾರತೀಯ ಮಾರುಕಟ್ಟೆಯಲ್ಲೂ ಈ ಎಸ್‍ಯುವಿ ಕ್ರಾಂತಿ ಮಾಡಬಹುದು ಎಂದು ಹಲವರು ಅಂದುಕೊಂಡಿದ್ದರು. ಆದರೆ ಎದುರಾಳಿ ಮಹೀಂದ್ರಾ ಥಾರ್ ಮುಂದೆ ಇದು ಮಂಕಾಗಿದೆ. ಮಾರಾಟದಲ್ಲಿ ಮಾರುತಿ ಸುಜುಕಿ ಜುಮ್ನಿ (Maruti Suzuki Jimny) ಕುಸಿತವನ್ನು ಕಂಡಿದೆ. ಈ ಜಿಮ್ಮಿ (Jimny) ಮಾದರಿಯು ಒಂದು ಕಾಲದ ಆಫ್-ರೋಡ್ ಕಿಂಗ್ ಆಗಿದ್ದ ಜಿಪ್ಸಿಯ ಉತ್ತರಾಧಿಕಾರಿಯಾಗಿ ಬಂದು ಭಾರತೀಯ ವಾಹನ ಪ್ರೇಮಿಗಳ ಮನ ಗೆಲ್ಲುವಲ್ಲಿ ದೊಡ್ದ ಮಟ್ಟದ ಯಶಸ್ವಿಯನ್ನು ಕಂಡಿಲ್ಲ.

ಮಾರುತಿ ಸುಜುಕಿ ಜಿಮ್ನಿ ಗ್ರಾಹಕರನ್ನು ಆಕರ್ಷಿಸಲು ಭಾರೀ ರಿಯಾಯಿತಿಗಳನ್ನು ನೀಡುತ್ತಿದ್ದಾರೆ. ಈ ಮಾರುತಿ ಜಿಮ್ನಿ ಎಸ್‍ಯುವಿಯ ಮೇಲೆ ಡೀಲರ್‌ಶಿಪ್ ಮಟ್ಟದಲ್ಲಿ ರೂ.3.30 ಲಕ್ಷದವರೆಗೆ ರಿಯಾಯಿತಿಯನ್ನು ನೀಡಲಾಗುತ್ತಿದೆ. ಬೆಂಗಳೂರಿನ ಕೆಲವು ಡೀಲರ್‌ಶಿಪ್ ಗಳಲ್ಲಿ ರೂ.1:30 ಲಕ್ಷದಿಂದ 2:30 ಲಕ್ಷದವರೆಗೆ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ರಿಯಾಯಿಗಳಲ್ಲಿ ನಗದು ಪ್ರಯೋಜನಗಳು ಮತ್ತು ಇತರ ಹೆಚ್ಚುವರಿ ಪ್ರಯೋಜನೆಗಳನ್ನು ನೀಡಲಾಗುತ್ತದೆ.

Maruti Suzuki Jimny

ಗಮನಿಸಿ, ಈ ರಿಯಾಯಿತಿ ರಾಜ್ಯದಿಂದ ರಾಜ್ಯಕ್ಕೆ ಮತ್ತು ಡೀಲರ್‌ಶಿಪ್‌ನಿಂದ ಡೀಲರ್‌ಶಿಪ್‌ಗೆ ಬದಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಮಾರುತಿ ಸುಜುಕಿ ಡೀಲರ್ ಅನ್ನು ಸಂಪರ್ಕಿಸಿ ಅಥವಾ ಹತ್ತಿರದ ಮಾರುತಿ ಸುಜುಕಿ ಡೀಲರ್‌ಶಿಪ್‌ಗೆ ಬೇಟಿ ನೀಡಿ. ಮತ್ತೊಂದಡೆ ಎದುರಾಳಿ ಮಹೀಂದ್ರಾ ಥಾರ್ ಮಾರಾಟದಲ್ಲಿ ಹೊಸ ದಾಖಲೆಗಳನ್ನು ಬರೆದು ಮುನ್ನುಗುತ್ತಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ.

ಇದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಆದರೆ ಮಾರುತಿ ಸುಜುಕಿ ಜಿಮ್ನಿ ಕೂಡ ಅತ್ಯುತ್ತಮ ಬಜೆಟ್ ಬೆಲೆಯ ಮಾದರಿಯಾಗಿದೆ. ಲೈಫ್ ಸ್ಟೈಲ್ ಆಫ್-ರೋಡರ್, ಮಾರುತಿ ಸುಜುಕಿ ಜಿಮ್ನಿ ದೇಶದ ಅತ್ಯಂತ ಸಮರ್ಥ ಆಫ್-ರೋಡರ್‌ಗಳಲ್ಲಿ ಒಂದು ಎಂದು ಸಾಬೀತಾಗಿದೆ. ಆದರೆ ಇದು ಆಫ್-ರೋಡ್ ವಾಹನಗಳ ಪ್ರೇಮಿಗಳು ಸೆಲೆಯುವಲ್ಲಿ ಜಿಮ್ನಿ ಯಶಸ್ವಿಯಾಗುತ್ತಿಲ್ಲ.

Maruti Suzuki Jimny

ಮಾರುತಿ ಸುಜುಕಿ ಜಿಮ್ನಿಯನ್ನು ಪ್ರತಿಸ್ಪರ್ಧಿಗಳಾದ ಥಾರ್ ಮತ್ತು ಗೂರ್ಖಾಗೆ ಹೋಲಿಸಿದರೆ ಡ್ರೈವ್ ಮಾಡಲು ಹೆಚ್ಚು ಸುಲಭವಾಗಿದೆ. ಈ ಮಾರುತಿ ಜಿಮ್ನಿ (Maruti Jimny) ಕಾಂಪ್ಯಾಕ್ಟ್ ಆಯಾಮಗಳನ್ನು ಹೊಂದಿದೆ. ಇದು ಗರಿಷ್ಠ ಟ್ರಾಫಿಕ್ ಸಮಯದಲ್ಲಿ ಚಾಲನೆ ಮಾಡಲು ಸುಲಭ. ರಸ್ತೆಯಲ್ಲಿ ಕಡಿಮೆ ಜಾಗ ಸಾಕಾಗುತ್ತದೆ. ಇದರ ಹೊರತಾಗಿ, ಜಿಮ್ನಿಯು ಕುಶಲತೆಯಿಂದ ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ. ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ.

ಅದಕ್ಕಾಗಿಯೇ ಥಾರ್‌ಗೆ ಹೋಲಿಸಿದರೆ ಜಿಮ್ನಿ ದೈನಂದಿನ ಬಳಕೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದೆ. ಈ ಮಾರುತಿ ಸುಜುಕಿ ಜಿಮ್ನಿಯಲ್ಲಿ ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ. ಈ ಎಂಜಿನ್ 104.8 ಪಿಎಸ್ ಪವರ್ ಹಾಗೂ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೀಡಿದೆ.

Maruti Suzuki Jimny

ಈ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ. ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದೆ. ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಅದಕ್ಕೆ ತಕ್ಕಂತೆಯೇ ವಿನ್ಯಾಸವನ್ನು ಹೊಂದಿದೆ.

ಮಾರುತಿ ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹೊಂದಿದೆ. ಇದರೊಂದಿಗೆ ಆಟೋಮ್ಯಾಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 9, 2024, 13:46 [IST]
English summary
Maruti suzuki jimny offered attractive discounts details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+