ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
ಮಹೀಂದ್ರಾ ಥಾರ್ ಅನ್ನು ಸೈಡ್ ಲೈನ್ ಮಾಡಬೇಕೆನ್ನುವ ಉದ್ದೇಶದಿಂದ ಮಾರುತಿ ಸುಜುಕಿ ಜಿಮ್ನಿ 2023 ರ ಆಟೋ ಎಕ್ಸ್ಪೋದಲ್ಲಿ ಮಾರುತಿ ಸುಜುಕಿ ಜಿಮ್ನಿಯನ್ನು ಅನಾವರಣಗೊಳಿಸಿತ್ತು. ಕಳೆದ ವರ್ಷವಷ್ಟೇ ಜಿಮ್ನಿ ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಿದ್ದರೂ, ಇದರ ಡಿಸೈನ್ ಮತ್ತು ಫೀಚರ್‌ನಿಂದಾಗಿ ಎಲ್ಲರ ಗಮನ ಸೆಳೆದಿತ್ತು.
ಆದರೆ ಇದೀಗ ಮಾರುತಿ ಸುಜುಕಿ ಜಿಮ್ನಿಗೆ (Maruti Suzuki Jimny) ಟಕ್ಕರ್ ಕೊಡಲು ಎಂಜಿ ಪಾಳಯದಲ್ಲಿ ಯೋಜನೆಗಳು ಸಿದ್ದವಾಗುತ್ತಿದೆ. ಹೌದು, ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ಆಧರಿಸಿ ಮತ್ತೊಂದು ಎಲೆಕ್ಟ್ರಿಕ್ ವಾಹನವನ್ನು ಮಾರುಕಟ್ಟೆಗೆ ತರುವ ಪ್ಲಾನ್‌ನಲ್ಲಿದೆ ಎಂಜಿ. ಮಾಹಿತಿಗಳ ಪ್ರಕಾರ ಇದು ಎಂಜಿ ಕಾಮೆಟ್ ಆಧರಿಸಿದ 5 ಡೋರ್ ಎಲೆಕ್ಟ್ರಿಕ್ ಕಾರ್ ಆಗಿರಲಿದೆ ಎಂದು ತಿಳಿದು ಬಂದಿದೆ.

ಈ ವರ್ಷದ ಆರಂಭದಲ್ಲಿ ಎಂಜಿ ಚೀನಾದಲ್ಲಿ ಬಾವುನ್ ಎಪ್ ಪ್ಲಸ್ ಎಂಬ 5 ಡೋರ್ ಎಲೆಕ್ಟ್ರಿಕ್ ಎಸ್‌ಯುವಿಯೊಂದನ್ನು ಅನಾವರಣ ಮಾಡಿತ್ತು. ಇದನ್ನು ಆಧರಿಸಿದ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದ್ದು, ಇದು ಮಾರುತಿ ಸುಜುಕಿ ಜಿಮ್ನಿಗೆ ಪೈಪೋಟಿ ನೀಡಲಿದೆ ಎಂದು ತಿಳಿದು ಬಂದಿದೆ. ಬಾವುನ್ ಎಪ್ ಪ್ಲಸ್ ಕಾರಿಗೆ ಅಧಿಕವೇನೂ ಬದಲಾವಣೆ ಮಾಡದೆ ಇದು ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ.
ನೋಡಲು ಅತ್ಯಾಕರ್ಷಕ ಡಿಸೈನ್ ವಿನ್ಯಾಸ ಮತ್ತು ಆಧುನಿಕ ಫೀಚರ್‌ಗಳನ್ನು ಒಳಗೊಂಡಿರುವ ಈ ಕಾರು ಭಾರತೀಯ ಮಾರುಕಟ್ಟೆಗೆ ಬಂದರೆ ಆದಷ್ಟು ಬೇಗ ಜನಪ್ರಿಯವಾಗುವುದರಲ್ಲಿ ಯಾವುದೇ ಸಂಶಯ ಬೇಡ. ಕಾಂಪಾಕ್ಟ್ ಎಸ್‌ಯುವಿ ಸೆಗ್ಮೆಂಟ್‌ನಲ್ಲಿ ಇದೊಂದು ಸೆನ್ಸೇಷನ್ ಆಗಲಿದೆ ಎಂದು ಕಾರು ಪಂಡಿತರು ಈಗಾಗಲೇ ಈ ಕಾರಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ.

ಇನ್ನು ಸದ್ಯಕ್ಕೆ ಭಾರತದಲ್ಲಿರುವ ಎಂಜಿ ಕಾಮೆಟ್ ಬಗ್ಗೆ ನೋಡುವುದಾದರೆ ಈ ಕಾರು ಮಾರುಕಟ್ಟೆಯಲ್ಲಿ 6.99 ಲಕ್ಷಕ್ಕೆ ಆರಂಭವಾಗುತ್ತದೆ. ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು 17.3kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನಿಂದ ಚಾಲಿತವಾಗಿದೆ, ಇದು ARAI- ಸ್ಟ್ಯಾಂಡರ್ಡ್ ಆಗಿ 230 ಕಿ.ಮೀ ರೇಂಜ್ ಅನ್ನು ನೀಡುತ್ತದೆ, ಕಾಮೆಟ್ ಇವಿ ಕೇವಲ AC ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಮತ್ತು 3.3kW ಚಾರ್ಜಿಂಗ್ ಕೇಬಲ್‌ನೊಂದಿಗೆ ಬ್ಯಾಟರಿ ಪ್ಯಾಕ್ ಅನ್ನು ಚಾರ್ಜ್ ಮಾಡಲು 7 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.
ಇನ್ನು ಈ ಕಾರಿನ ಚಾರ್ಜಿಂಗ್ ಕೇಬಲ್‌ನೊಂದಿಗೆ 10-80% ಚಾರ್ಜ್ 5 ಗಂಟೆಗಳನ್ನು ಸಮಯವನ್ನು ತೆಗೆದುಕೊಳ್ಳುತ್ತದೆ. ಈ ಬ್ಯಾಟರಿ ಪ್ಯಾಕ್ 41.4bhp ಮತ್ತು 110Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಕಾರು ಸಿಂಗಲ್ ಎಲೆಕ್ಟಿಕ್ ಮೋಟರ್‌ಗೆ ಪವರ್ ಕಳುಹಿಸುತ್ತದೆ.

ಜಿಮ್ನಿ 5 ಡೋರ್ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಐಡಲ್ ಸ್ಟಾರ್ಟ್/ ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5L ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 6000 rpmನಲ್ಲಿ 104.8 Ps ಗರಿಷ್ಠ ಪವರ್ ಹಾಗೂ 4000 rpmನಲ್ಲಿ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದ್ದರೂ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದರ 5-ಸ್ವೀಡ್ MT ರೂಪಾಂತರ, 16.94 km/l ಹಾಗೂ 4-ಸ್ವೀಡ್ AT ರೂಪಾಂತರ 16.39 km/l ಮೈಲೇಜ್ ನೀಡುತ್ತದೆ. ಈ ಜಿಮ್ನಿ 5 ಡೋರ್ ಸುತ್ತಳತೆ ಬಗ್ಗೆ ಹೇಳುವುದಾದರೆ, ಇದು 3985 ಎಂಎಂ ಉದ್ದ, 1645 ಎಂಎಂ ಅಗಲ, 1720 ಎತ್ತರವಿದ್ದು, 2590 ಎಂಎಂ ಅಳತೆಯ ವೀಲ್ಸ್ ಬೇಸ್ ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications