ರಣಬೇಟೆಗಾರನಿಗಿಲ್ಲ ಬೇಡಿಕೆ: ಮಾರುತಿಯ ಈ ಬೆಸ್ಟ್ ಎಸ್‍ಯುವಿ ಖರೀದಿಸಲು ಜನ ಹಿಂದೇಟು ಯಾಕೆ?
ಜಿಮ್ನಿ (Jimny) ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ ಜನಪ್ರಿಯ ಎಸ್‍ಯುವಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲೂ ಈ ಎಸ್‍ಯುವಿ ಕ್ರಾಂತಿ ಮಾಡಬಹುದು ಎಂದು ಹಲವರು ಅಂದುಕೊಂಡಿದ್ದರು. ಆದರೆ ಎದುರಾಳಿ ಮಹೀಂದ್ರಾ ಥಾರ್ ಮುಂದೆ ಇದು ಮಂಕಾಗಿದೆ. ಮಾರಾಟದಲ್ಲಿ ಮಾರುತಿ ಸುಜುಕಿ ಜುಮ್ನಿ (Maruti Suzuki Jimny) ಕುಸಿತವನ್ನು ಕಂಡಿದೆ. ಈ ಜಿಮ್ಮಿ ಮಾದರಿಯು ಒಂದು ಕಾಲದ ಆಫ್-ರೋಡ್ ಕಿಂಗ್ ಆಗಿದ್ದ ಜಿಪ್ಸಿಯ ಉತ್ತರಾಧಿಕಾರಿಯಾಗಿ ಬಂದು ಭಾರತೀಯ ವಾಹನ ಪ್ರೇಮಿಗಳ ಮನ ಗೆಲ್ಲುವಲ್ಲಿ ದೊಡ್ದ ಮಟ್ಟದ ಯಶಸ್ವಿ ಗಳಿಸುವಲ್ಲಿ ವಿಫಲವಾಗಿದೆ.
ಮಾರುತಿ ಸುಜುಕಿ ಕಂಪನಿಯು 2024ರ ನವೆಂಬರ್ ತಿಂಗಳಿನ ರುತಿ ಸುಜುಕಿ ಜುಮ್ನಿಯ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಜಿಮ್ನಿಯ 988 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ಜಿಮ್ನಿಯ 1,020 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.3 ರಷ್ಟು ಕುಸಿತವನ್ನು ಕಂಡಿದೆ.

ಜಿಮ್ನಿ ಎಸ್‍ಯುವಿಯ ಮಾರಾಟದಲ್ಲಿ ಕುಸಿತವನ್ನು ಕಾಣುತ್ತಿದ್ದರೆ, ಮತ್ತೊಂದಡೆ ಎದುರಾಳಿ ಮಹೀಂದ್ರಾ ಥಾರ್ ಮಾರಾಟದಲ್ಲಿ ಹೊಸ ದಾಖಲೆಗಳನ್ನು ಬರೆದು ಮುನ್ನುಗುತ್ತಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿ ಬಜೆಟ್ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಮಾರುತಿ ಸುಜುಕಿ ಜಿಮ್ನಿ ಕೂಡ ಅತ್ಯುತ್ತಮ ಬಜೆಟ್ ಬೆಲೆಯ ಮಾದರಿಯಾಗಿದೆ. ಲೈಫ್ ಸ್ಟೈಲ್ ಆಫ್-ರೋಡರ್, ಮಾರುತಿ ಸುಜುಕಿ ಜಿಮ್ನಿ ದೇಶದ ಅತ್ಯಂತ ಸಮರ್ಥ ಆಫ್-ರೋಡರ್‌ಗಳಲ್ಲಿ ಒಂದು ಎಂದು ಸಾಬೀತಾಗಿದೆ.
ಆದರೆ ಇದು ಆಫ್-ರೋಡ್ ವಾಹನಗಳ ಪ್ರೇಮಿಗಳು ಸೆಲೆಯುವಲ್ಲಿ ಜಿಮ್ನಿ ಯಶಸ್ವಿಯಾಗುತ್ತಿಲ್ಲ. ಈ ಮಾರುತಿ ಸುಜುಕಿ ಜಿಮ್ನಿಯಲ್ಲಿ ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ. ಈ ಎಂಜಿನ್ 104.8 ಪಿಎಸ್ ಪವರ್ ಹಾಗೂ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೀಡಿದೆ.

ಮಾರುತಿ ಸುಜುಕಿ ಜಿಮ್ನಿಯನ್ನು ಪ್ರತಿಸ್ಪರ್ಧಿಗಳಾದ ಥಾರ್ ಮತ್ತು ಗೂರ್ಖಾಗೆ ಹೋಲಿಸಿದರೆ ಡ್ರೈವ್ ಮಾಡಲು ಹೆಚ್ಚು ಸುಲಭವಾಗಿದೆ. ಈ ಮಾರುತಿ ಜಿಮ್ನಿ (Maruti Jimny) ಕಾಂಪ್ಯಾಕ್ಟ್ ಆಯಾಮಗಳನ್ನು ಹೊಂದಿದೆ. ಇದು ಗರಿಷ್ಠ ಟ್ರಾಫಿಕ್ ಸಮಯದಲ್ಲಿ ಚಾಲನೆ ಮಾಡಲು ಸುಲಭ. ರಸ್ತೆಯಲ್ಲಿ ಕಡಿಮೆ ಜಾಗ ಸಾಕಾಗುತ್ತದೆ. ಇದರ ಹೊರತಾಗಿ, ಜಿಮ್ನಿಯು ಕುಶಲತೆಯಿಂದ ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ. ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ.
ಥಾರ್‌ಗೆ ಹೋಲಿಸಿದರೆ ಜಿಮ್ನಿ ದೈನಂದಿನ ಬಳಕೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದೆ. ಈ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ. ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದೆ. ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ.

ಮಾರುತಿ ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹೊಂದಿದೆ. ಇದರೊಂದಿಗೆ ಆಟೋಮ್ಯಾಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಕೂಡ ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications