Maruti Jimny: ಮಾರುತಿ ಸುಜುಕಿ ಜಿಮ್ನಿಗೆ ದೊಡ್ಡ ಬೇಡಿಕೆ, ಭಾರೀ ಸಂಖ್ಯೆಯಲ್ಲಿ ಶೋರೂಂ ಎಡತಾಕಿದ ಖರೀದಿದಾರರು!
ದೇಶದ ಯುವ ಜನರಿಗೆ ನಿಮ್ಮ ಮೆಚ್ಚಿನ ಆಫ್-ರೋಡ್ ಎಸ್‌ಯುವಿ ಯಾವುದೆಂದು ಕೇಳಿದರೆ ತಕ್ಷಣ ಬರುವ ಒಂದೇ ಉತ್ತರ ಮಾರುತಿ ಸುಜುಕಿ ಜಿಮ್ನಿ ಎಂದು. ಅಷ್ಟರ ಮಟ್ಟಿಗೆ ದೇಶೀಯ ಮಾರುಕಟ್ಟೆಯಲ್ಲಿ ಖ್ಯಾತಿಗಳಿಸಿದೆ. ಸದ್ಯ, ಡಿಸೆಂಬರ್ (2023) ತಿಂಗಳ ಮಾರಾಟ ವರದಿ ಪ್ರಕಟಗೊಂಡಿದ್ದು, ಜಿಮ್ನಿ (Jimny) 5-ಡೋರ್ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿವೆ.
ಒಟ್ಟು 4500 ಯುನಿಟ್ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಎಸ್‌ಯುವಿ ಸೇಲ್ ಆಗಿದೆ. ಹೊಸ ಥಂಡರ್ ಎಡಿಷನ್ ಬಿಡುಗಡೆ, ದೇಶಾದ್ಯಂತ ವಿವಿಧ ಡೀಲರ್‌ಶಿಪ್ ಗಳು ಈ ಎಸ್‌ಯುವಿಗೆ ನೀಡಿದ್ದ ದೊಡ್ಡ ರಿಯಾಯತಿ ಇದಕ್ಕೆ ಪ್ರಮುಖ ಕಾರಣವಾಗಿದೆ. ಥಂಡರ್ ಎಡಿಷನ್ ವೈಶಿಷ್ಟ್ಯ ಹಾಗೂ ಎಂಜಿನ್ ವಿಚಾರದಲ್ಲಿ ಯಾವುದೇ ಬದಲಾವಣೆಯನ್ನು ಪಡೆದುಕೊಂಡಿಲ್ಲ. ಆದರೆ, ಹೊರ ಭಾಗದಲ್ಲಿ ಪರ್ವತದ ವಿನ್ಯಾಸವನ್ನು ಹೊಂದಿದೆ.

ಸದ್ಯ ಮಾರುತಿ ಸುಜುಕಿ ಜಿಮ್ನಿ 5-ಡೋರ್ ಎಸ್‌ಯುವಿ, ರೂ.12.74 ಲಕ್ಷದಿಂದ ರೂ.15.05 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಜೀಟಾ ಮತ್ತು ಆಲ್ಫಾ ರೂಪಾಂತರ ಜೊತೆಗೆ ಸಿಜ್ಲಿಂಗ್ ರೆಡ್, ಗ್ರಾನೈಟ್ ಗ್ರೇ, ನೆಕ್ಸಾ ಬ್ಲೂ, ಬ್ಲೂಶ್ ಬ್ಲ್ಯಾಕ್, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ 2 ಡುಯಲ್ ಟೋನ್, 5 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ಮಾರುತಿ ಸುಜುಕಿ ಜಿಮ್ನಿ ಪವರ್‌ಟ್ರೇನ್ ಬಗ್ಗೆ ಹೇಳುವುದಾದರೆ, ಈ ಎಸ್‌ಯುವಿ ರೂ.1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 104.8 Ps ಗರಿಷ್ಠ ಪವರ್ ಮತ್ತು 134.2 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ವೀಡ್ ಮ್ಯಾನುವಲ್ ಮತ್ತು 4-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 16.39 km/l ರಿಂದ 16.94 km/l ಮೈಲೇಜ್ ನೀಡುತ್ತದೆ.
ಈ ಎಸ್‌ಯುವಿ ಸುತ್ತಳತೆ ಬಗ್ಗೆ ಮಾತನಾಡುವುದಾದರೆ, ಇದು 3985 ಎಂಎಂ ಉದ್ದ, 1645 ಎಂಎಂ ಅಗಲ, 1720 ಎತ್ತರವಿದ್ದು, 2590 ಎಂಎಂ ಅಳತೆಯ ವೀಲ್ಸ್ ಬೇಸ್ ಅನ್ನು ಹೊಂದಿದೆ. ವಿನ್ಯಾಸದ ಬಗ್ಗೆ ಹೇಳುವುದಾದರೆ, ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಒಳಗೊಂಡಿದೆ.
ಮಾರುತಿ ಸುಜುಕಿ ಜಿಮ್ನಿ 5-ಡೋರ್ ಎಸ್‌ಯುವಿ, ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಐಡಲ್ ಸ್ಟಾರ್ಟ್/ ಸ್ಟಾಪ್ ಬಟನ್, 9 - ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ ಪ್ಲಸ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ಫೀಚರ್ಸ್ ಇವೆ.
ಸುರಕ್ಷತೆಯ ಸಲುವಾಗಿ ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿ ಸಾಕಷ್ಟು ಉತ್ತಮವಾಗಿದ್ದು, 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಬ್ರೇಕ್ ಲಿಮಿಟೆಡ್ ಸ್ಲಿಪ್ ಡಿಫರೆನ್ಷಿಯಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ಸೇಫ್ಟಿ ವೈಶಿಷ್ಟ್ಯಗಳಿವೆ. ಈ ಕಾರಿಗೆ ಮಹೀಂದ್ರಾ ಥಾರ್ ಮತ್ತು ಫೋರ್ಸ್ ಗೂರ್ಖಾ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications