Maruti Suzuki: ಮಧ್ಯಮ ವರ್ಗದವರಿಗೆ ಖುಷಿ ಸುದ್ದಿ.. ಭಾರಿ ಕಡಿಮೆ ಬೆಲೆಗೆ 3 ಹೊಸ ಕಾರುಗಳು ಬರಲಿವೆ.. ದುಡ್ಡು ಕೂಡಿಡಿ!

ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್, ಇಗ್ನಿಸ್, ಸ್ವಿಫ್ಟ್, ಬಲೆನೊ, ಬ್ರೆಝಾ, ಎರ್ಟಿಗಾ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಮತ್ತು ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಪ್ರತಿ ತಿಂಗಳು ಪ್ರಕಟವಾಗುವ ಕಾರು ಮಾರಾಟದ ಅಂಕಿಅಂಶದ ಪಟ್ಟಿಯಲ್ಲಿಯೂ ಕಂಪನಿ ಕಾರುಗಳೇ ಮೊದಲ ಸ್ಥಾನದಲ್ಲಿರುತ್ತವೆ. ಸದ್ಯ, ದೇಶದ ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು 3 ಹೊಸ ಕಾರುಗಳನ್ನು ಮಾರಾಟಕ್ಕೆ ತರಲು ಸಿದ್ಧತೆ ನಡೆಯುತ್ತಿದೆ.

ಮೊದಲಿಗೆ ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ತಲೆಮಾರಿನ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್ ಬಗ್ಗೆ ಮಾತನಾಡೋಣ. ಈ ಕಾರನ್ನು 2025ರ ಜನವರಿಯಲ್ಲಿ ಆಯೋಜಿಸಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಬಹುದು ಎಂದು ತಿಳಿದುಬಂದಿದೆ. ಇದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ ಮತ್ತು 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ.

Maruti Suzuki Launch Upcoming Years New Sedan Compact Mpv And Suv In India Low Cost

ನೂತನ ಡಿಜೈರ್ ರೂ.6.50 ಲಕ್ಷದಿಂದ ರೂ.10.50 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದ್ದು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರಲಿದೆ. ಬೃಹತ್ ಗ್ರಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ಸ್-ಅಪ್ ಡಿಸ್ಪ್ಲೇ, 6-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ಮಾರುತಿ ಸುಜುಕಿಯು ಹೊಚ್ಚ ಹೊಸ ಕಾಂಪ್ಯಾಕ್ಟ್ ಎಂವಿಪಿಯನ್ನು ಅಭಿವೃದ್ಧಿಪಡಿಸುತ್ತಿದೆ. ಇದಕ್ಕೆ 'ವೈಡಿಬಿ' ಎಂಬ ಕೋಡ್ ನೇಮ್ (ಸಂಕೇತ ನಾಮ) ಇಡಲಾಗಿದ್ದು, ತಯಾರಿಕೆ ಹಂತದಲ್ಲಿದೆ. ಬಹುತೇಕ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ 'ಸ್ಪೇಸಿಯಾ' ಕಾರಿನ ತದ್ರೂಪದಂತಿದೆ. ದೇಶೀಯವಾಗಿ ರೆನಾಲ್ಟ್ ಟ್ರೈಬರ್ ಎಂಪಿವಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲಿದ್ದು, 2026ರಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.

Maruti Suzuki Launch Upcoming Years New Sedan Compact Mpv And Suv In India Low Cost

ಈ ನೂತನ ಮಾರುತಿ ಸುಜುಕಿ ವೈಡಿವಿ ಕಾರು, ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನಂತೆ 1.2-ಲೀಟರ್ 3-ಸಿಲಿಂಡರ್ ಝಡ್-ಸೀರೀಸ್ ಪೆಟ್ರೋಲ್ ಎಂಜಿನ್ ಹೊಂದಿರಲಿದೆ. ಜೊತೆಗೆ ದೊಡ್ಡದಾಗಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ ಹಾಗೂ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ ಎಂದು ತಿಳಿದುಬಂದಿದೆ. ರೂ.6.5 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಫೇಸ್‌ಲಿಫ್ಟ್ (Maruti Suzuki Fronx Facelift) ಎಸ್‌ಯುವಿ ಸಹ ತಯಾರಿಕೆ ಹಂತದಲ್ಲಿದೆ ಎಂದು ತಿಳಿದುಬಂದಿದೆ. ಅಂದರೆ, ಪ್ರಸ್ತುತ ಮಾರಾಟದಲ್ಲಿರುವ ಫ್ರಾಂಕ್ಸ್ ಕಾರನ್ನು ಒಂದಷ್ಟು ನವೀಕರಣಗಳೊಂದಿಗೆ ಮೇಲ್ದರ್ಜೆಗೇರಿಸಲಾಗುತ್ತಿದೆ. ಮುಂದಿನ ವರ್ಷ (2025) ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಆದರೆ, ಹೊಸ ಎಸ್‌ಯುವಿ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

Maruti Suzuki Launch Upcoming Years New Sedan Compact Mpv And Suv In India Low Cost

ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ರೂ.7.51 - ರೂ.13.04 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ ಮತ್ತು 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, September 26, 2024, 8:30 [IST]
English summary
Maruti suzuki launch upcoming years new sedan compact mpv and suv in india low cost
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+