Maruti Suzuki: ಗ್ರ್ಯಾಂಡ್ ವಿಟಾರಾ, ಫ್ರಾಂಕ್ಸ್ ಕಾರುಗಳಿಗೆ ರೂ.1 ಲಕ್ಷ ರಿಯಾಯಿತಿ, ಈಗ ಬಿಟ್ಟರೆ ಸಿಗುವುದಿಲ್ಲ!

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿ ಗಳಿಸಿದೆ. ದೇಶಾದ್ಯಂತವಿರುವ ಹಲವು ನೆಕ್ಸಾ (Nexa) ಡೀಲರ್‌ಶಿಪ್‌ಗಳು ಮಾರಾಟವಾಗದಿರುವ 2023ರ ಮಾದರಿಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಿಸಿದ್ದು, ಈಗಲೂ ಮುಂದುವರಿಸಿಕೊಂಡು ಬಂದಿವೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ವಿವಿಧ ಕಾರಣಗಳಿಗೆ ಕೆಲವೊಂದು ಡೀಲರ್‌ಶಿಪ್‌ಗಳಿಗೆ 2023ರ ವರ್ಷಾಂತ್ಯದವರೆಗೂ ಹೆಚ್ಚಿನ ಕಾರುಗಳನ್ನು ಮಾರಾಟಗೊಳಿಸಲು ಸಾಧ್ಯವಾಗಿಲ್ಲ. ಇದರಿಂದ ಹೆಚ್ಚಿನ ಸ್ಟಾಕ್ ಹಾಗೆಯೇ ಉಳಿದಿದೆ. ಅದನ್ನು ಬೇಗ ಖಾಲಿ ಮಾಡಬೇಕೆಂಬ ಧಾವಂತದಲ್ಲಿ ಡೀಲರ್‌ಶಿಪ್‌ಗಳಿದ್ದು, ದೊಡ್ಡ ಮಟ್ಟದ ರಿಯಾಯಿತಿಯನ್ನು ನೀಡುತ್ತಿವೆ. ಹಿಂದಿನ ವರ್ಷದ ಗ್ರ್ಯಾಂಡ್ ವಿಟಾರಾ, ಫ್ರಾಂಕ್ಸ್ ಕಾರುಗಳು ರೂ.1 ಲಕ್ಷವರೆಗೆ ಡಿಸ್ಕೌಂಟ್ ಆಫರ್ ಪಡೆದಿವೆ.

Maruti Suzuki my2023 Grand Vitara And Fronx cars Available 1 Lakh Discount

ಈ ವರ್ಷಾರಂಭದ ಜನವರಿಯಲ್ಲಿ 2023ರ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Grand Vitara) ಹಾಗೂ ಫ್ರಾಂಕ್ಸ್ (Fronx) ಎಸ್‌ಯುವಿಗಳು ಕ್ರಮವಾಗಿ ರೂ.79,000 ಹಾಗೂ ರೂ.83,000 ರಿಯಾಯಿತಿ ಪ್ರಯೋಜನವನ್ನು ಪಡೆದಿದ್ದವು. ಹೆಚ್ಚುವರಿಯಾಗಿ ಮಾರಾಟ ಪ್ರಮಾಣವನ್ನು ಅಧಿಕಗೊಳಿಸಲು ವಿವಿಧ ಡೀಲರ್‌ಶಿಪ್‌ಗಳು ರೂ.50,000 ನಗದು ರಿಯಾಯಿತಿ (Cash Discount)ಯನ್ನು ಘೋಷಿಸಿವೆ. ಈ ಮೂಲಕ ಇವೆರೆಡು ಕಾರುಗಳು ರೂ.1.30 ಲಕ್ಷ ಡಿಸ್ಕೌಂಟ್ ಆಫರ್ ಹೊಂದಿವೆ.

ಅದೇ ರೀತಿಯಲ್ಲಿ 2023ರಲ್ಲಿ ಉತ್ಪಾದನೆಗೊಂಡ ಮಾರುತಿ ಸುಜುಕಿ ಸಿಯಾಜ್ (Ciaz) ಮತ್ತು ಇಗ್ನಿಸ್ (Ignis) ಕಾರುಗಳು ಸಹ ಭರ್ಜರಿ ರಿಯಾಯಿತಿ ಸೌಲಭ್ಯವನ್ನು ಪಡೆದಿದ್ದು, ರೂ.61,000 ದಿಂದ ರೂ. 48,000 ಡಿಸ್ಕೌಂಟ್ ಲಭ್ಯವಿದೆ. ಆದರೆ, ಕೆಲವು ಡೀಲರ್‌ಶಿಪ್‌ಗಳು ರೂ.1 ಲಕ್ಷವರೆಗೆ ರಿಯಾಯಿತಿಯನ್ನು ನೀಡಿವೆ ಎಂಬ ವಿವರಗಳು ದೊರೆತಿವೆ. ಹೋದ ವರ್ಷವೇ ಉತ್ತಮ ರಿಯಾಯಿತಿ ಪಡೆದುಕೊಂಡ ಹಿನ್ನೆಲೆ, ಜಿಮ್ನಿ ಎಸ್‌ಯುವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ಸ್ಟಾಕ್ ವಿರಳವಾಗಿದೆ.

Maruti Suzuki my2023 Grand Vitara And Fronx cars Available 1 Lakh Discount

ಪ್ರಸ್ತುತ ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara), ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಹೈಬ್ರಿಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ಸಿಗಲಿದ್ದು, 19.38 ರಿಂದ 27.97 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಯಬಹುದು.

ಗ್ರ್ಯಾಂಡ್ ವಿಟಾರಾ ಕಾರು 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ, ರೂ.7.51 ಲಕ್ಷದಿಂದ ರೂ.13.04 ಲಕ್ಷ ದರವನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 5-ಸ್ವೀಡ್ ಆಟೋಮೆಟಿಕ್, 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಒಳಗೊಂಡಿದೆ.

ಈ ಫ್ರಾಂಕ್ಸ್ 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, 20.1 ರಿಂದ 28.51 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ನಂತಹ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Thursday, February 29, 2024, 12:38 [IST]
English summary
Maruti suzuki my2023 grand vitara and fronx cars available 1 lakh discount
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+