Maruti Suzuki: ಗ್ರಾಹಕರಿಂದ ಭರ್ಜರಿ ಖರೀದಿ.. ಮಾರುತಿಯಿಂದ ಒಂದೇ ವರ್ಷದಲ್ಲಿ 20 ಲಕ್ಷ ಕಾರು ತಯಾರಿಕೆ!
ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿದೆ. ಅರೆನಾ ಹಾಗೂ ನೆಕ್ಸಾ ಡೀಲರ್‌ಶಿಪ್ ಮೂಲಕ ಆಲ್ಟೊ 10, ಇಗ್ನಿಸ್, ಸೆಲೆರಿಯೊ, ವ್ಯಾಗನ್ಆರ್, ಬ್ರೆಝಾ, ಮತ್ತು ಗ್ರ್ಯಾಂಡ್ ವಿಟಾರಾ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿರುವುದರಿಂದ ಕಂಪನಿ ಮಾರಾಟ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗಲೇ ಇದೆ. ಸದ್ಯ, ಮಾರುತಿ ಸುಜುಕಿ ಕಾರುಗಳ ತಯಾರಿಕೆಯಲ್ಲಿ ಹೊಸ ಮೈಲಿಗಲ್ಲೊಂದನ್ನು ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಈ ವರ್ಷ (2024) ಬರೋಬ್ಬರಿ 20 ಲಕ್ಷ ಕಾರುಗಳನ್ನು ತಯಾರಿಸುವ ಮೂಲಕ ಹೊಸ ಇತಿಹಾಸ ಬರೆದಿದೆ. ಈ ಮೂಲಕ ಈ ಬೃಹತ್ ಉತ್ಪಾದನಾ ಮೈಲಿಗಲ್ಲು ಮುಟ್ಟಿದ ದೇಶದ ಮೊದಲ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಇದು ಮಾರುತಿ ಸುಜುಕಿಗೆ ಹೆಚ್ಚಿನ ಬಲವನ್ನು ಕೂಡ ತಂದುಕೊಟ್ಟಿದೆ.

ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಲು ಮಾರುತಿ ಸುಜುಕಿ ಶೇಕಡ 60% ಕಾರುಗಳನ್ನು ಹರಿಯಾಣದ ಮನೇಸರ್ ಮತ್ತು ಗುರುಗ್ರಾಮದ ಉತ್ಪಾದನಾ ಘಟಕದಲ್ಲಿ ತಯಾರಿಸುತ್ತದೆ. ಶೇಕಡ 40% ಕಾರುಗಳನ್ನು ಗುಜರಾತ್‌ನ ಹಂಸಲಪುರದಲ್ಲಿ ಉತ್ಪಾದಿಸುತ್ತದೆ. ಅದರಲ್ಲೂ ಕಂಪನಿಯು ಅತ್ಯಧಿಕ ಸಂಖ್ಯೆಯಲ್ಲಿ ಮಾರಾಟವಾಗುವ ಬ್ರೆಝಾ, ಫ್ರಾಂಕ್ಸ್, ಎರ್ಟಿಗಾ, ವ್ಯಾಗನ್ಆರ್ ಮತ್ತು ಬಲೆನೊ ಕಾರುಗಳ ತಯಾರಿಕೆಗೆ ಹೆಚ್ಚಿನ ಒತ್ತು ನೀಡಿದೆ.
ಮಾರುತಿ ಸುಜುಕಿಯ ಈ ಮೂರು ತಯಾರಿಕಾ ಘಟಕಗಳು ವಾರ್ಷಿಕ ಸರಿ ಸುಮಾರು 23 ಲಕ್ಷದಷ್ಟು ಕಾರುಗಳನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿವೆ. ಮುಂಬರುವ ದಿನಗಳಲ್ಲಿ ಜಾಗತಿಕ ಹಾಗೂ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಲು 40 ಲಕ್ಷ ಕಾರುಗಳು ಉತ್ಪಾದಿಸಲು ಸಹ ಕಂಪನಿಯು ಉದ್ದೇಶಿಸಿದೆ ಎಂದು ವರದಿಯಾಗಿದೆ.

ಸದ್ಯ ಮಾರುತಿ ಸುಜುಕಿಯ ಯಶಸ್ಸಿಗೆ ಕಾರಣವಾಗಿರುವ ಎರ್ಟಿಗಾ ಎಂಪಿವಿ ಬಗ್ಗೆ ಹೇಳುವುದಾದರೆ, ಇದು ರೂ.8.69 ಲಕ್ಷದಿಂದ ರೂ.13.03 ಲಕ್ಷ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಒಳಗೊಂಡಿದೆ. 20.3 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 7 ಮಂದಿ ಓಡಾಟ ನಡೆಸಬಹುದು.
ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.5.54 ಲಕ್ಷದಿಂದ ರೂ.7.33 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಒಳಗೊಂಡಿದೆ. 23.56 ರಿಂದ 33.48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಜನರು ಸುಲಭವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು.
ಮಾರುತಿ ಸುಜುಕಿ ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರು ರೂ.6.66 ಲಕ್ಷದಿಂದ ರೂ.9.84 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಪಡೆದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








