ಈ ಮಾರುತಿ ಸುಜುಕಿ ಕಾರುಗಳದ್ದೇ ಸಿಂಹಪಾಲು.. ಕ್ಯೂ ನಿಂತ ಗ್ರಾಹಕರು, 5-ಸೀಟರ್.. 7.51 ಲಕ್ಷ ಆರಂಭಿಕ ಬೆಲೆ!

ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿದೆ. ದೇಶಾದ್ಯಂತ ನೆಕ್ಸಾ (Nexa) ಡೀಲರ್‌ಶಿಪ್ ಮೂಲಕ ಇಗ್ನಿಸ್, ಬಲೆನೊ, ಸಿಯಾಜ್, ಎಕ್ಸ್ಎಲ್6, ಫ್ರಾಂಕ್ಸ್, ಜಿಮ್ನಿ, ಗ್ರ್ಯಾಂಡ್ ವಿಟಾರಾ ಮತ್ತು ಇನ್ವಿಕ್ಟೊ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇದರಿಂದ ಕಂಪನಿಯ ಕಾರುಗಳ ಮಾರಾಟ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 2019ರ ಏಪ್ರಿಲ್‌ನಿಂದ 2024ರ ಆಗಸ್ಟ್ ತಿಂಗಳವರೆಗೆ ನೆಕ್ಸಾ ಶೋರೂಂಗಳಲ್ಲಿ ಬರೋಬ್ಬರಿ 6,23,579 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿದ್ದು, ಅದರಲ್ಲಿ ಈ 3 ಕಾರುಗಳು ಸಿಂಹಪಾಲನ್ನು ಹೊಂದಿವೆ.

ಕಳೆದ 5 ವರ್ಷಗಳಲ್ಲಿ (ಏಪ್ರಿಲ್‌ 2019 - ಆಗಸ್ಟ್ 2024) ಮಾರುತಿ ಸುಜುಕಿಗೆ ಸೇರಿದ ವಿವಿಧ ನೆಕ್ಸಾ ಡೀಲರ್‌ಶಿಪ್‌ಗಳು ಗ್ರ್ಯಾಂಡ್ ವಿಟಾರಾ (Grand Vitara), ಫ್ರಾಂಕ್ಸ್ (Fronx) ಮತ್ತು ಎಕ್ಸ್ಎಲ್6 (XL6) ಕಾರುಗಳ 5,96,999 ಯುನಿಟ್‌ನ್ನು ಮಾರಾಟ ಮಾಡಿವೆ. ಒಟ್ಟಾರೆ ಮಾರಾಟದ ಅಂಕಿಅಂಶದಲ್ಲಿ ಈ ಕಾರುಗಳ ಪಾಲು ಶೇಕಡ 95.74% ಇದೆ.

Maruti Suzuki Nexa Dealership Grand Vitara Fronx XL6 Cars Become Game Changer 95 74 Percent Shares

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾದ 2,17,968 ಯುನಿಟ್, ಫ್ರಾಂಕ್ಸ್‌ನ 1,94,702 ಯುನಿಟ್, ಎಕ್ಸ್ಎಲ್6ನ 1,84,329 ಯುನಿಟ್, ಜಿಮ್ನಿಯ 21,042 ಯುನಿಟ್ ಹಾಗೂ ಇನ್ವಿಕ್ಟೊದ 5,538 ಯುನಿಟ್ ಕಾರುಗಳು ಮಾರಾಟವಾಗಿವೆ. ಆದರೂ, ನಾನಾ ಕಾರಣಗಳಿಗೆ ಗ್ರಾಹಕರನ್ನು ಆಕರ್ಷಿಸುವುದರಲ್ಲಿ ಜನಪ್ರಿಯ ಜಿಮ್ನಿ 5-ಡೋರ್ ಎಸ್‌ಯುವಿ ಹಾಗೂ ಇನ್ವಿಕ್ಟೊ ಎಂಪಿವಿ ವಿಫಲವಾಗಿವೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಪ್ರಖ್ಯಾತ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ, ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19.38 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Maruti Suzuki Nexa Dealership Grand Vitara Fronx XL6 Cars Become Game Changer 95 74 Percent Shares

ಈ ಗ್ರ್ಯಾಂಡ್ ವಿಟಾರಾ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್‌ (Maruti Suzuki Fronx) ಕೂಡ ಉತ್ತಮ ಎಸ್‌ಯುವಿಯಾಗಿದ್ದು, ರೂ.7.51 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿಯೂ 5 ಜನರು ಸಂಚರಿಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Nexa Dealership Grand Vitara Fronx XL6 Cars Become Game Changer 95 74 Percent Shares

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.27 ರಿಂದ 26.32 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 6 ಮಂದಿ ಓಡಾಟ ನಡೆಸಬಹುದು. 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, September 26, 2024, 15:28 [IST]
English summary
Maruti suzuki nexa dealership grand vitara fronx xl6 cars become game changer 95 percent shares
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+