Maruti Suzuki: ವರಮಹಾಲಕ್ಷ್ಮಿಗೆ ಹೊಸ ಕಾರು ತೆಗೆದುಕೊಳ್ಳಬೇಕೇ.. ರೂ.2.50 ಲಕ್ಷದವರೆಗೆ ಆಫರ್!

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಮನೆ ಮಾತಾಗಿದೆ. ವಿವಿಧ ಹ್ಯಾಚ್‌ಬ್ಯಾಕ್, ಸೆಡಾನ್ ಮತ್ತು ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ದೇಶಾದ್ಯಂತ ಆಯ್ದ ಮಾರುತಿ ಸುಜುಕಿ ನೆಕ್ಸಾ (NEXA) ಡೀಲರ್‌ಶಿಪ್‌ಗಳು ಈ ಆಗಸ್ಟ್‌ನಲ್ಲಿ ದೊಡ್ಡಮಟ್ಟದ ಹಣಕಾಸಿನ ಪ್ರಯೋಜನವನ್ನು ಘೋಷಣೆ ಮಾಡಿವೆ. ಅದರಲ್ಲೂ ಬೆಂಗಳೂರಿನಲ್ಲಿ ಇಗ್ನಿಸ್, ಫ್ರಾಂಕ್ಸ್, ಬಲೆನೊ, ಸಿಯಾಜ್, ಗ್ರ್ಯಾಂಡ್ ವಿಟಾರಾ, ಎಕ್ಸ್ಎಲ್6 ಹಾಗೂ ಜಿಮ್ನಿ ಕಾರುಗಳು ಭಾರಿ ರಿಯಾಯಿತಿಯನ್ನು ಪಡೆದಿವೆ.

ಮೊದಲಿಗೆ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಹ್ಯಾಚ್‌ಬ್ಯಾಕ್ ಹೊಂದಿರುವ ಹಣಕಾಸಿನ ಪ್ರಯೋಜನದ ಬಗ್ಗೆ ಮಾತನಾಡೋಣ. ಈ ಕಾರು ರೂಪಾಂತರ (ವೇರಿಯೆಂಟ್)ಗಳನ್ನು ಅವಲಂಭಿಸಿ, 51,000 ರಿಂದ 56,000ವರೆಗೆ ರಿಯಾಯಿತಿಯನ್ನು ಪಡೆದಿದೆ. ನೂತನ ಇಗ್ನಿಸ್ ರೂ.5.49 ಲಕ್ಷದಿಂದ ರೂ.8.06 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 20.89 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Maruti Suzuki Nexa Discount Upto Rs 2 Lakh Ignis Baleno Ciaz Grand Vitara Fronx Jimny

ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.41,000 ದಿಂದ ರೂ.56,000 ರಿಯಾಯಿತಿ ಹೊಂದಿದೆ. ಈ ಕಾರು ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಒಳಗೊಂಡಿದ್ದು, 22.35 ರಿಂದ 30.61 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸಿಯಾಜ್ (Maruti Suzuki Ciaz) ಸೆಡಾನ್ ಎಲ್ಲ ರೂಪಾಂತರಗಳು ರೂ.41,000ವರೆಗೆ ರಿಯಾಯಿತಿ ಪ್ರಯೋಜನವನ್ನು ಪಡೆದಿವೆ. ಈ ಕಾರು, ರೂ.9.40 ಲಕ್ಷದಿಂದ ರೂ.12.29 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 20.04 ರಿಂದ 20.65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳಿವೆ.

Maruti Suzuki Nexa Discount Upto Rs 2 Lakh Ignis Baleno Ciaz Grand Vitara Fronx Jimny

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಜನಪ್ರಿಯ ಎಸ್‌ಯುವಿಯಾಗಿದ್ದು, ರೂ.36000 ದಿಂದ ರೂ.1,25,000 ರಿಯಾಯಿತಿಯನ್ನು ಒಳಗೊಂಡಿದೆ. ಈ ಕಾರು ರೂ.10.99 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಮತ್ತು ಸಿಎನ್‌ಜಿ ಎಂಜಿನ್ ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಕೂಡ ಪಡೆದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ, ರೂ.13,000 ದಿಂದ ರೂ.43,000ವರೆಗೆ ರಿಯಾಯಿತಿ ಹೊಂದಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Maruti Suzuki Nexa Discount Upto Rs 2 Lakh Ignis Baleno Ciaz Grand Vitara Fronx Jimny

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಎಂಪಿಯಾಗಿದ್ದು, ರೂ.28,000 ದಿಂದ ರೂ.38,000ವರೆಗೆ ರಿಯಾಯಿತಿ ಪ್ರಯೋಜನವನ್ನು ಪಡೆದಿದೆ. ಈ ಕಾರು ರೂ.11.61 ಲಕ್ಷದಿಂದ ರೂ.14.77 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ.

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಭಾರಿ ರಿಯಾಯಿತಿಯನ್ನು ಪಡೆದಿದ್ದು, ರೂ.1,98,000 ದಿಂದ ರೂ.2,53,000ವರೆಗೆ ಹಣಕಾಸಿನ ಪ್ರಯೋಜನ ಲಭ್ಯವಿದೆ. ಈ ಕಾರು ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, August 6, 2024, 13:08 [IST]
English summary
Maruti suzuki nexa discount upto rs 2 lakh lgnis baleno ciaz grand vitara fronx jimny
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+