Nexa: ಮಾರುತಿ ಸುಜುಕಿಯ ಈ ಜನಪ್ರಿಯ ಕಾರುಗಳಿಗೆ ರೂ.80,000 ರಿಯಾಯಿತಿ, ಈಗ ಬಿಟ್ಟರೆ ಮತ್ತೆ ಸಿಗಲ್ಲ!
ಭಾರತದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಜನಪ್ರಿಯತೆ ಗಳಿಸಿದೆ. ಈ ಮಾರ್ಚ್‌ನಲ್ಲಿಯೂ ನೆಕ್ಸಾ (Nexa) ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ವಿವಿಧ ಮಾದರಿಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊದಲಿಗೆ ಅತ್ಯಂತ ಕಡಿಮೆ ಬೆಲೆಗೆ ಖರೀದಿಗೆ ಸಿಗುವ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಬಗ್ಗೆ ಮಾತನಾಡೋಣ. ಈ ಕಾರು ಒಟ್ಟು ರೂ.62,000 ರವರೆಗೆ ಡಿಸ್ಕೌಂಟ್ ಆಫರ್ ಪಡೆದಿದೆ. ಅದರಲ್ಲಿ ರೂ.40,000 ನಗದು ರಿಯಾಯಿತಿ, ರೂ.7,000 ಕಾರ್ಪೊರೇಟ್ ಬೋನಸ್ ಹಾಗೂ ರೂ.15,000 ವಿನಿಮಯ ಬೋನಸ್ ಅನ್ನು ಹೊಂದಿದೆ. ಇದು ರೂ.5.84 ಲಕ್ಷದಿಂದ ರೂ.8.11 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಕೂಡ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಒಟ್ಟು ರೂ.57,000 ರವರೆಗೆ ಡಿಸ್ಕೌಂಟ್ ಒಳಗೊಂಡಿದೆ. ಇದರೊಳಗೆ ರೂ.35,000 ನಗದು ರಿಯಾಯಿತಿ, ರೂ.15,000 ವಿನಿಮಯ ಬೋನಸ್, ರೂ.7,000 ಕಾರ್ಪೊರೇಟ್ ರಿಯಾಯಿತಿಗಳು ಸೇರಿವೆ. ದೇಶೀಯ ಮಾರುಕಟ್ಟೆಯಲ್ಲಿ ಬಲೆನೊ ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಕೂಡ ಉತ್ತಮ ಡಿಸ್ಕೌಂಟ್ ಆಫರ್ ಪಡೆದಿದೆ. ವಿನಿಮಯ ಬೋನಸ್, ಕಾರ್ಪೊರೇಟ್ ಡಿಸ್ಕೌಂಟ್ ಸೇರಿದಂತೆ ಒಟ್ಟು ರೂ.27,000 ರವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಈ ಕಾರು ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿಯೂ ಲಭ್ಯವಿದೆ.

ಮಾರುತಿ ಸುಜುಕಿ ಸಿಯಾಜ್ (Maruti Suzuki Ciaz) ಕಾರು ಬರೋಬ್ಬರಿ ರೂ.57,000 ರವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಅದರಲ್ಲಿ ರೂ. 25,000 ನಗದು ರಿಯಾಯಿತಿ, ರೂ.25,000 ವಿನಿಮಯ ಬೋನಸ್ ಹಾಗೂ ರೂ.7,000 ಕಾರ್ಪೊರೇಟ್ ರಿಯಾಯಿತಿಯೂ ಇದೆ. ಈ ಕಾರು ರೂ.9.40 ರಿಂದ 12.29 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 20.04 ರಿಂದ 20.65 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಪ್ರಖ್ಯಾತ ಆಫ್-ರೋಡ್ ಎಸ್‌ಯುವಿ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ರೂ.50,000 ರವರೆಗೆ ಡಿಸ್ಕೌಂಟ್ ಆಫರ್ ಪಡೆದಿದೆ. ಇದು ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ ಎಂಜಿನ್ ಹೊಂದಿರುವ ಈ ಎಸ್‌ಯುವಿ, 16.39 ರಿಂದ 16.94 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಸಹ ರೂ.80,000 ರವರೆಗೆ ರಿಯಾಯಿತಿ ಪ್ರಯೋಜನವನ್ನು ಒಳಗೊಂಡಿದೆ. ಈ ಕಾರು ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿರುವ ಗ್ರ್ಯಾಂಡ್ ವಿಟಾರಾ, 19.38 - 27.97 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ಮಾರ್ಚ್ ಅಂತ್ಯದೊಳಗೆ ಮಾತ್ರ ಮಾನ್ಯವಾಗಿರಲಿದೆ. ಆದರೂ ರಾಜ್ಯದಿಂದ ರಾಜ್ಯಕ್ಕೆ ಡೀಲರ್ ಶಿಪ್, ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಡಿಸ್ಕೌಂಟ್ ಆಫರ್ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ. ಬಜೆಟ್ ಬೆಲೆಗೆ ಕಾರುಗಳನ್ನು ಹುಡುಕುವವರಿಗೆ ಇವು ಉತ್ತಮ ಆಯ್ಕೆಯಾಗಬಲ್ಲವು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications