ಮಾರುತಿ ಸುಜುಕಿ ಕಾರುಗಳಿಗೆ ಸಖತ್ ಡಿಮ್ಯಾಂಡ್: ಬೆಂಗಳೂರಿನಲ್ಲಿ 500ನೇ ಹೊಸ ನೆಕ್ಸಾ ಶೋರೂಂ ಶುರು
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಪ್ರೀಮಿಯಂ ಕಾರುಗಳನ್ನು ಮಾರಾಟ ಮಾಡಲು 500ನೇ ಹೊಸ ನೆಕ್ಸಾ (Nexa) ಶೋರೂಂನ್ನು ಶುರು ಮಾಡಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಈ ಮಾರಾಟ ಮಳಿಗೆಯನ್ನು (Outlet) ಅದ್ದೂರಿಯಾಗಿ ಉದ್ಘಾಟಿಸಿದೆ. ಕಂಪನಿಯು 2015ರ ಜುಲೈನಲ್ಲಿ ಮೊದಲ ನೆಕ್ಸಾ ಶೋರೂಂನ್ನು ಪ್ರಾರಂಭಿಸಿತ್ತು. ಇಂದು 303 ನಗರಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಜೊತೆಗೆ 2025ರ ಆರಂಭದ ವೇಳೆಗೆ ಶ್ರೇಣಿ-2 (Tier-2) ಮತ್ತು ಶ್ರೇಣಿ-3 (Tier 3) ನಗರಗಳಲ್ಲಿ 100 ನೆಕ್ಸಾ ಶೋರೂಂಗಳನ್ನು ತೆರೆಯಲು ಉದ್ದೇಶಿಸಿದೆ.
ಮಾರುತಿ ಸುಜುಕಿ ಒಟ್ಟಾರೆ ಕಾರು ಮಾರಾಟದಲ್ಲಿ ಶೇಕಡ 30% ಪಾಲನ್ನು ನೆಕ್ಸಾ ಶೋರೂಂಗಳು ಹೊಂದಿವೆ. ಕಂಪನಿಯು ಸಣ್ಣ ಪಟ್ಟಣ ಹಾಗೂ ನಗರಗಳಲ್ಲಿ ನೆಕ್ಸಾ ಸ್ಟುಡಿಯೋ (Nexa Studio) ಹೆಸರಿನ ನೂತನ ಟಚ್‌ಪಾಯಿಂಟ್‌ಗಳನ್ನು (ಮಾರಾಟ ಮಳಿಗೆ) ಪ್ರಾರಂಭಿಸಲು ಯೋಜಿಸಿದೆ. ನೆಕ್ಸಾ ಶೋರೂಂಗಳು ಹೆಚ್ಚು ವಿಶಾಲವಾಗಿರುತ್ತವೆ. ಆದಾಗ್ಯೂ ಈ ನೆಕ್ಸಾ ಸ್ಟುಡಿಯೋಗಳು ಚಿಕ್ಕದಾಗಿರುತ್ತವೆ.

ನೆಕ್ಸಾ ಸ್ಟುಡಿಯೋಗಳಲ್ಲಿ ತಿಂಗಳಿಗೆ 25 ರಿಂದ 30 ಯುನಿಟ್ ಕಾರುಗಳನ್ನು ಮಾರಾಟಗೊಳಿಸಲು ಕಂಪನಿಯು ಉದ್ದೇಶಿಸಿದೆ. ಇಲ್ಲಿ ಕಾರುಗಳನ್ನು ಸರ್ವಿಸ್ (ರಿಪೇರಿ) ಕೂಡ ಮಾಡಲಾಗುತ್ತದೆ. ದೇಶೀಯವಾಗಿ ಮಾರುತಿ ಸುಜುಕಿ ನೆಕ್ಸಾ ಶೋರೂಂ ಮೂಲಕ ಇಗ್ನಿಸ್, ಬಲೆನೊ, ಫ್ರಾಂಕ್ಸ್, ಜಿಮ್ನಿ, ಸಿಯಾಜ್, ಎಕ್ಸ್ಎಲ್6 ಮತ್ತು ಇನ್ವಿಕ್ಟೊ ಕಾರುಗಳನ್ನು ಮಾರಾಟ ಮಾಡುತ್ತಿದೆ.
ಮೊದಲಿಗೆ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.5.49 ಲಕ್ಷದಿಂದ ರೂ.8.06 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 20.89 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki FRONX) ಎಸ್‍ಯುವಿ ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.7.51 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್, ಆಟೋ, ಆಪಲ್ ಕಾರ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಸಹ ಪ್ರೀಮಿಯಂ ನೆಕ್ಸಾ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.6.66 ಲಕ್ಷದಿಂದ ರೂ.9.83 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಪ್ರಮುಖ ಆಫ್-ರೋಡ್ ಎಸ್‍ಯುವಿಯಾಗಿದ್ದು, 5-ಡೋರ್‌ನೊಂದಿಗೆ (ಬಾಗಿಲು) ಲಭ್ಯವಿದೆ. ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ಇನ್ವಿಕ್ಟೊ (Maruti Suzuki Invicto) ಜನಪ್ರಿಯ ಎಂಪಿವಿಯಾಗಿದೆ. ರೂ.25.21 ಲಕ್ಷದಿಂದ ರೂ.28.92 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 2-ಲೀಟರ್ ಹೈಬ್ರಿಡ್ ಎಂಜಿನ್ ಹೊಂದಿದೆ. 7-8 ಆಸನ ಆಯ್ಕೆದೊಂದಿಗೆ ಲಭ್ಯವಿದೆ. ಮಾರುತಿ ಸುಜುಕಿ ಸಿಯಾಜ್ ಸೆಡಾನ್ ರೂ.9.40 ಲಕ್ಷದಿಂದ ರೂ.12.29 ಲಕ್ಷ ಮತ್ತು ಮಾರುತಿ ಸುಜುಕಿ ಎಕ್ಸ್ಎಲ್6 ಎಂಪಿವಿ ರೂ.11.61 ಲಕ್ಷದಿಂದ ರೂ.14.77 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications