Maruti Suzuki: ಜನರು ಮುಗಿಬಿದ್ದು ಖರೀದಿಸುವವರು.. ಮಾರುತಿ ಸುಜುಕಿಯ ಶಕ್ತಿಯುತ ಕಾರುಗಳಿವು

ಮಾರುತಿ ಸುಜುಕಿ (Maruti Suzuki) ರೂ.5 ಲಕ್ಷದಿಂದ ರೂ.20 ಲಕ್ಷ ಬೆಲೆಯಲ್ಲಿ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಒಂದಕ್ಕೊಂದು ಮೀರಿಸುವಂತೆ ಕಂಪನಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ ಮತ್ತು ಎಂಪಿವಿಗಳು ಆಕರ್ಷಕ ವೈಶಿಷ್ಟ್ಯವನ್ನು ಹೊಂದಿದ್ದು, ಇಲ್ಲಿ ಶಕ್ತಿಯುತ ಇನ್ವಿಕ್ಟೋ, ಜಿಮ್ನಿ, ಗ್ರ್ಯಾಂಡ್ ವಿಟಾರಾ ಮಾದರಿಗಳ ವಿವರಿಸಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಎಂಪಿವಿ ಬಗ್ಗೆ ತಿಳಿಯೋಣ. ಈ ಕಾರು ರೂ.25.21 ಲಕ್ಷದಿಂದ ರೂ.28.92 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮತ್ತು ಇ -ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 23.24 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

Maruti Suzuki Powerful Cars: Invicto, Jimny, Grand Vitara Price and Details

ಈ ಇನ್ವಿಕ್ಟೋ ಎಂಪಿವಿ 7, 8 ಆಸನ (ಸೀಟ್) ವ್ಯವಸ್ಥೆಯಲ್ಲಿ ಸಿಗಲಿದ್ದು, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆ ದೃಷ್ಟಿಯಿಂದ 6 ಏರ್‌ಬ್ಯಾಗ್‌, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಆಫ್-ರೋಡ್ ಎಸ್‌ಯುವಿಯಾಗಿದ್ದು, ರೂ.12.74 ಲಕ್ಷದಿಂದ ರೂ.14.95 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಈ ಜಿಮ್ನಿ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ವೀಡ್ ಮ್ಯಾನುವಲ್/ 4-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಜೊತೆಗೆ 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

Maruti Suzuki Powerful Cars: Invicto, Jimny, Grand Vitara Price and Details

ವಿನ್ಯಾಸದ ದೃಷ್ಟಿಯಿಂದಲೂ ಮಾರುತಿ ಸುಜುಕಿ ಜಿಮ್ನಿ ಅತ್ಯುತ್ತಮವಾಗಿದ್ದು, 4 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಈ ಎಸ್‌ಯುವಿ 9-ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ ಪ್ಲಸ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Grand Vitara) ಎಸ್‌ಯುವಿ, ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಈ ಕಾರು 1.5-ಲೀಟರ್ ಪೆಟ್ರೋಲ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್, ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರಗಳು 19.38 ಕೆಎಂಪಿಎಲ್ - 25.45 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 26.6 ಕಿ.ಮೀ/ಕೆಜಿ ಮೈಲೇಜ್ ಕೊಡುತ್ತದೆ.

Maruti Suzuki Powerful Cars: Invicto, Jimny, Grand Vitara Price and Details

ಗ್ರ್ಯಾಂಡ್ ವಿಟಾರಾ ಎಸ್‌ಯುವಿ, 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, February 25, 2024, 11:00 [IST]
English summary
Maruti suzuki powerful cars invicto jimny grand vitara price details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+