Maruti Suzuki: 16 ಸಾವಿರ ಬಲೆನೊ, ವ್ಯಾಗನ್ಆರ್ ಕಾರುಗಳು ರಿಕಾಲ್.. ಕಾರಣವೇನು?
ಮಾರುತಿ ಸುಜುಕಿ ಇಂಡಿಯಾ (Maruti Suzuki India), ಶುಕ್ರವಾರ 16,000 ಯುನಿಟ್ ಬಲೆನೊ ಮತ್ತು ವ್ಯಾಗನ್‌ಆರ್ ಕಾರುಗಳನ್ನು ಹಿಂಪಡೆಯಲು (Recalling) ನಿರ್ಧರಿಸಿದೆ. ಫ್ಯುಯೆಲ್ ಪಂಪ್ ಮೋಟರ್‌ನಲ್ಲಿ ಕಂಡುಬಂದಿರುವ ಸಂಭವನೀಯ ತಾಂತ್ರಿಕ ದೋಷವನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಜುಲೈ 30, 2019 ಹಾಗೂ ನವೆಂಬರ್ 1, 2019ರ ನಡುವೆ ಉತ್ಪಾದಿಸಿದ 11,851 ಯುನಿಟ್ ಬಲೆನೊ (Baleno) ಮತ್ತು 4,190 ಯುನಿಟ್ ವ್ಯಾಗನ್ಆರ್ (WagonR) ಕಾರುಗಳನ್ನು ವಾಪಸ್ ಪಡೆಯಲಾಗುತ್ತಿದೆ ಎಂದು ಕಂಪನಿ ಹೇಳಿದೆ. ಫ್ಯುಯೆಲ್ ಪಂಪ್ ಮೋಟರ್‌ನಲ್ಲಿ ಪತ್ತೆ ಹಚ್ಚಲಾಗಿರುವ ಶಂಕಿತ ಸಮಸ್ಯೆಯಿಂದ ಎಂಜಿನ್ ನಿಲ್ಲುವುದು ಅಥವಾ ಪ್ರಾರಂಭವಾದಾಗ ತೊಂದರೆಯಾಗಬಹುದು ಎಂದು ತಿಳಿದುಬಂದಿದೆ.

ಈ ಕಾರುಗಳ ಮಾಲೀಕರನ್ನು ಕಂಪನಿಯ ಅಧಿಕೃತ ಡೀಲರ್ ವರ್ಕ್‌ಶಾಪ್ ಸಿಬ್ಬಂದಿ ಸಂಪರ್ಕಿಸಲಿದ್ದಾರೆ. ಯಾವುದೇ ಶುಲ್ಕವಿಲ್ಲದೆ, ದೋಷಕ್ಕೆ ಒಳಗಾಗಿರುವ ಬಿಡಿಭಾಗವನ್ನು ಬದಲಾಯಿಸಿ ಕೊಡಲಾಗುವುದು ಎಂದು ಮಾರುತಿ ಸುಜುಕಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಭಾರತದಲ್ಲಿ ಇವೆರೆಡು ಮಾದರಿಗಳು ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯದೊಂದಿಗೆ ದೊರೆಯುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ.
ಸದ್ಯ, ಭಾರತದಲ್ಲಿ ಮಾರುತಿ ಸುಜುಕಿ ಬಲೆನೊ (Maruti Suzuki Baleno) ರೂ.8.49 ಲಕ್ಷದಿಂದ ರೂ.12.36 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯೊಂದಿಗೆ ಸಿಗಲಿದ್ದು, 5-ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಒಳಗೊಂಡಿದೆ. ಪೆಟ್ರೋಲ್ ಮಾದರಿಗಳು 22.35 - 22.94 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 30.61 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ಈ ಬಲೆನೊ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಪಡೆದಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR), ರೂ.5.54 ಲಕ್ಷದಿಂದ ರೂ.7.38 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. ಇದು ಕೂಡ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರೆಯಲಿದ್ದು, 5-ಸ್ವೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 23.56 ರಿಂದ 25.19 ಕೆಎಂಪಿಎಲ್, ಸಿಎನ್‌ಜಿ ಆವೃತ್ತಿಗಳು 34.05 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.
ವ್ಯಾಗನ್ಆರ್ ಕಾರು ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್, ಮ್ಯಾಗ್ಮಾ ಗ್ರೇ ಸೇರಿದಂತೆ ಆಕರ್ಷಕ ಬಣ್ಣಗಳೊಂದಿಗೆ ಗ್ರಾಹಕರಿಗೆ ದೊರೆಯುತ್ತದೆ. 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications