S-Presso: ಬಡವರು ಕಾರು ಖರೀದಿಸಬಹುದು.. ಮಾರುತಿ ಎಸ್-ಪ್ರೆಸ್ಸೊ ಆನ್ ರೋಡ್ ಬೆಲೆ, EMI ಕುರಿತು ತಿಳಿಯಿರಿ

ಪ್ರತಿಯೊಬ್ಬರಿಗೂ ಹೊಸ ಕಾರು ಖರೀದಿಸಬೇಕೆಂಬ ಆಸೆಯಿರುತ್ತದೆ. ಆದರೆ, ಕುಟುಂಬದ ಹಣಕಾಸಿನ ಪರಿಸ್ಥಿತಿಯಿಂದ ಸಾಧ್ಯವಾಗುವುದಿಲ್ಲ. ಇಲ್ಲಿ ಆಕರ್ಷಕ ವೈಶಿಷ್ಟ್ಯ, ಗರಿಷ್ಠ ಮೈಲೇಜ್ ನೀಡುವ ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಕಾರಿನ ಆನ್ ರೋಡ್ ಬೆಲೆ, ಇಎಂಐ ಆಯ್ಕೆ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನ ಕೆಲವು ರೂಪಾಂತರಗಳ ಆನ್ ರೋಡ್ ಬೆಲೆ ಕುರಿತು ತಿಳಿಯೋಣ. ಬೆಂಗಳೂರಿನಲ್ಲಿ ಎಲ್ಎಕ್ಸ್ಐ ಪೆಟ್ರೋಲ್ ರೂಪಾಂತರ ರೂ.6.03 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ವಿಎಕ್ಸ್ಐ ಪೆಟ್ರೋಲ್ ಮಾದರಿ ರೂ.6.26 ಲಕ್ಷ, ಎಲ್ಎಕ್ಸ್ಐ ಸಿಎನ್‌ಜಿ ಆವೃತ್ತಿ ರೂ.7.10 ಲಕ್ಷ ಹಾಗೂ ವಿಎಕ್ಸ್ಐ ಸಿಎನ್‌ಜಿ ರೂಪಾಂತರ 7.33 ಲಕ್ಷ ಆನ್ ರೋಡ್ ದರವನ್ನು ಹೊಂದಿದೆ.

Maruti Suzuki S-Presso Car Easily Buy On-Road Price Emi Details

ಈ ಎಸ್-ಪ್ರೆಸ್ಸೊ ಕಾರನ್ನು ನೀವು ರೂ.51,000 ಡೌನ್ ಪೇಮೆಂಟ್ ಪಾವತಿಸುವ ಮೂಲಕ ಖರೀದಿಸಬಹುದು. ತಿಂಗಳಿಗೆ ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ರೂ.9,693 ಇಎಂಐ (EMI) ಕಟ್ಟಬೇಕು. ಈ ಹಣಕಾಸು ಆಯ್ಕೆಗಳು, ಆನ್ ರೋಡ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂ ಸಂಪರ್ಕಿಸಿರಿ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದೆ. ಸಾಲಿಡ್ ಸಿಜ್ಲೆ ಆರೆಂಜ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಪರ್ಲ್ ಸ್ಟಾರ್ರಿ ಬ್ಲೂ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

Maruti Suzuki S-Presso Car Easily Buy On-Road Price Emi Details

ಈ ಎಸ್-ಪ್ರೆಸ್ಸೊ ಕಾರಿನ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ, 57 ಪಿಎಸ್ ಪವರ್ ಹಾಗೂ 82 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲು ಶಕ್ತವಾಗಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಕಾರಿನ ಪೆಟ್ರೋಲ್ ರೂಪಾಂತರಗಳು 24.12 ರಿಂದ 25.30 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 32.73 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸೆಮಿ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Maruti Suzuki S-Presso Car Easily Buy On-Road Price Emi Details

ಸುರಕ್ಷತೆಯ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ. ಎಸ್-ಪ್ರೆಸ್ಸೊಗೆ ರೆನಾಲ್ಟ್ ಕ್ವಿಡ್ ಪ್ರಬಲ ಎದುರಾಳಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, March 10, 2024, 12:00 [IST]
English summary
Maruti suzuki s presso car easily buy on road price emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+