ಬಡವರ ಮೆಚ್ಚಿನ ಮಾರುತಿ ಎಸ್-ಪ್ರೆಸ್ಸೊ ಕಾರಿನ ಬೆಲೆ ಕಡಿತ
ದೇಶದ ಅತಿದೊಡ್ಡ ಮತ್ತು ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಜನಪ್ರಿಯ ಮಾದರಿ ಮಾರುತಿ ಸುಜುಕಿ ಎಸ್-ಪ್ರೆಸೂ ಬೆಲೆಯನ್ನು ಪರಿಷ್ಕರಿಸಿದೆ. ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಕಾರಿನ ರೂಪಾಂತರದ ಆಯ್ಕೆಯ ಆಧಾರದ ಮೇಲೆ ಬೆಲೆಗಳ ಪರಿಷ್ಕರಣೆಯಾಗಿದೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನVXi (O) AMT ಮತ್ತು VXi + (O) AMT ರೂಪಾಂತರಗಳು ಬೆಲೆಗಳನ್ನು ರೂ.5,000 ಕಡಿತಗೊಳಿಸಿದೆ. ಉಳಿದಂತೆ ಕಾರಿನ ಇತರ ಇತರ ರೂಪಾಂತರಗಳ ಬೆಲೆಗಳು ಬದಲಾಗದೆ ಉಳಿದಿವೆ. ಮಾರುತಿ ಎಸ್-ಪ್ರೆಸ್ಸೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯವಾಗಿರುವ ಮೈಕ್ರೋ ಎಸ್‍ಯುವಿಯಾಗಿದೆ. ಇದು ಕೈಗೆಟುಕುವ ಎಂಟ್ರಿ ಲೆವೆಲ್ ಮಾದರಿಯಾಗಿದೆ.

ಮಾರುತಿ ಎಸ್-ಪ್ರೆಸ್ಸೊ ಮೈಕ್ರೋ ಎಸ್‌ಯುವಿ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಹೆಡ್‌ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್‌ಟೆಕ್, ಸಿ ಶೇಫ್ ಟೈಲ್‌ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗನ್ನು ನೀಡುತ್ತದೆ ಇನ್ನು ಮಾರುತಿ ಎಸ್-ಪ್ರೆಸ್ಸೊ ಕಾರಿನ ಇಂಟಿರಿಯರ್ ನಲ್ಲಿ ಹಲವು ಪ್ರೀಮಿಯಂ ಫೀಚರ್ಸ್‌ಗಳಿವೆ.
ಈ ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಜನರಿಗಾಗಿ ಕೈಗೆಟಕುವ ದರದಲ್ಲಿ ಈ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು. ಪ್ರಸ್ತುತ ಆವೃತ್ತಿಯ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನಲ್ಲಿ 1.0-ಲೀಟರ್ ಮೂರು-ಸಿಲಿಂಡರ್ K10C ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಇದು ಗರಿಷ್ಠ 66 ಬಿಹೆಚ್‍ಪಿ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಈ ಕಾರಿನಲ್ಲಿ ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಕೊ ಮೀಟರ್, ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ ಮತ್ತು ಆರೇಂಜ್ ಕಲರ್ ಆಕ್ಸೆಂಟ್ ಅನ್ನು ಹೊಂದಿದೆ. ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು 2019 ರಲ್ಲಿ ಭಾರತೀಯ ಮಾರುಕಟ್ಟೆಯನ್ನು ಮೊದಲ ಬಾರಿಗೆ ಪ್ರವೇಶಿಸಿತು ಮತ್ತು ಅಂದಿನಿಂದ ಇದು ಮಾರುಕಟ್ಟೆಯಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.
ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಜನರಿಗಾಗಿ ಕೈಗೆಟಕುವ ದರದಲ್ಲಿ ಈ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು. ಪ್ರಸ್ತುತ ಆವೃತ್ತಿಯ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನಲ್ಲಿ 1.0-ಲೀಟರ್ ಮೂರು-ಸಿಲಿಂಡರ್ K10C ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಇದು ಗರಿಷ್ಠ 66 ಬಿಹೆಚ್‍ಪಿ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಮ್‌ಟಿಯ ಟ್ರಾನ್ಸ್‌ಮಿಷನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಮೈಕ್ರೋ-ಎಸ್‌ಯುವಿಯು ಸಿಎನ್‌ಜಿ ಡ್ರೈವ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇನ್ನು ಐಡಲ್ ಸ್ಟಾರ್ಟ್/ಸ್ಟಾಪ್ ಸೌಲಭ್ಯವು ಟ್ರಾಫಿಕ್ ದಟ್ಟಣೆಯಲ್ಲಿ ಕಾರು ನಿಲುಗಡೆ ಸಂದರ್ಭದಲ್ಲಿ 30 ಸೆಕೆಂಡುಗಳಿಗೂ ಹೆಚ್ಚು ಕಾಲ ಕಾರು ನಿಲುಗಡೆ ಮಾಡಿದ್ದಲ್ಲಿ ಎಂಜಿನ್ ಅನ್ನು ಆಟೋಮ್ಯಾಟಿಕ್ ಆಗಿ ನಿಷ್ಕ್ರಿಯಗೊಳಿಸುವ ಮೂಲಕ ಇಂಧನ ವ್ಯರ್ಥವಾಗುವುದನ್ನು ತಡೆಯುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಲು ಮರೆಯದಿರಿ.


Click it and Unblock the Notifications