ಬೈಕ್ ಬೆಲೆಗೆ ಈ ಮಾರುತಿ ಕಾರು ಖರೀದಿಸಿ... 32.73 ಕಿ.ಮೀ ಮೈಲೇಜ್: ಭರ್ಜರಿ ಬೇಡಿಕೆ
ಭಾರತದ ಸಾಮಾನ್ಯ ಜನರ ಕಾರು ಖರೀದಿಸುವ ಕನಸು ನನಸು ಮಾಡಿರುವ ಮಾರುತಿ ಸುಜುಕಿ, ಅತ್ಯಂತ ಅಗ್ಗದ ಬೆಲೆಯಲ್ಲಿ ನೀಡುವ ಕಾರುಗಳಲ್ಲಿ ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಕೂಡ ಒಂದು. ಈ ಕಾರು ಸಣ್ಣ ಕುಟುಂಬಗಳಿಗೆ ಕೈಟುಕುವ ಬೆಲೆಯಲ್ಲಿ ಸಿಗುವುದರಿಂದ ಭಾರೀ ಬೇಡಿಕೆ ಇದೆ. ಅಲ್ಲದೇ ಈ ಕಾರು ಸಿಎನ್‌ಜಿ ಆಯ್ಕೆಯಲ್ಲೂ ಲಭ್ಯವಿರುವುದರಿಂದ ಮೈಲೇಜ್ ವಿಷಯದಲ್ಲಿ ಬೈಕ್‌ಗಳಿಗೆ ಪೈಪೋಟಿ ನೀಡುವಂತೆ ಪ್ರತಿ ಕೆ.ಜಿಗೆ ಬರೋಬ್ಬರಿ 32.73 ಕಿ.ಮೀ ಮೈಲೇಜ್ ಅನ್ನು ಹೊಂದಿದೆ.
ಜನಪ್ರಿಯ ಮತ್ತು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿಯ ಎಸ್-ಪ್ರೆಸ್ಸೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯವಾಗಿರುವ ಮೈಕ್ರೋ ಎಸ್‍ಯುವಿಯಾಗಿದೆ. ಇದು ಕೈಗೆಟುಕುವ ಎಂಟ್ರಿ ಲೆವೆಲ್ ಮಾದರಿಯಾಗಿದೆ. ಆದರೆ ಇತ್ತಿಚೆಗೆ ಮಾರಾಟದಲ್ಲಿ ಏರಿಕೆಯನ್ನು ಕಂಡಿದೆ. 2024ರ ನವೆಂಬರ್ ತಿಂಗಳಿನಲ್ಲಿ ಮಾರುತಿ ಎಸ್-ಪ್ರೆಸ್ಸೊ ಮಾದರಿಯ 2,283 ಯುನಿಟ್ ಗಳು ಮಾರಾಟವಾಗಿವೆ.

ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 1,883 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.21 ರಷ್ಟು ಬೆಳವಣಿಗೆಯನ್ನು ಕಂಡಿದೆ. ಮಾರುತಿ ಎಸ್-ಪ್ರೆಸ್ಸೊ ಬಗ್ಗೆ ಹೇಳುವುದಾದರೆ, ಆಕರ್ಷಕ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಹೆಡ್‌ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್‌ಟೆಕ್, ಸಿ ಶೇಫ್ ಟೈಲ್‌ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗನ್ನು ಹೊಂದಿದೆ.
ಈ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನ ಒಳಭಾಗದಲ್ಲಿ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿವೆ. ಈ ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಜನರಿಗಾಗಿ ಕೈಗೆಟಕುವ ದರದಲ್ಲಿ ಈ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು. ಪ್ರಸ್ತುತ ಆವೃತ್ತಿಯ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನಲ್ಲಿ 1.0-ಲೀಟರ್ ಮೂರು-ಸಿಲಿಂಡರ್ K10C ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

ಎಸ್-ಪ್ರೆಸ್ಸೊ ಕಾರಿನಲ್ಲಿ 1 - ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 5 - ಸ್ಪೀಡ್ ಮ್ಯಾನುವಲ್ ಅಥವಾ 5 - ಸ್ಪೀಡ್ ಎಎಂಟಿಯೊಂದಿಗೆ ಲಭ್ಯವಿದೆ. ಇದರೊಂದಿಗೆ ಸಿಎನ್‌ಜಿ ವೇರಿಯೆಂಟ್‌ಗಳು ಕೇವಲ 5 - ಸ್ಪೀಡ್ ಮ್ಯಾನುವಲ್‌ನೊಂದಿಗೆ ಮಾತ್ರ ಬರುತ್ತವೆ. ಪೆಟ್ರೋಲ್ ಮ್ಯಾನುವಲ್‌ನಲ್ಲಿ 24.12 ಕಿ.ಮೀ, ಪೆಟ್ರೋಲ್ ಆಟೋಮ್ಯಾಟಿಕ್‌ನಲ್ಲಿ 25.30 ಕಿ.ಮೀ ಹಾಗೂ ಸಿಎನ್‌ಜಿನಲ್ಲಿ 32.73 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಇನ್ನು ಈ ಕಾರಿನಲ್ಲಿ ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಕೊ ಮೀಟರ್, ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ ಮತ್ತು ಆರೇಂಜ್ ಕಲರ್ ಆಕ್ಸೆಂಟ್ ಅನ್ನು ಹೊಂದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು 2019 ರಲ್ಲಿ ಭಾರತೀಯ ಮಾರುಕಟ್ಟೆಯನ್ನು ಮೊದಲ ಬಾರಿಗೆ ಪ್ರವೇಶಿಸಿತು ಮತ್ತು ಅಂದಿನಿಂದ ಇದು ಮಾರುಕಟ್ಟೆಯಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಜನರಿಗಾಗಿ ಕೈಗೆಟಕುವ ದರದಲ್ಲಿ ಈ ಮಿನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು. ಆದರೆ ಈ ಕಾರಿನ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಲು ಮರೆಯದಿರಿ.


Click it and Unblock the Notifications