Maruti Suzuki: ಮಾರುತಿ ಸುಜುಕಿಯ ಸುರಕ್ಷಿತ ಕಾರುಗಳಿವು.. 8 ಲಕ್ಷ ಆರಂಭಿಕ ಬೆಲೆ
ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಬ್ರೆಜ್ಜಾ, ಗ್ರ್ಯಾಂಡ್ ವಿಟಾರಾ ಮತ್ತು ಇನ್ವಿಕ್ಟೋ ಕಾರುಗಳು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ. ಜೊತೆಗೆ ಕೈಗೆಟುಕುವ ಬೆಲೆಗೆ ಸಿಗುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ.
ಮೊದಲಿಗೆ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಎಂವಿಪಿ ಬಗ್ಗೆ ಮಾತನಾಡೋಣ. ಇದು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), 360 ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಇನ್ವಿಕ್ಟೋ ಕಾರು, ರೂ.25.21 ಲಕ್ಷದಿಂದ ರೂ.28.92 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದೆ. ಜೊತೆಗೆ ಇ-ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದ್ದು, 23.24 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. ಇದರಲ್ಲಿ 7, 8 ಮಂದಿ ಓಡಾಡಬಹುದು. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ, ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಡಿಸೆಂಟ್ ಕಂಟ್ರೋಲ್, ಐಎಸ್ಒಎಫ್ಐಎಕ್ಸ್ (ISOFIX) ಚೈಲ್ಡ್-ಸೀಟ್ ಆಂಕರ್ಸ್, 360-ಡಿಗ್ರಿ ಕ್ಯಾಮೆರಾನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, 1.5-ಲೀಟರ್ ಪೆಟ್ರೋಲ್ ಮೈಲ್ಡ್ ಹೈಬ್ರಿಡ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 19.38 ರಿಂದ 27.97 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಪಡೆದಿದೆ. 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಮಾರುತಿ ಸುಜುಕಿ ಬ್ರೆಜ್ಜಾ (Maruti Suzuki Brezza) ಎಸ್‌ಯುವಿ, ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

ಈ ಮಾರುತಿ ಸುಜುಕಿ ಬ್ರೆಜ್ಜಾ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 17.38 - 19.8 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 25.51 ಕಿ.ಮೀ/ಕೆಜಿ ಮೈಲೇಜ್ ಕೊಡುತ್ತವೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications