Bharat NCAP: ಭಾರತ್ ಎನ್‌ಸಿಎಪಿ ಸೇಫ್ಟಿ ಟೆಸ್ಟ್‌ಗೆ ಮಾರುತಿ ಸುಜುಕಿಯ ಈ 3 ಕಾರುಗಳು, 5 ಸ್ಟಾರ್ ರೇಟಿಂಗ್ ಸಿಗುತ್ತಾ?
ದೇಶದ ವಾಹನ ಸುರಕ್ಷತಾ ಪರೀಕ್ಷಾ ಸಂಸ್ಥೆ 'ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ' (ಭಾರತ್ ಎನ್‌ಸಿಎಪಿ - Bharat NCAP), ಡಿ.15 2023 ರಿಂದ ಕಾರ್ಯಾರಂಭ ಮಾಡಿತ್ತು. ಈ ಸಂಸ್ಥೆ ನಡೆಸುವ ಕ್ರ್ಯಾಶ್ ಟೆಸ್ಟ್‌ಗೆ ತನ್ನ 3 ಕಾರುಗಳನ್ನು ಕಳುಹಿಸಲು ನಿರ್ಧರಿಸಲಾಗಿದೆ ಎಂದು ಮಾರುತಿ ಸುಜುಕಿ ಘೋಷಿಸಿದೆ.
ಮಾರುತಿ ಸುಜುಕಿ (Maruti Suzuki) ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ಗೆ ಬ್ರೆಜ್ಜಾ (Brezza), ಗ್ರ್ಯಾಂಡ್ ವಿಟಾರಾ (Grand Vitara) ಮತ್ತು ಬಲೆನೊ (Baleno) ಮಾದರಿಗಳನ್ನು ಒಳಪಡಿಸಲು ಸಿದ್ಧವಾಗಿದೆ. ಈ 3 ಕಾರುಗಳು ಸುರಕ್ಷತೆಯ ದೃಷ್ಟಿಯಿಂದ ಒಂದಕ್ಕಿಂತ ಒಂದು ಅತ್ಯುತ್ತಮವಾಗಿವೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.

ಮೊದಲಿಗೆ ಮಾರುತಿ ಸುಜುಕಿ ಬ್ರೆಜ್ಜಾ (Maruti Suzuki Brezza) ಪಡೆದುಕೊಂಡಿರುವ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆ ಮಾತನಾಡೋಣ. ಈ ಕಾರು, 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ - ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್ ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಪಡೆದಿದೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara), ಕೂಡ ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ಹಿಲ್-ಡಿಸೆಂಟ್ ಕಂಟ್ರೋಲ್, ISOFIX ಚೈಲ್ಡ್-ಸೀಟ್ ಆಂಕರ್ಸ್ ಅನ್ನು ಹೊಂದಿದೆ.

ಈ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಸಹ ಸುರಕ್ಷತೆಯ ದೃಷ್ಟಿಯಿಂದ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಪ್ರತಿಯೊಬ್ಬ ಪ್ರಯಾಣಿಕರಿಗೂ 3-ಪಾಯಿಂಟ್ ಸೀಟ್‌ಬೆಲ್ಟ್, ISOFIX ಆಂಕಾರೇಜ್, ರೇರ್ ಪಾರ್ಕಿಂಗ್ ಸೇನಾರ್ಸ್, 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಕಳೆದ ತಿಂಗಳು ಭಾರತ್ ಎನ್‌ಸಿಎಪಿ ಮೊದಲ ಬಾರಿಗೆ ಕ್ರ್ಯಾಶ್ ಟೆಸ್ಟ್ ಫಲಿತಾಂಶವನ್ನು ಪ್ರಕಟಿಸಿಟಿತ್ತು. ವಯಸ್ಕರ ರಕ್ಷಣೆ (Adult Occupant Protection) ಹಾಗೂ ಮಕ್ಕಳ ರಕ್ಷಣೆ (Child Occupant Protection) ವಿಭಾಗದಲ್ಲಿ ಟಾಟಾ ಹ್ಯಾರಿಯರ್, ಸಫಾರಿ ಎಸ್‌ಯುವಿಗಳು 5 - ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದವು. ಇವೆರೆಡು ಕಾರುಗಳು ವಯಸ್ಕರ ರಕ್ಷಣೆ ವಿಭಾಗದಲ್ಲಿ ಗರಿಷ್ಠ 32ಕ್ಕೆ 30.08, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.54 ಅಂಕಗಳನ್ನು ಗಳಿಸಿವೆ.

ಇನ್ನು, ಟಾಟಾ ಮೋಟಾರ್ಸ್, ಹ್ಯಾರಿಯರ್, ಸಫಾರಿ ಎಸ್‌ಯುವಿಗಳು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ. ಈ ಕಾರುಗಳು 7 - ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್, 360 - ಡಿಗ್ರಿ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೆಕೆಂಡ್ ರೋ ISOFIX ಚೈಲ್ಡ್ ಸೀಟ್ ಆಂಕಾರೇಜ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಪಡೆದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications