Maruti Suzuki Swift: ಬಡವರ ಬಿಎಂಡಬ್ಲ್ಯೂ.. ಪಟಪಟ ಸೇಲ್.. 30 ಲಕ್ಷ ಸ್ವಿಫ್ಟ್‌ ಕಾರು ಮಾರಾಟ

ದೇಶದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಮನೆ ಮಾತಾಗಿದೆ. ಕಂಪನಿಯು ನೆಕ್ಸಾ (Nexa) ಮತ್ತು ಅರೆನಾ (Arena) ಡೀಲರ್‌ಶಿಪ್ ಮೂಲಕ ಆಲ್ಟೊ ಕೆ10, ಸೆಲರಿಯೊ, ಬಲೆನೊ, ವ್ಯಾಗನ್ಆರ್, ಇಗ್ನಿಸ್, ಫ್ರಾಂಕ್ಸ್ ಹಾಗೂ ಜಿಮ್ನಿ ಸೇರಿದಂತೆ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿರುವ ಸ್ವಿಫ್ಟ್‌ (Swift) ಮಾರಾಟದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದೆ. ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಬರೋಬ್ಬರಿ 30 ಲಕ್ಷ ಯುನಿಟ್ ಕಾರುಗಳನ್ನು ಮಾರಿದೆ.

ದೇಶೀಯ ಮಾರುಕಟ್ಟೆಯಲ್ಲಿ 2005ರಲ್ಲಿ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ನ್ನು ಪರಿಚಯಿಸಲಾಗಿತ್ತು. ಅಂದಿನಿಂದಲೇ ಈ ಕಾರು ಮಧ್ಯಮ ವರ್ಗದ ಜನರ ಮನಸ್ಸನ್ನು ಗೆದ್ದಿತ್ತು. 2013ರವರೆಗೆ 10 ಲಕ್ಷ ಯುನಿಟ್ ಹಾಗೂ 2018ರವರೆಗೆ 20 ಲಕ್ಷ ಯುನಿಟ್‌ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟಗೊಳಿಸುವ ಮೂಲಕ ಕಂಪನಿಯು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿತ್ತು. ಈಗ ಆ ಸಂಖ್ಯೆ 30 ಲಕ್ಷ ಯುನಿಟ್‌ನ್ನು ಮುಟ್ಟಿದೆ.

Maruti Suzuki Swift Car 30 Lakh Unit Sales Milestone Rs 6 49 Lakh Price 25 Km Mileage

ಈ ಮಾರುತಿ ಸುಜುಕಿ ಸ್ವಿಫ್ಟ್‌ 'ಹ್ಯಾಚ್‌ಬ್ಯಾಕ್‌' ವಿಭಾಗದಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಕಳೆದ ತಿಂಗಳು 19,393 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಮೇ ತಿಂಗಳ 17,346 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡ 12% ಬೆಳವಣಿಗೆಯಾಗಿದೆ. ಈಚೆಗೆ ಬಿಡುಗಡೆಯಾಗಿದ್ದ ನಾಲ್ಕನೇ ತಲೆಮಾರಿನ 'ಸ್ವಿಫ್ಟ್' ಕಾರಿನಿಂದಲೂ ಮಾರಾಟ ಪ್ರಮಾಣ ಮತ್ತಷ್ಟು ಉತ್ತಮಗೊಂಡಿದೆ ಎಂಬುದು ಮಾರುಕಟ್ಟೆ ತಜ್ಞರ ವಿಶ್ಲೇಷಣೆಯಾಗಿದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಹ್ಯಾಚ್‌ಬ್ಯಾಕ್‌ ರೂ.6.49 ಲಕ್ಷದಿಂದ ರೂ.9.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ (ಒ) ಸೇರಿದಂತೆ ರೂಪಾಂತರ (ವೇರಿಯೆಂಟ್)ಗಳೊಂದಿಗೂ ದೊರೆಯುತ್ತದೆ. ವಿನ್ಯಾಸದ ದೃಷ್ಟಿಯಿಂದ ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ನವೀನವಾದ ಬಂಪರ್‌ಗಳು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

Maruti Suzuki Swift Car 30 Lakh Unit Sales Milestone Rs 6 49 Lakh Price 25 Km Mileage

ಈ ಕಾರು 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 82 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಚ್ಚ ಹೊಸ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಸಿಜ್ಲಿಂಗ್ ರೆಡ್ ನಾವೆಲ್ ಆರೆಂಜ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Maruti Suzuki Swift Car 30 Lakh Unit Sales Milestone Rs 6 49 Lakh Price 25 Km Mileage

ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. 6-ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ. ಈ ಕಾರಿಗೆ ಹುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಕಾಂಪ್ಯಾಕ್ಟ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 28, 2024, 16:30 [IST]
English summary
Maruti suzuki swift car 30 lakh unit sales milestone rs 6 lakh price 25 km mileage
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+