Swift: ಮಾರುತಿ ಸುಜುಕಿ ಸ್ವಿಫ್ಟ್ ಕಾರಿಗೆ ಭಾರೀ ಡಿಸ್ಕೌಂಟ್.. ರೂ.5.99 ಲಕ್ಷ ಬೆಲೆ, 30 ಕಿ.ಮೀ ಮೈಲೇಜ್

ದೇಶಾದ್ಯಂತ ಆಯ್ದ ಮಾರುತಿ ಸುಜುಕಿ (Maruti Suzuki) ಡೀಲರ್‌ಶಿಪ್‌ಗಳು ವಿವಿಧ ಕಾರುಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿವೆ. ಕಂಪನಿಯ ಜನಪ್ರಿಯ ಸ್ವಿಫ್ಟ್ (Swift) ಹ್ಯಾಚ್‌ಬ್ಯಾಕ್ ಕೂಡ ಭಾರೀ ಡಿಸ್ಕೌಂಟ್ ಆಫರ್ ಪಡೆದಿದೆ. ಆ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಯೋಣ ಬನ್ನಿ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರು, ಈ ಮಾರ್ಚ್ ತಿಂಗಳು ರೂ.42,000 ರವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಅದರಲ್ಲಿ ರೂ.15,000 ನಗದು ರಿಯಾಯಿತಿ (Cash Discount), ರೂ.20,000 ವಿನಿಮಯ ಬೋನಸ್ (Exchange Bonus) ಮತ್ತು ರೂ.7,000 ಕಾರ್ಪೊರೇಟ್ ಡಿಸ್ಕೌಂಟ್ (Corporate Discount) ಅನ್ನು ಪಡೆದಿದೆ. ಈ ಸ್ವಿಫ್ಟ್ ಹ್ಯಾಚ್‌ಬ್ಯಾಕ್, ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಸಿಗುತ್ತದೆ.

Maruti Suzuki Swift Car Get Big Discount In March 2024 Rs 5 99 Lakh Price 30 Km Mileage

ಈ ಸ್ವಿಫ್ಟ್ ಕಾರು ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ ಹಾಗೂ ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ಫೈರ್ ರೆಡ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ನೋಡುಗರನ್ನು ಸೆಳೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯವಾಗಿ ಕುಳಿತುಕೊಂಡು ಪ್ರಯಾಣಿಬಹುದು.

ಮಾರುತಿ ಸುಜುಕಿ ಸ್ವಿಫ್ಟ್, 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 90 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು ಸಿಎನ್‌ಜಿ ಚಾಲಿತ ಕಾರು ಕೂಡ ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ 77.5 ಪಿಎಸ್ ಪವರ್, 98.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

Maruti Suzuki Swift Car Get Big Discount In March 2024 Rs 5 99 Lakh Price 30 Km Mileage

ಈ ಹ್ಯಾಚ್‌ಬ್ಯಾಕ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, ಪೆಟ್ರೋಲ್ ಮಾದರಿಗಳು 22.38 ರಿಂದ 22.56 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 30.90 ಕೆಎಂ/ಕೆಜಿ ಇಂಧನ ದಕ್ಷತೆಯನ್ನು ಹೊಂದಿವೆ. ಜೊತೆಗೆ ಐಡಲ್ ಸ್ಟಾರ್ಟ್/ ಸ್ಟಾಪ್ ಬಟನ್ ಅನ್ನು ಪಡೆದಿದೆ.

ಸ್ವಿಫ್ಟ್ ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಹೋಲ್ಡ್ ಕಂಟ್ರೋಲ್‌ ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

Maruti Suzuki Swift Car Get Big Discount In March 2024 Rs 5 99 Lakh Price 30 Km Mileage

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರಿಗೆ ರೆನಾಲ್ಟ್ ಟ್ರೈಬರ್ ಮತ್ತು ಹ್ಯುಂಡೈ ಗ್ರಾಂಡ್ ಐ10 ನಿಯೋಸ್‌ ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ನಗರದಿಂದ ನಗರಕ್ಕೆ ಡೀಲರ್‌ಶಿಪ್‌ಗಳು, ರೂಪಾಂತರ ಮತ್ತು ಬಣ್ಣಗಳನ್ನು ಆಧರಿಸಿ ಬೇರೆಯಾಗಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, March 17, 2024, 9:00 [IST]
English summary
Maruti suzuki swift car get big discount in march 2024 rs 5 99 lakh price 30 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+