Swift: 6 ಲಕ್ಷ ಬೆಲೆ, 25 Km ಮೈಲೇಜ್.. ಹೊಸ ಮಾರುತಿ ಸ್ವಿಫ್ಟ್ ಕಾರನ್ನು ನಾಳೆಯೇ ಮನೆಗೆ ತರಲು ಆಗಲ್ಲ.. ಕಾರಣವೇನು?

ಭಾರತದ ಅತಿದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯು ಆಲ್ಟೊ ಕೆ10, ಸೆಲರಿಯೊ, ಬಲೆನೊ, ವ್ಯಾಗನ್ಆರ್, ಇಗ್ನಿಸ್, ಫ್ರಾಂಕ್ಸ್ ಮತ್ತು ಜಿಮ್ನಿ ಒಳಗೊಂಡಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಳೆದ ಮೇನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ನಾಲ್ಕನೇ ತಲೆಮಾರಿನ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಿತ್ತು. ಈ ಕಾರಿಗೆ ಭಾರೀ ಬೇಡಿಕೆಯಿದ್ದು, 2 ತಿಂಗಳೊಳಗೆ 35,000 ಯುನಿಟ್ ಮಾರಾಟ ಮಾಡಲಾಗಿದೆ. ಸದ್ಯ ಜುಲೈ (July)ನಲ್ಲಿ ನೂತನ 'ಸ್ವಿಫ್ಟ್‌' ಹೊಂದಿರುವ ಕಾಯುವಿಕೆ ಅವಧಿ ಕುರಿತ ವಿವರಗಳು ಬಹಿರಂಗಗೊಂಡಿದೆ.

ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಹ್ಯಾಚ್‌ಬ್ಯಾಕ್‌ನ್ನು ಗ್ರಾಹಕರು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆಗಾಗಿ ಕನಿಷ್ಠವೆಂದರೂ ಮೂರು ವಾರಗಳು ಕಾಯಬೇಕು. ದೇಶೀಯವಾಗಿ ಹೊಸ ಸ್ವಿಫ್ಟ್‌ ಕಾರು ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ರೂ.6.49 ಲಕ್ಷದಿಂದ ರೂ.9.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Maruti Suzuki Swift Car July 2024 Waiting Period Revealed Rs 6 Lakh Price 25 Km Mileage

ನೂತನ ಕಾರು ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಿಗಲಿದ್ದು, ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಸೇರಿದಂತೆ ಹಲವು ಬಣ್ಣಗಳನ್ನು ಪಡೆದಿದೆ. ಅತ್ಯಾಧುನಿಕ ವಿನ್ಯಾಸ (ಡಿಸೈನ್)ವನ್ನು ಒಳಗೊಂಡಿದ್ದು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ.

ಸ್ವಿಫ್ಟ್‌ ಪವರ್‌ಟ್ರೇನ್ ಬಗ್ಗೆ ಹೇಳುವುದಾದರೆ, 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 80 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Maruti Suzuki Swift Car July 2024 Waiting Period Revealed Rs 6 Lakh Price 25 Km Mileage

ಈ ಕಾರಿನಲ್ಲಿ 5 ಜನರು ಸುಲಭವಾಗಿ ಓಡಾಟವನ್ನು ನಡೆಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್‌ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Swift Car July 2024 Waiting Period Revealed Rs 6 Lakh Price 25 Km Mileage

ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ (Hyundai Grand i10 Nios), ಹ್ಯುಂಡೈ ಎಕ್ಸ್‌ಟರ್ (Hyundai Exter) ಮತ್ತು ಟಾಟಾ ಪಂಚ್ (Tata Punch) ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ಹ್ಯಾಚ್‌ಬ್ಯಾಕ್‌ ಕಾಯುವಿಕೆ ಅವಧಿ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 2, 2024, 19:50 [IST]
English summary
Maruti suzuki swift car july 2024 waiting period revealed rs 6 lakh price 25 km mileage
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+