ಈ ಜನಪ್ರಿಯ ಪೆಟ್ರೋಲ್ ಕಾರಿಗೆ ಮುಗಿಬಿದ್ದ ಗ್ರಾಹಕರು.. ರೂ.6 ಲಕ್ಷ ಬೆಲೆ, 25 Km ಮೈಲೇಜ್
ಭಾರತದ ಅತಿ ದೊಡ್ಡ ವಾಹನ ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿ ಗಳಿಸಿದೆ. ಕಂಪನಿಯು ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ ಕೆ10, ಸೆಲರಿಯೊ, ವ್ಯಾಗನ್ಆರ್, ಇಗ್ನಿಸ್, ಬಲೆನೊ, ಫ್ರಾಂಕ್ಸ್, ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈಚೆಗೆ ಜೂನ್ ತಿಂಗಳ ಕಾರು ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದ್ದು, ಕಂಪನಿಯ ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ಟ್ (Swift) ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ. ಈ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟಗೊಂಡ ಪ್ರಮುಖ 10 ಕಾರುಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಟಾಟಾ ಪಂಚ್ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.
ಮಾರುತಿ ಸುಜುಕಿ, ಜೂನ್ ತಿಂಗಳು (2024) ಬರೋಬ್ಬರಿ 16,422 ಯುನಿಟ್ ಸ್ವಿಫ್ಟ್ ಕಾರುಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಿದ 15,955 ಯುನಿಟ್‌ಗೆ ಹೋಲಿಕೆ ಮಾಡಿದರೆ ಶೇಕಡ 3% ಪ್ರಗತಿಯನ್ನು ಸಾಧಿಸಿದೆ. ಮೇನಲ್ಲಿ ಬಿಡುಗಡೆಯಾಗಿದ್ದ ನಾಲ್ಕನೇ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನಿಂದ ಮಾರಾಟ ಪ್ರಮಾಣವು ಸ್ವಲ್ಪ ಮಟ್ಟಿಗೆ ಅಧಿಕಗೊಂಡಿದೆ.

ಗ್ರಾಹಕರಿಂದ ಈ ಕಾರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆಯಿರುವುದರಿಂದ ಕಾಯುವಿಕೆ ಅವಧಿಯೂ ಹೆಚ್ಚಾಗಿದೆ. ಖರೀದಿದಾರರು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು ಕನಿಷ್ಠವೆಂದರೂ ಮೂರು ವಾರಗಳು ಕಾಯಬೇಕು ಎಂದು ವರದಿಯಾಗಿದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ರೂ.6.49 ಲಕ್ಷದಿಂದ ರೂ.9.60 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರು ಶಕ್ತಿಯುತ ಪವರ್‌ಟ್ರೇನ್ ಹೊಂದಿದ್ದು, 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 80 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹ್ಯಾಚ್‌ಬ್ಯಾಕ್ ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಿಗುತ್ತದೆ. ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಒಳಗೊಂಡಂತೆ ಹಲವು ಬಣ್ಣಗಳನ್ನು ಹೊಂದಿದೆ. ವಿನ್ಯಾಸದ ದೃಷ್ಟಿಯಿಂದ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ. ಇದರಲ್ಲಿ 5 ಜನರು ಓಡಾಟವನ್ನು ನಡೆಸಬಹುದು.
ಈ ಕಾರು ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. 6-ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು ಸೀಟ್ ಬೆಲ್ಟ್ ರಿಮೈಂಡರ್‌ನ್ನು ಹೊಂದಿದೆ. ಈ ಕಾರಿಗೆ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ನೇರ ಪ್ರತಿಸ್ಪರ್ಧಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications