Swift CNG: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ಕಾರು ಬರಲಿದೆ.. 32 ಕಿ.ಮೀ ಮೈಲೇಜ್ ನಿರೀಕ್ಷೆ, ಬೆಲೆ ಏನು?

ಮಾರುತಿ ಸುಜುಕಿಯು ಮೇ.9 ರಂದು ದೇಶೀಯ ಮಾರುಕಟ್ಟೆಯಲ್ಲಿ ನಾಲ್ಕನೇ ತಲೆಮಾರಿನ (Fourth Generation) ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಸದ್ಯ, ಈ ಕಾರನ್ನು ಮುಂಬರುವ ತಿಂಗಳಲ್ಲಿ ಸಿಎನ್‌ಜಿ (CNG) ಪವರ್‌ಟ್ರೇನ್‌ ಆಯ್ಕೆಯಲ್ಲಿ ಪರಿಚಯಿಸಲು ತಯಾರಿಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಕಾರು ಹೊಂದಿರುವಂತೆ, ಸಿಎನ್‌ಜಿ ಚಾಲಿತ ಮಾದರಿಯು 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಎಂಜಿನ್ ಪೆಟ್ರೋಲ್ ಎಂಜಿನ್ ಪಡೆದಿರಲಿದೆ. ಆದರೆ, ಕಡಿಮೆ ಪವರ್ (ಶಕ್ತಿ) ಹಾಗೂ ಪೀಕ್ ಟಾರ್ಕ್ ಉತ್ಪಾದಿಸಲಿದ್ದು, ಕೇವಲ ಮ್ಯಾನುವಲ್ ಗೇರ್ ಬಾಕ್ಸ್‌ನೊಂದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ.

Maruti Suzuki Swift Cng Car Launch Soon 32 km Mileage Expected what about Price

ಪ್ರಸ್ತುತ ಖರೀದಿಗೆ ದೊರೆಯುವ ಹೊಚ್ಚ ಹೊಸ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ ರೂ.6.49 ಲಕ್ಷದಿಂದ ರೂ.9.64 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆದರೆ, ಪೆಟ್ರೋಲ್ ಕಾರಿಗೆ ಹೋಲಿಸಿದರೆ, ಸಿಎನ್‌ಜಿ ಆವೃತ್ತಿಯು ಸುಮಾರು ರೂ.90,000 ದಿಂದ ರೂ.95,000 ವರೆಗೆ ದುಬಾರಿಯಾಗಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಈಗಿರುವ ಮಾದರಿ (ಮಾಡೆಲ್)ಯ ರೀತಿಯಲ್ಲಿಯೇ ವೈಶಿಷ್ಟ್ಯಗಳನ್ನು ಪಡೆದಿರುವ ಸಾಧ್ಯತೆಯಿದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್‌ 24.8 ರಿಂದ 25.75 ಕೆಎಂಪಿಎಲ್ ಇಂಧನ ದಕ್ಷತೆ (Fuel Efficiency)ಯನ್ನು ಹೊಂದಿದೆ. ಸಿಎನ್‌ಜಿ ಪವರ್‌ಟ್ರೇನ್‌ ಆಯ್ಕೆಯಲ್ಲಿ ಬರಲಿರುವ ಕಾರು, ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ 32 ಕೆಎಂ/ಕೆಜಿ ಮೈಲೇಜ್ ಕೊಡಬಹುದು ಎನ್ನಲಾಗಿದೆ. ಹೊಸ ಸ್ವಿಫ್ಟ್ ಸಿಎನ್‌ಜಿ ಮಾದರಿಯ ಬಿಡುಗಡೆ ಕುರಿತಂತೆ ವಾಹನ ತಯಾರಕರಿಂದ ಈವರೆಗೂ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

Maruti Suzuki Swift Cng Car Launch Soon 32 km Mileage Expected what about Price

ಕಳೆದ ವಾರ ಪರಿಚಯಿಸಲಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌, ಅತ್ಯಾಧುನಿಕ ವಿನ್ಯಾಸ (ಡಿಸೈನ್)ವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, 15-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ರೂಪಾಂತರಗಳೊಂದಿಗೂ ಸಿಗುತ್ತದೆ.

ಈ ಸ್ವಿಫ್ಟ್‌ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Swift Cng Car Launch Soon 32 km Mileage Expected what about Price

ನೂತನ ಮಾರುತಿ ಸುಜುಕಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು ಸೀಟ್ ಬೆಲ್ಟ್ ರಿಮೈಂಡರ್‌ ಅನ್ನು ಒಳಗೊಂಡಿದೆ. ಈ ಕಾರಿಗೆ ಹ್ಯುಂಡೈ ಎಕ್ಸ್‌ಟರ್ ಹಾಗೂ ಟಾಟಾ ಪಂಚ್ ಕಾರುಗಳು ಪ್ರಬಲ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, May 18, 2024, 16:21 [IST]
English summary
New maruti suzuki swift cng car launch soon expected price and mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+