32 ಕಿ.ಮೀ ಮೈಲೇಜ್... 6 ಏರ್‌ಬ್ಯಾಗ್... ಪ್ರೀಮಿಯಂ ಫೀಚರ್ಸ್: ಅಗ್ಗದ ಮಾರುತಿ ಕಾರು!

ನಾಲ್ಕನೇ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ಅನ್ನು ಮೇ 2024 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಯಿತು. ಇದಾದ ಬಳಿಕ ಇತ್ತೀಚೆಗಷ್ಟೆ 2024ರ ಬಹುನಿರೀಕ್ಷಿತ ಸ್ವಿಫ್ಟ್ ಸಿಎನ್‌ಜಿ ಮಾದರಿಯನ್ನು ಬಿಡುಗಡೆ ಮಾಡಲಾಗಿದೆ. ಹೊಸ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಸಿಎನ್‌ಜಿ ಅನ್ನು Vxi, Vxi (O), Zxi ಎಂಬ ಮೂರು ವೇರಿಯೆಂಟ್‌ಗಳಲ್ಲಿ ನೀಡಲಾಗುತ್ತಿದೆ. ಕಂಪನಿಯ ಪ್ರಕಾರ ಸಿಎನ್‌ಜಿನಲ್ಲಿ ಬರೋಬ್ಬರಿ 32.85 ಕಿ.ಮೀ ಮೈಲೇಜ್ ನೀಡುತ್ತದೆ. ಬೆಲೆಗಳು 8.20 ಲಕ್ಷ ರೂ.ಗಳಿಂದ 9.20 ಲಕ್ಷ ರೂ.ಗಳವರೆಗೆ (ಎಕ್ಸ್ ಶೋರೂಂ) ಇದೆ.

ಹೊಸ ಸಿಎನ್‌ಜಿ ಆವೃತ್ತಿಯಲ್ಲಿ 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ನೀಡಲಾಗಿದ್ದು, 69 ಪಿಎಸ್ ಪವರ್ ಮತ್ತು 102 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರ ನೀಡಲಾಗಿದೆ. ಯಾಂತ್ರಿಕ ಬದಲಾವಣೆಗಳನ್ನು ಹೊರತುಪಡಿಸಿ ಫೀಚರ್ಸ್ ವಿಷಯದಲ್ಲಿ ಯಾವುದೇ ಪರಿಷ್ಕರಣೆಗಳನ್ನು ಮಾಡಿಲ್ಲ.

maruti-suzuki-swift-cng-mileage-price-features-details

2024ರ ಪೆಟ್ರೋಲ್ ಚಾಲಿತ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.6.49 ಲಕ್ಷದಿಂದ ರೂ.9.59 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ 3 ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.8 - 25.72 ಕಿ.ಮೀ ಮೈಲೇಜ್ ನೀಡುತ್ತದೆ.

ಸಿಎನ್‌ಜಿ ಕಾರಿನ ಫೀಚರ್ಸ್: ಯಾಂತ್ರಿಕ ಬದಲಾವಣೆಗಳನ್ನು ಹೊರತುಪಡಿಸಿ, ಸ್ವಿಫ್ಟ್ ಸಿಎನ್‌ಜಿನ ವೈಶಿಷ್ಟ್ಯಗಳಿಗೆ ಯಾವುದೇ ಪರಿಷ್ಕರಣೆಗಳನ್ನು ನೀಡಿಲ್ಲ. ಪ್ರಮುಖ ವೈಶಿಷ್ಟ್ಯಗಳಲ್ಲಿ 7-ಇಂಚಿನ ಟಚ್ ಸ್ಕ್ರೀನ್, ಹಿಂಭಾಗದ ಎಸಿ ವೆಂಟ್‌ಗಳೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಕನೆಕ್ಟೆಡ್ ಕಾರ್ ಟೆಕ್ ಸೇರಿವೆ. ವೇರಿಯೆಂಟ್ ವಾರು ನೋಡುವುದಾದ್ರೆ...

maruti-suzuki-swift-cng-mileage-price-features-details

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ Vxi ಮಾದರಿಯು ಆರು ಏರ್‌ಬ್ಯಾಗ್‌ಗಳು, ಇಎಸ್‌ಸಿ, ರಿಮೋಟ್ ಸೆಂಟ್ರಲ್ ಲಾಕಿಂಗ್, 14-ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಪವರ್ ವಿಂಡೋಗಳನ್ನು ಹೊಂದಿದೆ. ಮಿಡ್ ಲೆವೆಲ್ VXi (O) ರೂಪಾಂತರವು ಎತ್ತರ-ಹೊಂದಾಣಿಕೆ ಡ್ರೈವರ್ ಸೀಟ್, Android Auto ಮತ್ತು Apple CarPlay ಜೊತೆಗೆ 7-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಮತ್ತು ಸ್ಟೀರಿಂಗ್-ಮೌಂಟೆಡ್ ಅನ್ನು ಸೇರಿಸುತ್ತದೆ.

ಇನ್ನು ಟಾಪ್ ಸ್ಪೆಕ್ Zxi ವಿಷಯಕ್ಕೆ ಬಂದರೆ ಇದು DRL ಗಳೊಂದಿಗೆ LED ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 15-ಇಂಚಿನ ಲಾಯ್ ವ್ಹೀಲ್ ಗಳು, ವೈರ್‌ಲೆಸ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಹಿಂಭಾಗದ ವಾಷರ್ ವೈಪರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಫ್ಯಾಕ್ಟರಿ ಫಿಟಡ್ CNG ಕಿಟ್‌ನೊಂದಿಗೆ ಮಾರುತಿ ಈ ಹೈ-ಸ್ಪೆಕ್ ವೇರಿಯೆಂಟ್ ಸಜ್ಜುಗೊಂಡಿದೆ.

maruti-suzuki-swift-cng-mileage-price-features-details

ಪ್ರತಿಸ್ಪರ್ಧಿಗಳು: ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿಯ ಏಕೈಕ ನೇರ ಪ್ರತಿಸ್ಪರ್ಧಿ ಹ್ಯುಂಡೈ ಗ್ರ್ಯಾಂಡ್ ಐ 10 ನಿಯೋಸ್ ಸಿಎನ್‌ಜಿ ಆಗಿದೆ. ಹ್ಯುಂಡೈ ಹ್ಯಾಚ್‌ಬ್ಯಾಕ್ ಹೊರತಾಗಿ, ಟಾಟಾ ಪಂಚ್ ಮತ್ತು ಹ್ಯುಂಡೈ ಎಕ್ಸ್‌ಟರ್‌ನ ಸಿಎನ್‌ಜಿ ರೂಪಾಂತರಗಳು ಕೂಡ ಮಾರುತಿ ಸುಜುಕಿ ಸ್ವಿಫ್ಟ್‌ಗೆ ಪ್ರತಿಸ್ಪರ್ಧಿಗಳಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, September 24, 2024, 10:00 [IST]
English summary
Maruti suzuki swift cng mileage price features details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+