32 Km ಮೈಲೇಜ್, 6 ಏರ್‌ಬ್ಯಾಗ್, ಪ್ರೀಮಿಯಂ ಫೀಚರ್ಸ್: ಮಾರುತಿ ಸ್ವಿಫ್ಟ್ ಸಿಎನ್‌ಜಿ ಆನ್ ರೋಡ್ ಬೆಲೆ ಎಷ್ಟು?
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ದೀರ್ಘಕಾಲದಿಂದಲೇ ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಎಷ್ಟೇ ಅತ್ಯಾಧುನಿಕ ಕಾರುಗಳು ಮಾರುಕಟ್ಟೆಗೆ ಬಂದರೂ ಈ ಮಾರುತಿ ಸ್ವಿಫ್ಟ್ ಕಾರಿಗೆ ದೊಡ್ಡ ಅಭಿಮಾನಿಗಳ ಬಳಗವಿದೆ. ಈ ವರ್ಷದ ಮೇನಲ್ಲಿ ಪೆಟ್ರೋಲ್ ಚಾಲಿತ ಹೊಸ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು, ಇದು ಭರ್ಜರಿಯಾಗಿ ಮಾರಾಟವಾಗುತ್ತಿದೆ. ಈ ನಡುವೆ ಇತ್ತೀಚೆಗೆ ಮಾರುತಿ ಸುಜುಕಿ ಕಂಪನಿಯು ಸಿಎನ್‌ಜಿ ಚಾಲಿತ ಸ್ವಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಈ ಹೊಸ ಕಾರು ವಿಎಕ್ಸ್ಐ, ವಿಎಕ್ಸ್ಐ (ಒ) ಮತ್ತು ಝಡ್ಎಕ್ಸ್ಐ ಎಂಬ ರೂಪಾಂತರಗಳಲ್ಲಿ ಆಯ್ಕೆಯಲ್ಲಿ ಲಭ್ಯವಿದೆ.
ಈ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ (Maruti Suzuki Swift CNG) ದೇಶಾದ್ಯಂತವಿರುವ ಮಾರುತಿ ಸುಜುಕಿ ಶೋರೂಮ್‌ಗಳನ್ನು ತಲುಪಲು ಪ್ರಾರಂಭವಾಗಿದೆ. ಈ ಹ್ಯಾಚ್‌ಬ್ಯಾಕ್ ಮಾದರಿಯ ವಿತರಣೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ಭಾರತದಲ್ಲಿ ಮಧ್ಯಮ ವರ್ಗದ ಜನರಿಗೆ ಉತ್ತಮ ಆಯ್ಕೆಯಾಗಿದೆ. ಈ ಲೇಖನದಲ್ಲಿ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರಿನ ಆನ್ ರೋಡ್ ಬೆಲೆ ಮತ್ತು ಕಾರಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.8,19,500 ಆದರೆ ಆನ್ ರೋಡ್ ಬೆಲೆಯು ರೂ.9,89,764 ಆಗಿದೆ. ವಿಶೇಷವಾಗಿ ದೇಶದ ಕಾರು ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಸಿಎನ್‌ಜಿ ಪೋರ್ಟ್‌ಫೋಲಿಯೊವನ್ನು ಹೊಂದಿದೆ. ಕಂಪನಿ ಬಹುತೇಕ ಕಾರುಗಳು ಸಿಎನ್‌ಜಿ ಎಂಜಿನ್ ಚಾಲಿತವಾಗಿವೆ. ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿಯ ಏಕೈಕ ನೇರ ಪ್ರತಿಸ್ಪರ್ಧಿ ಹ್ಯುಂಡೈ ಗ್ರ್ಯಾಂಡ್ ಐ 10 ನಿಯೋಸ್ ಸಿಎನ್‌ಜಿ ಆಗಿದೆ.
ಹ್ಯುಂಡೈ ಹ್ಯಾಚ್‌ಬ್ಯಾಕ್ ಹೊರತಾಗಿ, ಟಾಟಾ ಪಂಚ್ ಮತ್ತು ಹ್ಯುಂಡೈ ಎಕ್ಸ್‌ಟರ್‌ನ ಸಿಎನ್‌ಜಿ ರೂಪಾಂತರಗಳು ಕೂಡ ಮಾರುತಿ ಸುಜುಕಿ ಸ್ವಿಫ್ಟ್‌ಗೆ ಪ್ರತಿಸ್ಪರ್ಧಿಗಳಾಗಿವೆ. ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ವಿಎಕ್ಸ್‌ಐ ಮಾದರಿಯು ಆರು ಏರ್‌ಬ್ಯಾಗ್‌ಗಳು, ಇಎಸ್‌ಸಿ, ರಿಮೋಟ್ ಸೆಂಟ್ರಲ್ ಲಾಕಿಂಗ್, ಹ್ಯಾಲೊಜೆನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 14-ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಪವರ್ ವಿಂಡೋಗಳನ್ನು ಹೊಂದಿದೆ.

ಮಿಡ್ ಲೆವೆಲ್ VXi (O) ರೂಪಾಂತರವು ಎತ್ತರ-ಹೊಂದಾಣಿಕೆ ಚಾಲಕ ಸೀಟ್, Android Auto ಮತ್ತು Apple CarPlay ಜೊತೆಗೆ 7-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಮತ್ತು ಸ್ಟೀರಿಂಗ್-ಮೌಂಟೆಡ್ ಅನ್ನು ಹೊಂದಿದೆ.ಸ್ವಿಫ್ಟ್ ಟಾಪ್ ಸ್ಪೆಕ್ ಮೊದಲ ಬಾರಿಗೆ CNG-ಚಾಲಿತ ಆಯ್ಕೆಯನ್ನು ಪರಿಚಯಿಸುತ್ತದೆ. ಇದು DRL ಗಳೊಂದಿಗೆ LED ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 15-ಇಂಚಿನ ಲಾಯ್ ವ್ಹೀಲ್ ಗಳು, ವೈರ್‌ಲೆಸ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಹಿಂಭಾಗದ ವಾಷರ್ ವೈಪರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇದರೊಂದಿಗೆ ಫ್ಯಾಕ್ಟರಿ ಫಿಟಡ್ CNG ಕಿಟ್‌ನೊಂದಿಗೆ ಸುಸಜ್ಜಿತ ಹ್ಯಾಚ್‌ಬ್ಯಾಕ್‌ಗಾಗಿ ಗ್ರಾಹಕರ ಬೇಡಿಕೆಯಿಂದಾಗಿ ಮಾರುತಿ ಈ ಹೈ-ಸ್ಪೆಕ್ ರೂಪಾಂತರವನ್ನು ಪರಿಚಯಿಸಿತು. ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ (Maruti Swift CNG) ಕಾರು 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 69 ಪಿಎಸ್ ಪವರ್ ಹಾಗೂ 102 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಸಿಎನ್‌ಜಿ ಮಾದರಿಯು 32.85 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. 2024ರ ಪೆಟ್ರೋಲ್ ಚಾಲಿತ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಲ್ಲಿ 1.2-ಲೀಟರ್ 3 ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.8 - 25.72 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications