ಕೈಗೆಟುಕುವ ಬೆಲೆಗೆ ಅತ್ಯುತ್ತಮ ಕಾರು: ಬೈಕಿನಂತೆ ಮೈಲೇಜ್ ನೀಡುವ ಮಾರುತಿ ಸ್ವಿಫ್ಟ್ ಸಿಎನ್‌ಜಿ

ಮಾರುತಿ ಸುಜುಕಿ ಸ್ವಿಫ್ಟ್ ದೀರ್ಘಕಾಲದಿಂದಲೇ ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಭಾರತದಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಮಾರುಕಟ್ಟೆಗೆ ಬಂದರೂ ಈ ಮಾರುತಿ ಸ್ವಿಫ್ಟ್ ಕಾರಿಗೆ ದೊಡ್ಡ ಅಭಿಮಾನಿಗಳ ಬಳಗವಿದೆ.ಈ ವರ್ಷದ ಮೇನಲ್ಲಿ ಪೆಟ್ರೋಲ್ ಚಾಲಿತ ಹೊಸ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. 4 ತಿಂಗಳಲ್ಲಿ ಬರೋಬ್ಬರಿ 67,000 ಯುನಿಟ್‌ ಮಾರಾಟವಾಗಿವೆ. ಇದೀಗ ಮಾರುತಿ ಸುಜುಕಿ ಕಂಪನಿಯು ಸಿಎನ್‌ಜಿ ಚಾಲಿತ ಸ್ವಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸಿದೆ. ಈ ಹೊಸ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಬೆಲೆ ಮತ್ತು ರೂಪಾಂತರಗಳು: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ (Maruti Suzuki Swift CNG) ಹ್ಯಾಚ್‌ಬ್ಯಾಕ್‌ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಗೊಂಡಿದೆ. ರೂ.8.19 ಲಕ್ಷದಿಂದ ರೂ.9.19 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ವಿಎಕ್ಸ್ಐ, ವಿಎಕ್ಸ್ಐ (ಒ) ಮತ್ತು ಝಡ್ಎಕ್ಸ್ಐ ಎಂಬ ರೂಪಾಂತರಗಳಲ್ಲಿ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯಲಿದ್ದು, 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

Maruti Suzuki Swift CNG

ಎಂಜಿನ್: ಹೊಚ್ಚ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ (Maruti Swift CNG) ಕಾರು 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಅನ್ನು ಹೊಂದಿದೆ. 69 ಪಿಎಸ್ ಪವರ್ ಹಾಗೂ 102 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 32.85 ಕಿ.ಮೋ ಮೈಲೇಜ್ ಅನ್ನು ನೀಡುತ್ತದೆ.

ಫೀಚರ್ಸ್: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ವಿಎಕ್ಸ್‌ಐ ಮಾದರಿಯು ಆರು ಏರ್‌ಬ್ಯಾಗ್‌ಗಳು, ಇಎಸ್‌ಸಿ, ರಿಮೋಟ್ ಸೆಂಟ್ರಲ್ ಲಾಕಿಂಗ್, ಹ್ಯಾಲೊಜೆನ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 14-ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಪವರ್ ವಿಂಡೋಗಳನ್ನು ಹೊಂದಿದೆ. ಮಿಡ್ ಲೆವೆಲ್ VXi (O) ರೂಪಾಂತರವು ಎತ್ತರ-ಹೊಂದಾಣಿಕೆ ಚಾಲಕ ಸೀಟ್, Android Auto ಮತ್ತು Apple CarPlay ಜೊತೆಗೆ 7-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಮತ್ತು ಸ್ಟೀರಿಂಗ್-ಮೌಂಟೆಡ್ ಅನ್ನು ಸೇರಿಸುತ್ತದೆ.

Maruti Suzuki Swift CNG

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಟಾಪ್ ಸ್ಪೆಕ್ ಮೊದಲ ಬಾರಿಗೆ CNG-ಚಾಲಿತ ಆಯ್ಕೆಯನ್ನು ಪರಿಚಯಿಸುತ್ತದೆ. ಇದು DRL ಗಳೊಂದಿಗೆ LED ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 15-ಇಂಚಿನ ಲಾಯ್ ವ್ಹೀಲ್ ಗಳು, ವೈರ್‌ಲೆಸ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಹಿಂಭಾಗದ ವಾಷರ್ ವೈಪರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಫ್ಯಾಕ್ಟರಿ ಫಿಟಡ್ CNG ಕಿಟ್‌ನೊಂದಿಗೆ ಸುಸಜ್ಜಿತ ಹ್ಯಾಚ್‌ಬ್ಯಾಕ್‌ಗಾಗಿ ಗ್ರಾಹಕರ ಬೇಡಿಕೆಯಿಂದಾಗಿ ಮಾರುತಿ ಈ ಹೈ-ಸ್ಪೆಕ್ ರೂಪಾಂತರವನ್ನು ಪರಿಚಯಿಸಿತು.

ವಿಶೇಷವಾಗಿ ದೇಶದ ಕಾರು ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಇಂಡಿಯಾ ಅತಿದೊಡ್ಡ ಸಿಎನ್‌ಜಿ ಪೋರ್ಟ್‌ಫೋಲಿಯೊವನ್ನು ಹೊಂದಿದೆ. ಕಂಪನಿ ಬಹುತೇಕ ಕಾರುಗಳು ಸಿಎನ್‌ಜಿ ಎಂಜಿನ್ ಚಾಲಿತವಾಗಿವೆ. ಅವುಗಳಲ್ಲಿ ಬ್ರೆಝಾ ಎಸ್‌ಯುವಿ, ಡಿಜೈರ್ ಸೆಡಾನ್ ಹಾಗೂ ಎರ್ಟಿಗಾ ಎಂಪಿವಿಗೆ ಹೆಚ್ಚಿನ ಬೇಡಿಕೆಯಿದೆ. 2024ರ ಆಗಸ್ಟ್‌ನಲ್ಲಿ ಮಾರುತಿ ಸುಜುಕಿ 49,602 ಯುನಿಟ್ ಸಿಎನ್‌ಜಿ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ.

Maruti Suzuki Swift CNG

2024ರ ಪೆಟ್ರೋಲ್ ಚಾಲಿತ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಬಗ್ಗೆ ಮಾತನಾಡುವುದಾದರೆ, ಇದು ರೂ.6.49 ಲಕ್ಷದಿಂದ ರೂ.9.59 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ 3 ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.8 - 25.72 ಕಿ.ಮೀ ಮೈಲೇಜ್ ಕೊಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, September 12, 2024, 16:58 [IST]
English summary
Maruti suzuki swift cng top things to know
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+