Maruti Suzuki: ಮಾರುತಿ ಸುಜುಕಿ ಗ್ರಾಹಕರಿಗೆ ಶಾಕ್

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಏಪ್ರಿಲ್ 10ರಿಂದ ಜಾರಿಗೆ ಬರುವಂತೆ ತನ್ನ ಜನಪ್ರಿಯ ಮಾದರಿಗಳಾದ ಸ್ವಿಫ್ಟ್ (Swift), ಗ್ರ್ಯಾಂಡ್ ವಿಟಾರಾ (Grand Vitara) ಕಾರುಗಳ ದರವನ್ನು ಹೆಚ್ಚಳ ಮಾಡಿದೆ. ಇನ್-ಪುಟ್ ವೆಚ್ಚವನ್ನು ಸರಿದೂಗಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಆರಂಭಿಕ ಆವೃತ್ತಿ 'ಸಿಗ್ಮಾ' ಬೆಲೆ ರೂ.19,000 ಹೆಚ್ಚಳಗೊಂಡಿದೆ. ಈ ರೂಪಾಂತರ ಹೊರತುಪಡಿಸಿ, ಉಳಿದೆಲ್ಲ ಮಾದರಿಗಳ ಬೆಲೆಗಳು ಬದಲಾಗದೆ ಹಾಗೆಯೇ ಉಳಿದಿದೆ. ದರ ಏರಿಕೆ ನಂತರ, ಗ್ರ್ಯಾಂಡ್ ವಿಟಾರಾ 10.95 ಲಕ್ಷ ಪ್ರಾರಂಭಿಕ ದರವನ್ನು ಹೊಂದಿದ್ದು, ಟಾಪ್ ಎಂಡ್ (ಗರಿಷ್ಠ ಶ್ರೇಣಿ) ರೂಪಾಂತರ ರೂ.19.97 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ.

Maruti Suzuki Swift Grand Vitara Car Price Hike From April 10 Details

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರಿನ ಬೆಲೆಯೂ ರೂ.25,000 ಅಧಿಕಗೊಂಡಿದೆ. ಆದರೆ, ಈ ದರ ಏರಿಕೆಯು ಆಯ್ದ ರೂಪಾಂತರ ಅಥವಾ ಎಲ್ಲ ಮಾದರಿಗಳಿಗೆ ಅನ್ವಯವಾಗುತ್ತದೆಯೇ ಎಂಬುದನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ.

ನೂತನ ಸ್ವಿಫ್ಟ್ ಕಾರು ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ ಹಾಗೂ ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಪಡೆದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ.

Maruti Suzuki Swift Grand Vitara Car Price Hike From April 10 Details

ಮೈಲೇಜ್ ವಿಚಾರವಾಗಿ ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 22.38 ರಿಂದ 22.56 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 30.90 ಕೆಎಂ/ಕೆಜಿ ಇಂಧನ ದಕ್ಷತೆಯನ್ನು ಹೊಂದಿವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾವಾಗಿ ಮಾತನಾವುದಾದರೆ, ಈ ಕಾರು ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಪಾ ಸೇರಿದಂತೆ ಹಲವು ರೂಪಾಂತರ ಮತ್ತು ನೆಕ್ಸಾ ಬ್ಲೂ, ಲಕ್ಸ್ ಬೀಜ್, ಒಪ್ಯುಲೆಂಟ್ ರೆಡ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದು ಕೂಡ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ನೊಂದಿಗೆ ದೊರೆಯುತ್ತದೆ. 19.38 ರಿಂದ 27.97 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಈ ಗ್ರ್ಯಾಂಡ್ ವಿಟಾರಾ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, April 11, 2024, 10:27 [IST]
English summary
Maruti suzuki swift grand vitara car price hike from april 10 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+