ಮಧ್ಯಮ ವರ್ಗದವರ ನೆಚ್ಚಿನ ಸ್ವಿಫ್ಟ್ ಕಾರಿನ ಗ್ರಾಹಕರಿಗೆ ಶಾಕ್ ನೀಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಮಧ್ಯಮ ವರ್ಗದವರ ನೆಚ್ಚಿನ ಕಾರಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಈ ಕಾರು ಭಾರೀ ಬೇಡಿಕೆಯೊಂದಿಗೆ ಮಾರಾಟವಾಗುತ್ತಿವೆ. ಈ ನಡುವೆ ಮಾರುತಿ ಸುಜುಕಿ ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್‌ಗಳಲ್ಲಿ ಒಂದಾದ ಸ್ವಿಫ್ಟ್ ಸೇರಿದಂತೆ ತನ್ನ ಸಂಪೂರ್ಣ ಪೋರ್ಟ್‌ಫೋಲಿಯೊದ ಎಕ್ಸ್ ಶೋರೂಂ ಬೆಲೆಗಳನ್ನು ಹೆಚ್ಚಿಸಿದೆ.

ಈ ಬೆಲೆ ಏರಿಕೆಯು ಈಗಾಗಲೇ 16 ಜನವರಿ, 2024 ರಿಂದ ಜಾರಿಯಲ್ಲಿದೆ. ಸ್ವಿಫ್ಟ್ ಕಾರಿನ ಆಯ್ದ ರೂಪಾಂತರಗಳ ಬೆಲೆಯನ್ನು ರೂ.5,000 ವರೆಗೆ ಹೆಚ್ಚಿಸಿದೆ. ಈ ಮಾರುತಿ ಸ್ವಿಫ್ಟ್ ಕಾರಿನ ಬೆಲೆಯ ಏರಿಕೆಯ ಬಳಿಕ, ಈ ಸ್ವಿಫ್ಟ್ ಕಾರಿನ ಪ್ರಾರಂಭಿಕ ಬೆಲೆಯು ರೂ.5.99 ಲಕ್ಷವಾಗಿದೆ. ಈ ಮಾರುತಿ ಸುಜುಕಿ ಸ್ವಿಫ್ಟ್, ಎಲ್ಎಕ್ಸ್ಐ, ವಿಎಕ್ಸ್ಐ ಒಳಗೊಂಡಂತೆ 4 ರೂಪಾಂತರಗಳಲ್ಲಿ ಲಭ್ಯವಿದೆ.

Maruti Suzuki Swift

ಮಾರುತಿ ಸ್ವಿಫ್ಟ್ ಕಾರು ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ಫೈರ್ ರೆಡ್ ಸೇರಿದಂತೆ 3 - ಡುಯಲ್ ಟೋನ್, 6 - ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಈ ಕಾರು, 1.2 - ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ.

ರೂಪಾಂತರಗಳಿಗೆ ಅನುಗುಣವಾಗಿ 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 22.38 ಕಿ.ಮೀ - 22.56 ಕಿ.ಮೀ, ಸಿಎನ್‌ಜಿ ರೂಪಾಂತರಗಳು 30.90 ಕಿ.ಮೀ ಮೈಲೇಜ್ ನೀಡುತ್ತವೆ. ಇದರೊಂದಿಗೆ 268 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.

Maruti Suzuki Swift

ಮಾರುತಿ ಸುಜುಕಿ ಸ್ವಿಫ್ಟ್ ವಿನ್ಯಾಸ ದೃಷ್ಟಿಯಿಂದ ಕೂಡ ಅತ್ಯುತ್ತಮವಾಗಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ - ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ. ಸುರಕ್ಷತೆಯಲ್ಲಿಯೂ ಮಾರುತಿ ಸುಜುಕಿ ಸ್ವಿಫ್ಟ್ ಅತ್ಯಾಧುನಿಕವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್ಸ್, EBD, ABS, ಹಿಲ್-ಹೋಲ್ಡ್ ಕಂಟ್ರೋಲ್‌, ESC, ಫ್ರಂಟ್ & ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

ಇನ್ನು ಸುಜುಕಿ ನ್ಯೂ ಜನರೇಷನ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ತಾಯಿನಾಡು ಜಪಾನ್ ನಲ್ಲಿ ಪರಿಚಯಿಸಿದೆ. ಹೊಸ ಸುಜುಕಿ ಸ್ವಿಫ್ಟ್ (Suzuki Swift) ಕಾರುಪರಿಷ್ಕೃತ ಸ್ಟೈಲಿಂಗ್ ಮತ್ತು ಹೊಸ ಇಂಜಿನ್ ಆಯ್ಕೆಗಳೊಂದಿಗೆ ನವೀಕರಿಸಿದ ಇಂಟಿಯರ್ ಗಳೊಂದಿಗೆ ಬರುತ್ತಿದೆ. 2024ರ ಮಾರುತಿ ಸ್ವಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಗುಜರಾತ್‌ನ ಮಾರುತಿ ಸುಜುಕಿಯ ಹಂಸಲ್‌ಪುರ ಘಟಕದಲ್ಲಿ ತಯಾರಿಸಲಾಗುತ್ತದೆ.

Maruti Suzuki Swift

ಈ ಹೊಸ ಸ್ವಿಫ್ಟ್ ಕಾರಿನ ಉತ್ಪಾದನೆಯು ಮುಂದಿನ ತಿಂಗಳಿನಲ್ಲಿ ಪ್ರಾರಂಬವಾಗುವ ಸಾಧ್ಯತೆಗಳಿದೆ. ತಿಂಗಳಿಗೆ ಈ ಸ್ವಿಫ್ಟ್ ಮಾದರಿಯ ಸರಾಸರಿ 18,000 ಯುನಿಟ್‌ಗಳು ಮಾರಾಟವಾಗುತ್ತಿದೆ. ಇನ್ನು ಹೊಸ ಮಾದರಿಯು ಬಿಡುಗಡೆಯಾದ ಬಳಿಕ ಮಾರಾಟದಲ್ಲಿ ಹೆಚ್ಚಿನ ಬೆಳವಣಿಗೆಯನ್ನು ಕಾಣುವ ಸಾಧ್ಯತೆಗಳಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವೀಫ್ ಕಳೆದ ಹಲವು ವರ್ಷದಿಂದ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ.

ಈ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಗೊಂಡಿತ್ತು. ಈ ಮಾರುತಿ ಸುಜುಕಿ ಸ್ವಿಫ್ಟ್ ದೀರ್ಘಕಾಲದಿಂದಲೇ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು. ಮಾರುತಿ ಸುಜುಕಿ ಮಾರಾಟದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಲು ಪ್ರಯತ್ನಿಸುತ್ತಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 1, 2024, 8:30 [IST]
English summary
Maruti suzuki swift hatchback prices hiked details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+