Swift: ಬಿಡುಗಡೆಯೇ ಆಗಿಲ್ಲ.. ಶೋರೂಂ ಮುಂದೆ ಹೊಸ ಮಾರುತಿ ಸ್ವಿಫ್ಟ್ ಕಾರು, ಬೆಲೆ ಎಷ್ಟು.. ಹೇಗಿದೆ ಗೊತ್ತಾ?
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಜನಪ್ರಿಯತೆಯನ್ನು ಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಸ್ವಿಫ್ಟ್ ಹ್ಯಾಚ್‌ಬ್ಯಾಕ್, ಆಕರ್ಷಕ ವೈಶಿಷ್ಟ್ಯದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟುಪಟ್ಟು ಖರೀದಿಸುತ್ತಿದ್ದಾರೆ. ಈಗ ನಾಲ್ಕನೇ ತಲೆಮಾರಿನ ಸ್ವಿಫ್ಟ್ ಬಿಡುಗಡೆಗೆ ಸಿದ್ದಗೊಂಡಿದೆ.
ಮಾರುತಿ ಸುಜುಕಿಯು ನಾಲ್ಕನೇ ತಲೆಮಾರಿನ ಸ್ವಿಫ್ಟ್ (Fourth Generation Swift) ಪರಿಚಯಿಸಲು ತಯಾರಿಯನ್ನು ನಡೆಸುತ್ತಿದ್ದು, ಮೇ.9 ರಂದು ಅದ್ದೂರಿಯಾಗಿ ಲಾಂಚ್ ಮಾಡಲಿದೆ. ಬುಧವಾರದಿಂದ ಈ ಕಾರಿನ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು ರೂ.11,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು. ಆದಾಗ್ಯೂ ಬಿಡುಗಡೆಗೆ ಕೆಲವು ದಿನಗಳು ಬಾಕಿಯಿರುವಾಗಲೇ ಡೀಲರ್‌ಶಿಪ್ ಮುಂದೆ ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ನಿಂತಿರುವ ಫೋಟೋಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ.

ಶೋರೂಂ ಎದುರುಗಡೆಯಿರುವ ಈ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರು, ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಹೊಂದಿದೆ. ಮುಂಭಾಗ (ಫ್ರಂಟ್) ನವೀನವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ - ಆಕಾರದ ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಇಂಡಿಕೇಟರ್ ಗಳಲ್ಲಿ ಹ್ಯಾಲೊಜೆನ್ ಬಲ್ಬ್ ಗಳನ್ನು ಒಳಗೊಂಡಿದೆ. ಗ್ರಿಲ್ ಮೇಲ್ಭಾಗದಲ್ಲಿ 'ಸುಜುಕಿ' ಲೋಗೋ (ಲಾಂಛನ)ವನ್ನು ಪಡೆದಿದ್ದು, ಎಲ್ಇಡಿ ಫಾಗ್ ಲೈಟ್‌ನ್ನು ತನ್ನದಾಗಿಸಿಕೊಂಡಿದೆ.
ಈ ಕಾರಿನ ಬದಿ (ಸೈಡ್)ಗಳ ವಿನ್ಯಾಸವು ಅತ್ಯುತ್ತಮವಾಗಿದೆ. 16-ಇಂಚಿನ 10-ಸ್ಪೋಕ್ ಡೈಮಂಡ್ ಕಟ್ ಅಲಾಯ್ ವೀಲ್ಸ್, ಹಿಂಬದಿಯ ಬಾಗಿಲುಗಳಲ್ಲಿ ಸಾಂಪ್ರದಾಯಕ ಶೈಲಿ (Traditional-Style)ಯಲ್ಲಿರುವ ಹ್ಯಾಂಡಲ್ (ಹಿಡಿಕೆ)ಗಳನ್ನು ಸಹ ಪಡೆದಿದೆ. ಹಿಂಭಾಗವು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಸಿ - ಆಕಾರಕ್ಕೆ ಹೋಲುವ ಎಲ್ಇಡಿ ಟೈಲ್ ಲೈಟ್‌ಗಳನ್ನು ಹೊಂದಿದೆ.

ಒಳಭಾಗದಲ್ಲಿಯೂ ನೂತನ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಹಳೆಯ ಮಾದರಿಯಂತೆಯೇ ಬೂಟ್ ಸ್ಪೇಸ್ ಹೊಂದಿದ್ದು, ಮುಂಭಾಗದಲ್ಲಿರುವ ಡ್ಯಾಶ್‌ಬೋರ್ಡ್ ಮೇಲೆ 9-ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಹಾಗೂ ಜಬರ್ದಸ್ ಸ್ಟೀರಿಂಗ್ ವೀಲ್ ಒಳಗೊಂಡಿರುವುದನ್ನು ನೋಡಬಹುದು.
ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಪವರ್‌ಟ್ರೇನ್ ಆಯ್ಕೆಯ ಕುರಿತು ಅಧಿಕೃತ ವಿವರಗಳು ಲಭ್ಯವಿಲ್ಲ. ಇದು 1.2-ಲೀಟರ್ 3-ಸಿಲಿಂಡರ್ ಝಡ್-ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿರುವ ನಿರೀಕ್ಷೆಯಿದ್ದು, 81.6 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 112 ಎನ್ಎಂ ಪೀಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯಬಹುದು ಎಂದು ಹೇಳಲಾಗಿದೆ.

ಈ ನೂತನ ಸ್ವಿಫ್ಟ್ ಕಾರು 28 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, ರೂ.6.5 ಲಕ್ಷದಿಂದ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಲಿದೆ ಎನ್ನಲಾಗಿದೆ. ಆದರೆ, ಖಚಿತತೆಯಿಲ್ಲ. ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗೆ ರೆನಾಲ್ಟ್ ಟ್ರೈಬರ್, ಟಾಟಾ ಪಂಚ್, ಹ್ಯುಂಡೈ ಎಕ್ಸ್‌ಟರ್, ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಪ್ರಬಲ ಎದುರಾಳಿಯಾಗಿ ಮುಂದುವರಿಯಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications