32 Km ಮೈಲೇಜ್, 6 ಏರ್‌ಬ್ಯಾಗ್, ಪ್ರೀಮಿಯಂ ಫೀಚರ್ಸ್: ಸಾಮಾನ್ಯ ಜನರ ಅಂಬಾರಿಗೆ ಭಾರೀ ಬೇಡಿಕೆ

ಭಾರತದಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಮಾರುಕಟ್ಟೆಗೆ ಬಂದರೂ ಮಾರುತಿ ಸುಜುಕಿಯ ಸ್ವಿಫ್ಟ್ ಕಾರಿಗೆ ದೊಡ್ಡ ಅಭಿಮಾನಿಗಳ ಬಳಗವನ್ನು ಹೊಂದಿದೆ. ಈ ಸ್ವಿಫ್ಟ್ ದೀರ್ಘಕಾಲದಿಂದಲೇ ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಬಹುಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift ) ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005 ರಲ್ಲಿ ಬಿಡುಗಡೆಯಾಗಿತ್ತು. ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಹೊಸ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಮೇ ತಿಂಗಳಿನಲ್ಲಿ ಬಿಡುಗಡೆಗೊಳಿಸಲಾಗಿತ್ತು.

ಮಾರುತಿ ಸುಜುಕಿ ಸ್ವಿಫ್ಟ್ ಕಾರು ಆಕರ್ಷಕ ವಿನ್ಯಾಸ, ಸುಧಾರಿತ ವೈಶಿಷ್ಟ್ಯಗಳು ಮತ್ತು ಗಮನಾರ್ಹ ಮೈಲೇಜ್ ಅನ್ನು ಹೊಂದಿದೆ. 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ನ್ಯೂ ಮಾರುತಿ ಸುಜುಕಿ ಸ್ವಿಫ್ಟ್ ಮಾದರಿಯ 16,241 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಸ್ವಿಫ್ಟ್ ಮಾದರಿಯ 14,703 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.10 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

Maruti Suzuki Swift

ಈ ಮಾರುತಿ ಸ್ವಿಫ್ಟ್ ಕಾರು LXi, VXi, VXi (O), ZXi, ಮತ್ತು ZXi+ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ನೂತನ ಸ್ವಿಫ್ಟ್ ಭರಪೂರ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ದರದಲ್ಲಿ ಸಿಗುವುದರಿಂದ ಹಲವರ ಕುಟುಂಬದ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ. ಹೊಸ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹೊಸ Z-ಸೀರಿಸ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ನೀಡಿದೆ.

ಈ ಎಂಜಿನ್ 80.46 bhp ಪವರ್ ಮತ್ತು 111.7 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಅಥವಾ 5-ಸ್ಪೀಡ್ AMT ಯುನಿಟ್ (AGS) ಅನ್ನು ಜೋಡಿಸಲಾಗಿದೆ. ಈ ಸ್ವಿಫ್ಟ್ ಕಾರಿನ ಮ್ಯಾನುವಲ್ ರೂಪಾಂತರವು 24.80km ನಷ್ಟು ಮೈಲೇಜ್ ನೀಡಿದರೆ, AGS ರೂಪಾಂತರವು 25.75 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

Maruti Suzuki Swift

ಇನ್ನು ಸ್ವಿಫ್ಟ್ ಸಿಎನ್‌ಜಿ (Maruti Swift CNG) ಕಾರು 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಅನ್ನು ಹೊಂದಿದೆ.ಈ ಎಂಜಿನ್ 69 ಪಿಎಸ್ ಪವರ್ ಹಾಗೂ 102 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಸಿಎನ್‌ಜಿ ಮಾದರಿಯು 32.85 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಸ್ವಿಫ್ಟ್ ಕಾರಿನಲ್ಲಿ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ ಅನ್ನು ನೀಡಲಾಗಿದೆ.

ಮಾರುತಿ ಸ್ವಿಫ್ಟ್ ಅನ್ನು ಸಿಜ್ಲಿಂಗ್ ರೆಡ್, ಲುಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಆರು ಮೊನೊಟೋನ್ ಪೇಂಟ್ ಸ್ಕೀಮ್‌ಗಳಲ್ಲಿ ಲಭ್ಯವಿದೆ. ಇನ್ನು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಸಿಜ್ಲಿಂಗ್ ರೆಡ್, ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಲುಸ್ಟರ್ ಬ್ಲೂ ಮತ್ತು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳನ್ನು ಹೊಂದಿವೆ.

Maruti Suzuki Swift

ಈ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಈ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಲ್ಲಿ 9 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, October 9, 2024, 13:29 [IST]
English summary
Maruti suzuki swift sales in september 2024 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+