ಪಂಚ್, ಕ್ರೇಟಾ, ಸ್ಕಾರ್ಪಿಯೋಗಳನ್ನು ಸೋಲಿಸಿ ಮುನ್ನುಗ್ಗುತ್ತಿದೆ ಈ ಕಾರು: ಆರ್ಭಟಕ್ಕೆ ಎಲ್ಲವೂ ಮೂಕವಿಸ್ಮಿತ!
ಭಾರತದಲ್ಲಿ ಅತೀ ಹೆಚ್ಚು ಮಾರಾಟವಾಗುತ್ತಿರುವ ಕಾರುಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಸಹ ಒಂದು. ಈ ಕಾರನ್ನು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಿದಾಗಿನಿಂದ ಇಲ್ಲಿಯವರೆಗೆ ಸುಮಾರು 30 ಲಕ್ಷಕ್ಕೂ ಅಧಿಕ ಯೂನಿಟ್‌ಗಳನ್ನು ಮಾರಾಟ ಮಾಡಿರುವುದು ಈ ಕಾರಿನ ಪ್ರಸಿದ್ದಿಗೆ ಹಿಡಿದ ಕೈಗನ್ನಡಿಯಾಗಿದೆ. ಇತ್ತೀಚೆಗಷ್ಟೇ ಭಾರತೀಯ ಮಾರುಕಟ್ಟೆಗೆ ಈ ಕಾರಿನ ನಾಲ್ಕನೇ ತಲೆಮಾರನ್ನೂ ಸಹ ಪರಿಚಯಿಸಿರುವ ಮಾರುತಿ ಸುಜುಕಿ ಇದೀಗ ಮತ್ತೊಂದು ಹಿರಿಮೆಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಇಂದಿನ ಲೇಖನದಲ್ಲಿ ನಾವು ಆ ಕುರಿತಾಗಿ ನೋಡಲಿದ್ದು, ಸಂಪೂರ್ಣ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೆ ಓದಿ.
ಭಾರತೀಯ ಕಾರು ಮಾರುಕಟ್ಟೆಯಲ್ಲಿ ಪ್ರತಿ ತಿಂಗಳ ಮಾರಾಟದ ಲೆಕ್ಕವನ್ನು ತೆಗೆದು ನೋಡಿದರೆ ಅದರಲ್ಲಿ ಮಾರುತಿ ಸುಜುಕಿ ಕಾರುಗಳ ಅಧಿಪತ್ಯವನ್ನು ನಾವು ಕಾಣಬಹುದು. ಪ್ರತೀ ತಿಂಗಳು ಸಹ ಮಾರುತಿ ಸುಜುಕಿಯು ಟಾಟಾ, ಹ್ಯುಂಡೈ ಇತರ ಕಾರು ನಿರ್ಮಾಣ ಕಂಪನಿಗಳನ್ನು ಹಿಂದಿಕ್ಕಿ ಅಗ್ರ ಸ್ಥಾನದಲ್ಲಿ ಮುಂದುವರೆಯುತ್ತಿದ್ದು, ಇದರಲ್ಲಿ ಸ್ವಿಫ್ಟ್‌ನದ್ದೇ ಸಿಂಹ ಪಾಲು.

ಇನ್ನು ಮೇ ತಿಂಗಳ ಮಾರಾಟದ ಲೆಕ್ಕವನ್ನು ನೋಡಿದರೆ ಮಾರುತಿ ಸುಜುಕಿ ಸ್ವಿಫ್ಟ್‌ನ (Maruti Suzuki Swift) ಸುಮಾರು 19,393 ಯೂನಿಟ್‌ಗಳನ್ನು ಕಂಪನಿ ಮಾರಾಟ ಮಾಡಿದೆ. ಇಷ್ಟು ಮಾತ್ರವಲ್ಲದೇ ಮಾರುತಿ ಸುಜುಕಿ ಸ್ವಿಫ್ಟ್ ಸುಮಾರು 40,000 ಬುಕಿಂಗ್‌ಗಳನ್ನು ಸಹ ಪಡೆದುಕೊಂಡಿದ್ದು, ಇದು ಮಾರುತಿ ಸುಜುಕಿ ಸ್ವಿಫ್ಟ್ ಎಷ್ಟು ಬೇಡಿಕೆಯಲ್ಲಿದೆ ಎಂಬುದನ್ನು ನಮಗೆ ತಿಳಿಸುತ್ತದೆ.
ನೂತನ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರು ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ರೂಪಾಂತರ (ವೇರಿಯೆಂಟ್)ಗಳು ಮತ್ತು ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಮಾರುತಿ ಸುಜುಕಿ ಸ್ವಿಫ್ಟ್ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 80 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.
ನೂತನ ಹ್ಯಾಚ್‌ಬ್ಯಾಕ್ ಒಳಭಾಗವು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಈ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಮಾರುತಿ ಸುಜುಕಿ ಸ್ವಿಫ್ಟ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಎಲ್ಲ ಮಾದರಿಗಳು 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್ ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. ಶೀಘ್ರದಲ್ಲಿಯೇ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ಗೂ ಒಳಪಡುವ ಸಾಧ್ಯತೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications