ಭರ್ಜರಿ ಡಿಸ್ಕೌಂಟ್: ವರಮಹಾಲಕ್ಷ್ಮಿಗೆ 25.75 ಕಿಮೀ ಮೈಲೇಜ್ ನೀಡುವ ಈ ಜನಪ್ರಿಯ ಕಾರು ಮನೆಗೆ ತನ್ನಿ

ಭಾರತದಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಮಾರುಕಟ್ಟೆಗೆ ಬಂದರೂ ಈ ಮಾರುತಿ ಸ್ವಿಫ್ಟ್ ಕಾರಿಗೆ ದೊಡ್ಡ ಅಭಿಮಾನಿಗಳ ಬಳಗವಿದೆ. ಸ್ವಿಫ್ಟ್ ದೀರ್ಘಕಾಲದಿಂದಲೇ ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಬಹುಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift ) ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005 ರಲ್ಲಿ ಬಿಡುಗಡೆಯಾಗಿತ್ತು. ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಹೊಸ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಮೇ 9 ರಂದು ಬಿಡುಗಡೆ ಮಾಡಿತು

ಈ ಮಾರುತಿ ಸ್ವಿಫ್ಟ್ ಕಾರು LXi, VXi, VXi (O), ZXi, ಮತ್ತು ZXi+ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಈ ಹೊಸ ಸ್ವಿಫ್ಟ್ ಕಾರಿನ ವಿನ್ಯಾಸ, ಒಳಭಾಗ ಮತ್ತು ತಾಂತ್ರಿಕ ವಿಷಯದಲ್ಲಿ ಗಮನಾರ್ಹ ಬದಲಾವಣೆಗಳೊಂದಿಗೆ ಬಂದಿದೆ. ಈ ಹೊಸ ಸ್ವಿಫ್ಟ್ ಕಾರಿಗೆ ಮಾರುತಿ ಸುಜುಕಿಯು ಡಿಸ್ಕೌಂಟ್ ಅನ್ನು ಘೋಷಿಸಿದೆ. ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಕೆಲವು ರೂಪಾಂತರಗ ಮೇಲೆ ರೂ.10 ಸಾವಿರದಿಂದ ರೂ.30 ಸಾವಿರದವರೆಗೆ ಡಿಸ್ಕೌಂಟ್ ನೀಡಲಾಗುತ್ತಿದೆ.

Maruti Suzuki Swift

ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಮೇಲೆ ಡಿಸ್ಕೌಂಟ್ ನಗರದಿಂದ ನಗರಕ್ಕೆ ಬದಲಾಗುತ್ತವೆ. ಹಾಗೆಯೇ ಸ್ಟಾಕ್ ಲಭ್ಯತೆಗೆ ಒಳಪಟ್ಟಿರುತ್ತವೆ. ನಿಖರವಾದ ರಿಯಾಯಿತಿ ಮಾಹಿತಿಗಾಗಿ ದಯವಿಟ್ಟು ನಿಮ್ಮ ಹತ್ತಿರದ ಡೀಲರ್ ಅನ್ನು ಸಂಪರ್ಕಿಸಿ. ಈ ಕಾರಿನ ಬುಕ್ಕಿಂಗ್ ಗಾಇ ರೂ.11 ಸಾವಿರ ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು. ನೂತನ ಸ್ವಿಫ್ಟ್ ಭರಪೂರ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ದರದಲ್ಲಿ ಸಿಗುವುದರಿಂದ ಹಲವರ ಕುಟುಂಬದ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.

ಹೊಸ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹೊಸ Z-ಸೀರಿಸ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ನೀಡಿದೆ. ಈ ಎಂಜಿನ್ 80.46 bhp ಪವರ್ ಮತ್ತು 111.7 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಅಥವಾ 5-ಸ್ಪೀಡ್ AMT ಯುನಿಟ್ (AGS) ಅನ್ನು ಜೋಡಿಸಲಾಗಿದೆ.

Maruti Suzuki Swift

ಈ ಸ್ವಿಫ್ಟ್ ಕಾರಿನ ಮ್ಯಾನುವಲ್ ರೂಪಾಂತರವು 24.80km ನಷ್ಟು ಮೈಲೇಜ್ ನೀಡಿದರೆ, AGS ರೂಪಾಂತರವು 25.75 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಮಾರುತಿ ಸ್ವಿಫ್ಟ್ ಅನ್ನು ಸಿಜ್ಲಿಂಗ್ ರೆಡ್, ಲುಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಆರು ಮೊನೊಟೋನ್ ಪೇಂಟ್ ಸ್ಕೀಮ್‌ಗಳಲ್ಲಿ ಲಬ್ಯವಿದೆ.

ಇನ್ನು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಸಿಜ್ಲಿಂಗ್ ರೆಡ್, ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಲುಸ್ಟರ್ ಬ್ಲೂ ಮತ್ತು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳನ್ನು ಹೊಂದಿವೆ. ಈ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

Maruti Suzuki Swift

ಈ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಲ್ಲಿ 9 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, August 6, 2024, 19:12 [IST]
English summary
Maruti suzuki swift with discounts in august 2024
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+